ETV Bharat / state

ವಿಚ್ಛೇದನ ಅರ್ಜಿಗೆ ಆಕ್ಷೇಪಣೆ ಸಲ್ಲಿಸದ ಕಾರಣ ನೀಡಿ ಅರ್ಜಿ ವಜಾಗೊಳಿಸುವಂತಿಲ್ಲ: ಹೈಕೋರ್ಟ್ - ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದು

ವಿಚ್ಛೇದನ ಅರ್ಜಿಗೆ ಆಕ್ಷೇಪಣೆ ಸಲ್ಲಿಸದಿರುವ ಕಾರಣ ನೀಡಿ ಅರ್ಜಿಯನ್ನು ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

divorce-petition-cannot-be-dismissed-if-no-objection-has-been-filed-high-court
ವಿಚ್ಛೇದನ ಅರ್ಜಿಗೆ ಆಕ್ಷೇಪಣೆ ಸಲ್ಲಿಸದ ಕಾರಣ ನೀಡಿ ಅರ್ಜಿ ವಜಾಗೊಳಿಸುವಂತಿಲ್ಲ : ಹೈಕೋರ್ಟ್
author img

By

Published : Jul 4, 2023, 9:45 PM IST

ಬೆಂಗಳೂರು : ಹಿಂಸೆ ಆಧಾರದಲ್ಲಿ ವಿಚ್ಛೇದನ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪತಿ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಅರ್ಜಿ ವಜಾಗೊಳಿಸಿ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ. ಪತಿಯಿಂದ ಹಿಂಸೆಯಾಗುತ್ತಿದೆ ಎಂದು ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್​ ಆರಾಧೆ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಪೀಠ ಈ ಆದೇಶ ಮಾಡಿದೆ.

ಪತ್ನಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ವಿಚಾರಣೆಗೆ ಪತಿ ಹಾಜರಾಗಿದ್ದರೂ, ಆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ. ಪತ್ನಿಯನ್ನು ಪಾಟಿ ಸವಾಲಿಗೆ ಒಳಪಡಿಸಿ, ಆಕೆ ಒದಗಿಸಿರುವ ಸಾಕ್ಷ್ಯಾಧಾರಗಳನ್ನೂ ಪರೀಕ್ಷಿಸಿಲ್ಲ. ಹೀಗಿದ್ದರೂ, ಪತ್ನಿಯ ಅರ್ಜಿಯನ್ನು ವಜಾಗೊಳಿಸಿರುವ ಕೌಟುಂಬಿಕ ನ್ಯಾಯಾಲಯ ಲೋಪವೆಸಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಿಚ್ಛೇದನ ಅರ್ಜಿ ವಜಾಗೊಳಿಸಿ 2017ರ ಮಾ.27ರಂದು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ. ಜತೆಗೆ, ದಂಪತಿ ನಡುವಿನ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿದೆ.

ಅರ್ಜಿಗೆ ಸಂಬಂಧಿಸಿದಂತೆ ಪತ್ನಿ ಒದಗಿಸಿರುವ ಪುರಾವೆಗಳು ಪ್ರಶ್ನಿಸಲ್ಪಡದೇ ಹಾಗೇ ಉಳಿದಿವೆ. ಜತೆಗೆ, ಹೈಕೋರ್ಟ್ ವಿಚಾರಣೆಗೂ ಪತಿ ಹಾಜರಾಗಿಲ್ಲ ಹಾಗೂ ಪತ್ನಿಯ ಮೇಲ್ಮನವಿಯನ್ನು ವಿರೋಧಿಸಿಲ್ಲ. ನ್ಯಾಯಾಲಯದ ಮುಂದೆ ಲಭ್ಯವಿರುವ ದಾಖಲೆಗಳನ್ನು ಪರಿಗಣಿಸಿದರೆ, ಮೇಲ್ಮನವಿದಾರೆಯು ವಿವಾಹ ವಿಚ್ಛೇದನ ಪಡೆಯಲು ಅರ್ಹರಿದ್ದಾರೆ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ : 2009ರಲ್ಲಿ ಮೈಸೂರಿನಲ್ಲಿ ವಿವಾಹವಾಗಿದ್ದ ದಂಪತಿ ಕೇವಲ 2 ತಿಂಗಳು ಜತೆಯಾಗಿ ಸಂಸಾರ ನಡೆಸಿದ್ದರು. ಆ 2 ತಿಂಗಳ ಅವಧಿಯಲ್ಲೂ ಇಬ್ಬರ ನಡುವೆ ಪ್ರತಿದಿನ ಜಗಳವಾಗುತ್ತಿತ್ತು. ಸತಿ - ಪತಿಯನ್ನು ಒಂದುಗೂಡಿಸಲು ಹಿರಿಯರು ಮಾಡಿದ್ದ ಪ್ರಯತ್ನಗಳು ವ್ಯರ್ಥವಾಗಿದ್ದವು. ಗಂಡ ನಿತ್ಯ ಕುಡಿದು ಬಂದು ಇತರರ ಮುಂದೆ ನಿಂದಿಸುತ್ತಾನೆ ಎಂದು ದೂರಿದ್ದ ಪತ್ನಿ, ಸಣ್ಣಪುಟ್ಟ ವಿಚಾರಗಳಿಗೂ ಗಲಾಟೆ ತೆಗೆಯುವ ಪತಿಗೆ ಹೊಂದಿಕೊಂಡು ಹೋಗುವ ಸ್ವಭಾವವೇ ಇರಲಿಲ್ಲ. ಮದುವೆಯಾದಾಗ ನನಗೆ ಕೇವಲ 15 ವರ್ಷಗಳಾಗಿತ್ತು. ನನ್ನ ಅಭಿಪ್ರಾಯಕ್ಕೆ ವಿರುದ್ಧವಾಗಿ ಈ ಮದುವೆ ನಡೆದಿದೆ. ಆದ್ದರಿಂದ, ಕ್ರೌರ್ಯದ ಆಧಾರದಲ್ಲಿ ವಿಚ್ಛೇದನ ಮಂಜೂರು ಮಾಡಬೇಕು ಎಂದು ಕೋರಿ 2015ರಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಗೆ ಪತಿ ಹಾಜರಾಗಿದ್ದರೂ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರಲಿಲ್ಲ. ಪತ್ನಿಯನ್ನು ಪಾಟಿ ಸವಾಲಿಗೆ ಒಳಪಡಿಸಿ, ಆಕೆ ಒದಗಿಸಿದ್ದ ಸಾಕ್ಷ್ಯಾಧಾರಗಳನ್ನೂ ಪರೀಕ್ಷೆಗೊಳಪಡಿಸಿರಲಿಲ್ಲ. ಹೀಗಿದ್ದರೂ, ಪತ್ನಿಯ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯ, 2009ರಲ್ಲಿ ಅರ್ಜಿದಾರೆಗೆ 15 ವರ್ಷವಿದ್ದಾಗ ಮದುವೆಯಾಗಿದೆ. ಆದರೆ, ವಿಚ್ಛೇದನ ಕೋರಿ 2015ರಲ್ಲಿ ಅಂದರೆ ಆಕೆ ಪ್ರೌಢಾವಸ್ಥೆೆ ತಲುಪಿ 3 ವರ್ಷಗಳ ನಂತರ ಅರ್ಜಿ ಸಲ್ಲಿಸಲಾಗಿದೆ ಎಂಬ ಕಾರಣ ನೀಡಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಹೈಕೋಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ ಇದೀಗ ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ 1 ವರ್ಷ ಅಧ್ಯಯನ ನಷ್ಟ: ಕಲಬುರಗಿಯ ನರ್ಸಿಂಗ್ ಕಾಲೇಜಿಗೆ 1 ಕೋಟಿ ರೂಪಾಯಿ ದಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.