ಬೆಂಗಳೂರು: ವಿಚ್ಛೇದನ ಕೋರಿ ಸಲ್ಲಿಸಿದ್ದ ಪ್ರಕರಣವೊಂದರಲ್ಲಿ ಪಾಟಿ ಸವಾಲು ಎದುರಿಸಲು ಪತಿ ಅಮೆರಿಕದಿಂದ ಬರಬೇಕಿರುವ ಹಿನ್ನೆಲೆಯಲ್ಲಿ ಆತನ ಪ್ರಯಾಣಕ್ಕೆ ತಗುಲುವ ೧.೬೫ ಲಕ್ಷ ರೂ. ಭರಿಸುವಂತೆ ಪತ್ನಿಗೆ ನಿರ್ದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ತಕರಾರು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನ್ಯಾಯಪೀಠ, ಕೌಟುಂಬಿಕ ನ್ಯಾಯಾಲಯದ ಈ ಆದೇಶಕ್ಕೆ ಅಚ್ಚರಿ ವ್ಯಕ್ತಪಡಿಸಿದೆ. ಅಲ್ಲದೆ, ಅಂಬಿಕಾ ಮಾಸಿಕ ೨೦ ಸಾವಿರ ರೂ. ಜೀವನಾಂಶ ಪಾವತಿಸಲು ಆಶೋಕ್‌ಗೆ ಆದೇಶಿಸಿದೆ. ಈ ಮೊತ್ತ ಪಾವತಿಸಲು ಕೋರ್ಟ್ ಆದೇಶ ನೀಡಿದೆ ಎಂದರೆ, ಅರ್ಜಿದಾರರಿಗೆ ಜೀವನಾಧಾರಕ್ಕೆ ಯಾವುದೇ ಆದಾಯವಿಲ್ಲ ಎಂಬುದು ತಿಳಿಯುತ್ತದೆ. ಇಂತಹ ಸಂದರ್ಭದಲ್ಲಿ ಅಮೆರಿಕದಲ್ಲಿ ಉದ್ಯೋಗ ಮಾಡುತ್ತಾ ಆದಾಯ ಗಳಿಸುತ್ತಿರುವ ಸೂರ್ಯ ಅವರು ನಗರದ ಕೌಟುಂಬಿಕ ನ್ಯಾಯಾಲಯದ ಪಾಟಿ ಸವಾಲಿಗೆ ಬಂದು ಹೋಗಲು ಪ್ರಯಾಣ ವೆಚ್ಚ ಭರಿಸುವಂತೆ ಗೀತಾಗೆ ಆದೇಶಿಸಿರುವುದಲ್ಲಿ ಯಾವುದೇ ತರ್ಕವಿಲ್ಲ. ಗೀತಾ ಅವರು ಇಷ್ಟು ದೊಡ್ಡ ಮೊತ್ತವನ್ನು ಸೂರ್ಯ ಪ್ರಯಾಣಕ್ಕೆ ತಗುಲುವ ವೆಚ್ಚ ಭರಿಸಲು ಹೇಗೆ ಸಮರ್ಥರಿದ್ದಾರೆ ಎಂಬುದನ್ನು ಕೌಟುಂಬಿಕ ನ್ಯಾಯಾಲಯ ಯೋಚಿಸಬೇಕಿದೆ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ತಮ್ಮ ವಿವಾಹ ವಿಚ್ಛೇದನ ಅಂತಹ ಗಂಭೀರ ಪ್ರಕರಣದಲ್ಲಿ ಸೂರ್ಯ ಅವರನ್ನು ಪಾಟಿ ಸವಾಲಿಗೆ ಗುರುಪಡಿಸುವುದು ಅಂಬಿಕಾ ಅವರ ಹಕ್ಕು ಆಗಿರುತ್ತದೆ. ಯಾವುದೇ ಸಂದರ್ಭದಲ್ಲಾದರೂ ಹೊರಲು ಸಾಧ್ಯವಿಲ್ಲದ ಪರಿಸ್ಥಿತಿಯನ್ನು ನ್ಯಾಯಾಲಯವು ಪ್ರಕರಣದ ಪಕ್ಷಗಾರರ ಮೇಲೆ ಹೊರಿಸಬಾರದು. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶವು ಕಾನೂನು ಬಾಹಿರವಾಗಿದೆ. ಸೂರ್ಯ ಅವರೇ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಪಾಟಿ ಸವಾಲುಗೆ ಒಳಪಡಲು ಅಮೆರಿಕದಿಂದ ಭಾರತಕ್ಕೆ ಬಂದು ಹೋಗಲು ಪ್ರಯಾಣ ವೆಚ್ಚ ಭರಿಸಲಾಗದ ಬಡತನದಲ್ಲಿ ಅವರಿಲ್ಲ. ಒಂದೊದೆಡೆ ಗೀತಾ ವಿವಾಹ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ, ಆಗ ವಿಭಿನ್ನ ಪರಿಗಣನೆಯ ಅಂಶ ಉದ್ಭವಿಸುತ್ತಿತ್ತು ಎಂದು ಪೀಠ ಹೇಳಿದೆ.
ಜೊತೆಗೆ, ದಂಪತಿಗೆ ಅನುಕೂಲವಿರುವಂತೆ ಪಾಟಿ ಸವಾಲು ವ್ಯವಸ್ಥೆ ಮಾಡಬೇಕು. ಮುಂದಿನ ನಾಲ್ಕು ತಿಂಗಳಲ್ಲಿ ವಿಚ್ಛೇದನ ಕೋರಿಕೆ ಅರ್ಜಿ ಇತ್ಯರ್ಥ ಪಡಿಸಬೇಕು ಎಂದು ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ: ಅಂಬಿಕಾ ಮತ್ತು ಅಶೋಕ (ಇಬ್ಬರ ಹೆಸರು ಬದಲಿಸಲಾಗಿದೆ) ೨೦೧೪ರ ಜೂ.೧೫ರಂದು ವಿವಾಹವಾಗಿದ್ದರು. ಇಬ್ಬರ ನಡುವಿನ ಸಂಬಂಧ ಕೆಟ್ಟು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ವಿಚ್ಛೇದನ ಕೋರಿ ಸೂರ್ಯ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ಸೂರ್ಯ ಅಮೇರಿಕಾದಲ್ಲಿ ವಾಸವಾಗಿದ್ದಾರೆ. ಅವರನ್ನು ಪಾಟಿ ಸವಾಲಿಗೆ ಒಳಪಡಿಸಬೇಕು ಎಂದು ಗೀತಾ ಕೋರಿದ್ದರು. ಆ ಮನವಿಗೆ ಒಪ್ಪಿದ ನಗರದ ೬ನೇ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯವು ಸೂರ್ಯ ಅಮೇರಿಕಾದಿಂದ ಬಂದು ಹೋಗಲು ಪ್ರಯಾಣ ವೆಚ್ಚ ಭರಿಸುವಂತೆ ಗೀತಾ ಅವರಿಗೆ ೨೦೨೨ರ ನ.೧೬ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಗೀತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ, ಗೀತಾ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಪತಿ ಮಾಸಿಕ ೨೦ ಸಾವಿರ ರೂ. ಜೀವನಾಂಶ ಪಾವತಿಸುತ್ತಿದ್ದಾರೆ. ಕೆಲವು ತಿಂಗಳ ಜೀವನಾಂಶವು ಪಾವತಿಸುವುದು ಬಾಕಿಯಿದೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯ ಪ್ರಯಾಣ ವೆಚ್ಚ ೧.೬೫ ಲಕ್ಷ ರೂ. ದೊಡ್ಡ ಮೊತ್ತ ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯವು ನಿರ್ದೇಶಿಸಿರುವುದು ಸೂಕ್ತವಲ್ಲ ಎಂದು ತಿಳಿಸಿದರು.
ಈ ವಾದಕ್ಕೆ ಸೂರ್ಯ ಪರ ವಕೀಲರು ವಿರೋಧ ವ್ರಕ್ತಪಡಿಸಿದ್ದು, ಕೌಟುಂಬಿಕ ನ್ಯಾಯಾಲಯದ ಆದೇಶ ಸೂಕ್ತವಾಗಿದೆ ಎಂದು ತಿಳಿಸಿದ್ದರು.
ಇದನ್ನೂ ಓದಿ: ಅಪ್ರಾಪ್ತನ ಕೈಗೆ ಬೈಕ್ ಕೊಟ್ಟ ಮಾಲೀಕನಿಗೆ ₹20 ಸಾವಿರ ದಂಡ ವಿಧಿಸಿದ ತೀರ್ಥಹಳ್ಳಿ ಕೋರ್ಟ್