ETV Bharat / state

ಬೆಂಗಳೂರು ಬಂಟರ ಸಂಘದಿಂದ ದೀಪಾವಳಿ.. ಸಾಲು ಮರದ ತಿಮ್ಮಕ್ಕ, ಗುರುಕಿರಣ್​ಗೆ ಪ್ರಶಸ್ತಿ - ಗುರುಕಿರಣ್

ಬೆಂಗಳೂರು ಬಂಟರ ಸಂಘದ ವತಿಯಿಂದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನವರಿಗೆ ಸನ್ಮಾನ ಮಾಡಲಾಯಿತು ಜೊತೆಗೆ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ದಿ. ಡಿ.ಕೆ ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Diwali celebration by Bangalore Bunts Association
ಬೆಂಗಳೂರು ಬಂಟರ ಸಂಘ ವತಿಯಿಂದ ದೀಪಾವಳಿ ಆಚರಣೆ
author img

By

Published : Nov 9, 2021, 10:48 AM IST

ಬೆಂಗಳೂರು: ಬೆಂಗಳೂರು ಬಂಟರ ಸಂಘದ ವತಿಯಿಂದ ಸೋಮವಾರ ಅತ್ಯಂತ ಅದ್ಧೂರಿಯಾಗಿ ಹಾಗೂ ಸಾಂಪ್ರದಾಯಿಕವಾಗಿ ದೀಪಾವಳಿಯನ್ನು ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನವರಿಗೆ ಸನ್ಮಾನ ಮಾಡಲಾಯಿತು. ಜೊತೆಗೆ ಅವರಿಗೆ ಮನೆ ಕಟ್ಟಿಕೊಳ್ಳಲು ಬಂಟರ ಸಂಘದ ವತಿಯಿಂದ ಒಂದು ಲಕ್ಷ ರೂ. ಚೆಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ದಿ. ಡಿ.ಕೆ ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಇದೇ ವೇಳೆ ಐಕಳ ಹರೀಶ್ ಶೆಟ್ಟಿ ಅವರಿಗೆ ದಿ. ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ. ಜಯಕರ ಶೆಟ್ಟಿ ಅವರಿಗೆ ದಿ. ಕೆ ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಡಳಿತ ಪಾಲುದಾರರಾದ ಜಗನ್ನಾಥ ಶೆಟ್ಟಿ, ಹಾಗೂ ಚಂದ್ರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಐಎಂ ರಾಜರಾಮ ಶೆಟ್ಟಿಯವರಿಗೆ ವಿಶೇಷವಾಗಿ ಗೌರವಿಸಲಾಯಿತು.

ಇದನ್ನೂ ಓದಿ: ಬಂಗಾಳ ಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ.. ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಈ ಕಾರ್ಯಕ್ರಮದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಆರ್ ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿ ಮಧುಕರ ಎಂ ಶೆಟ್ಟಿ, ಉದ್ಯಮಿ ಶ್ರೀ ಪ್ರಕಾಶ್ ಶೆಟ್ಟಿ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿದ್ದರು. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.