ಬೆಂಗಳೂರು: ಖಾಸಗಿ ವಾಹಿನಿಯೊಂದರ ರಾಮನಗರ ವರದಿಗಾರ ಹನುಮಂತು ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಸಂತಾಪ ಸೂಚಿಸಿದ್ದಾರೆ.
ವರದಿಗಾರ ಹನುಮಂತು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ಅವರು ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಸಂಕಷ್ಟದ ಸಮಯ ಎದುರಿಸಲು ಭಗವಂತ ಅವರ ಕುಟುಂಬ ಸದಸ್ಯರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶಿವಕುಮಾರ್ ಹಾಗೂ ಸುರೇಶ್ ಸಂತಾಪ ಸೂಚಿಸಿದ್ದಾರೆ.
ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪತ್ರಕರ್ತ ಹನುಮಂತು ನಿಧನ ಹೊಂದಿದ್ದಾರೆ.