ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಸತ್ಯಶೋಧನಾ ಸಮಿತಿ ಸಲ್ಲಿಸಿದ್ದ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಲ್ಲಿಕೆ ಮಾಡಲಾಯಿತು.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತ್ತಿದ್ದು, ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.
ನಂತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿವರಾದ ಸಿ.ಟಿ. ರವಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು. ಬಳಿಕ ಅರವಿಂದ ಲಿಂಬಾವಳಿ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿ ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಕುರಿತು ನಿನ್ನೆಯಷ್ಟೇ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ವರದಿಯನ್ನು ಹಸ್ತಾಂತರ ಮಾಡಲಾಗಿತ್ತು. ಎಸ್ಡಿಪಿಐ ಸಂಘಟನೆ ನಿಷೇಧ ಸೇರಿದಂತೆ ಆರು ಬೇಡಿಕೆಗಳನ್ನು ಇರಿಸಲಾಗಿದ್ದು ಈ ವರದಿಯನ್ನು ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.