ETV Bharat / state

ಡಿಜೆ ಹಳ್ಳಿ ಗಲಭೆ : ಕ್ಲೇಮ್​ ಕಮಿಷನ್​ಗೆ ಸೌಲಭ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ

author img

By

Published : Jan 11, 2021, 10:51 PM IST

ಸರ್ಕಾರ 2020ರ ಆ.28ರಂದು ಕ್ಲೇಮ್ ಕಮಿಷನರ್ ನೇಮಕ ಮಾಡಿದೆ. ಅಕ್ಟೋಬರ್ 1ರಂದು ನ್ಯಾ. ಕೆಂಪಣ್ಣ ಅಧಿಕಾರ ವಹಿಸಿಕೊಂಡಿದ್ದಾರೆ. ನಿವತ್ತ ನ್ಯಾಯಾಂಗ ಅಧಿಕಾರಿಯೊಬ್ಬರನ್ನು ಕಮಿಷನ್‌ಗೆ ಕಾರ್ಯದರ್ಶಿಯಾಗಿ ನೇಮಕ ಮಾಡುವಂತೆ ಅದೇ ದಿನ ನ್ಯಾ. ಕೆಂಪಣ್ಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ದಫೇದಾರ್, ಗುಮಾಸ್ತ ಇನ್ನಿತರ ಹುದ್ದೆಗಳನ್ನಷ್ಟೇ ನೇಮಕ ಮಾಡಲಾಗಿದೆ. ಆದರೆ, ಈವರೆಗೆ ಕಾರ್ಯದರ್ಶಿ ನೇಮಕ ಆಗಿಲ್ಲ. ಮೂಲಸೌಕರ್ಯಗಳನ್ನು ಸಹ ಒದಗಿಸಿಲ್ಲ..

High Court
ಹೈಕೋರ್ಟ್

ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆಗಿರುವ ಸಾರ್ವಜನಿಕ ಆಸ್ತಿ ನಷ್ಟದ ಅಂದಾಜು ಮಾಡಿ, ತಪ್ಪಿತಸ್ಥರ ಮೇಲೆ ಹೊಣೆಗಾರಿಕೆ ಹೊರಿಸಲು ನೇಮಕ ಮಾಡಿರುವ ‘ಕ್ಲೇಮ್ ಕಮಿಷನ್’ಗೆ ಸೂಕ್ತ ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಹಾಗೂ ನಷ್ಟ ವಸೂಲಿಗೆ ಕ್ಲೇಮ್​ ಕಮಿಷನ್ ನೇಮಕ ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಈ ವೇಳೆ ಕಮಿಷನ್​ಗೆ ಅಗತ್ಯ ಪ್ರಮಾಣದ ಸಿಬ್ಬಂದಿ ಹಾಗೂ ಇತರೆ ಕಚೇರಿ ಸೌಲಭ್ಯಗಳನ್ನು ಒದಗಿಸದ ಸರ್ಕಾರದ ವಿರುದ್ಧ ಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ನಿವೃತ್ತ ನ್ಯಾಯಮೂರ್ತಿ ಹೆಚ್ ಎಸ್ ಕೆಂಪಣ್ಣ ನೇತೃತ್ವದ ‘ಕ್ಲೇಮ್ ಕಮಿಷನ್’ಗೆ ಮೂಲಸೌಕರ್ಯಗಳನ್ನು ಒದಗಿಸಿಲ್ಲ. ಖುದ್ದು ಅವರೇ ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ಜ.6ರಂದು ವರದಿ ಕಳಿಸಿದ್ದಾರೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನಡೆಸಿಕೊಳ್ಳುವ ರೀತಿ ಇದಲ್ಲ.

ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಕುರಿತು ತಕ್ಷಣ ಗಮನಹರಿಸಬೇಕು. ನ್ಯಾ. ಕೆಂಪಣ್ಣ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿತು.

ಓದಿ:ಪೆಪ್ಪರ್ ಸ್ಪ್ರೆ ಎರಚಿ ವಯೋವೃದ್ಧನ ಬಳಿಯಿದ್ದ 16.60 ಲಕ್ಷ ದೋಚಿ ಪರಾರಿ

ಸರ್ಕಾರ 2020ರ ಆ.28ರಂದು ಕ್ಲೇಮ್ ಕಮಿಷನರ್ ನೇಮಕ ಮಾಡಿದೆ. ಅಕ್ಟೋಬರ್ 1ರಂದು ನ್ಯಾ. ಕೆಂಪಣ್ಣ ಅಧಿಕಾರ ವಹಿಸಿಕೊಂಡಿದ್ದಾರೆ. ನಿವತ್ತ ನ್ಯಾಯಾಂಗ ಅಧಿಕಾರಿಯೊಬ್ಬರನ್ನು ಕಮಿಷನ್‌ಗೆ ಕಾರ್ಯದರ್ಶಿಯಾಗಿ ನೇಮಕ ಮಾಡುವಂತೆ ಅದೇ ದಿನ ನ್ಯಾ. ಕೆಂಪಣ್ಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ದಫೇದಾರ್, ಗುಮಾಸ್ತ ಇನ್ನಿತರ ಹುದ್ದೆಗಳನ್ನಷ್ಟೇ ನೇಮಕ ಮಾಡಲಾಗಿದೆ. ಆದರೆ, ಈವರೆಗೆ ಕಾರ್ಯದರ್ಶಿ ನೇಮಕ ಆಗಿಲ್ಲ. ಮೂಲಸೌಕರ್ಯಗಳನ್ನು ಸಹ ಒದಗಿಸಿಲ್ಲ.

ಕಮಿಷನ್ ರಚನೆಯಾಗಿ ನಾಲ್ಕೈದು ತಿಂಗಳು ಕಳೆದಿದ್ದರೂ ಕಾರ್ಯಾರಂಭ ಮಾಡಿಲ್ಲ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ. ಆದ್ದರಿಂದ ನ್ಯಾ. ಕೆಂಪಣ್ಣ ಅವರು ರಿಜಿಸ್ಟ್ರಾರ್‌ಗೆ ರವಾನಿಸಿರುವ ವರದಿಯನ್ನು ತಕ್ಷಣ ಸರ್ಕಾರಕ್ಕೆ ತಲುಪಿಸಬೇಕು. ಮುಖ್ಯ ಕಾರ್ಯದರ್ಶಿ ಸಮಸ್ಯೆ ಬಗೆಹರಿಸಿ, ಕಮಿಷನ್ ಜ.18ರಿಂದ ಕಾರ್ಯಾರಂಭ ಮಾಡುವಂತಾಗಬೇಕು ಎಂದು ಪೀಠ ಸರ್ಕಾರಕ್ಕೆ ತಾಕೀತು ಮಾಡಿ, ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿತು.

ಸಿಸಿಬಿ ವರದಿ : ಇದೇ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 64 ಆರೋಪಿಗಳ ವಿರುದ್ಧ ಕಳೆದ ವರ್ಷ ಅ.12ರಂದು ಪ್ರಾಥಮಿಕ ಚಾರ್ಜ್‌ಶೀಟ್ ಹಾಗೂ ಇದೇ ಜ.6ರಂದು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 62ನೇ ಆರೋಪಿ ತಲೆ ಮರೆಸಿಕೊಂಡಿದ್ದು, ಶೋಧಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪರ ವಕೀಲರು ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.