ETV Bharat / state

ಸಿದ್ದರಾಮಯ್ಯ ಅಮೃತ ಮಹೋತ್ಸವದ ಪೂರ್ವ ಸಿದ್ಧತಾ ಸಭೆ - ಡಿಕೆಶಿ ಗೈರು!

author img

By

Published : Jul 13, 2022, 7:47 PM IST

ಸಿದ್ದರಾಮಯ್ಯ ಅಮೃತ ಮಹೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೈರಾಗಿದ್ದರು.

ಸಿದ್ದರಾಮಯ್ಯ ಅಮೃತ ಮಹೋತ್ಸವದ ಪೂರ್ವ ಸಿದ್ಧತಾ ಸಭೆ - ಡಿಕೆಶಿ ಗೈರು!
dk shivakumar absent in Siddaramaiah Amrita Mahotsava meeting

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಇಂದು ನಗರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಸಿದ್ದರಾಮಯ್ಯ, ಕೆ.ಎನ್ ರಾಜಣ್ಣ, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಈಶ್ವರ ಖಂಡ್ರೆ, ಆರ್.ವಿ ದೇಶಪಾಂಡೆ, ಡಿ.ಕೆ ಸುರೇಶ್, ಯು.ಟಿ ಖಾದರ್ ಸೇರಿದಂತೆ ಬಹುತೇಕ ನಾಯಕರು ಭಾಗಿಯಾಗಿದ್ದರು. ಆದರೆ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೈರಾಗಿದ್ದರು.

Siddaramaiah Amrita Mahotsava meeting
ಸಿದ್ದರಾಮಯ್ಯ ಅಮೃತ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

ಬಿ.ಕೆ ಹರಿಪ್ರಸಾದ್ ನಿನ್ನೆ ದೆಹಲಿಗೆ ತೆರಳಿರುವ ಹಿನ್ನೆಲೆ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲೇ ಇದ್ದು ಸಭೆಗೆ ಆಗಮಿಸಿಲ್ಲ. ಆಗಸ್ಟ್ 15ರ ಪಾದಯಾತ್ರೆ ಸಂಬಂಧ ಕೆಪಿಸಿಸಿಯಲ್ಲಿ ಸಭೆ ಕರೆದಿದ್ದು, ಅದರಲ್ಲಿ ಭಾಗಿಯಾಗುತ್ತಿದ್ದೇನೆ. ಸಿದ್ದರಾಮಯ್ಯರ ಅಮೃತ ಮಹೋತ್ಸವ ಸಮಾರಂಭದಲ್ಲಿಯೇ ನೇರವಾಗಿ ಪಾಲ್ಗೊಳ್ಳುತ್ತೇನೆ ಎಂದು ಇಂದು ಮಾಧ್ಯಮಗಳಿಗೆ ತಿಳಿಸಿದ್ದರು.

ಮೂಲಗಳ ಪ್ರಕಾರ ಪೂರ್ವ ಸಿದ್ಧತಾ ಸಭೆ ಅವಶ್ಯಕತೆ ಇರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಉಭಯ ನಾಯಕರು ಸಭೆಗೆ ಗೈರು ಆಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಸಹ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ರಾತ್ರಿ ದೆಹಲಿ ಪ್ರವಾಸ ‌ಮಾಡಲಿರುವ ಡಿಕೆಶಿ ಎಐಸಿಸಿ ಕರೆದಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವವನ್ನು ಪಕ್ಷದ ವತಿಯಿಂದ ನಡೆಸುವುದಾಗಿ ಹೇಳಿದ್ದ ಡಿಕೆಶಿ ಇದೀಗ ಸಭೆಯಿಂದ ದೂರ ಉಳಿದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ನಾವು ಎಂದೂ ಸಹ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಮಾಧ್ಯಮದಲ್ಲಿ ಬಂದಿದೆಯೋ ಗೊತ್ತಿಲ್ಲ. ಯಾರು ಏನೇ ಹೇಳಿದರು ಸಿದ್ದರಾಮೋತ್ಸವ ಎಂಬುದನ್ನ ನಾವು ಒಪ್ಪೋದಿಲ್ಲ. ಈ ಬಿಜೆಪಿಯವರು ತೀರಾ ಕೀಳು ಮಟ್ಟದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಮಾಜಿ‌ ಸಚಿವ ಹೆಚ್.ಸಿ.‌ ಮಹಾದೇವಪ್ಪ ಮಾತನಾಡಿ, ಹುಟ್ಟು ಹಬ್ಬ ಆಚರಣೆಗೆ ಸಿದ್ದರಾಮಯ್ಯ ಒಪ್ಪಿರಲಿಲ್ಲ. ಅವರ ಸ್ನೇಹಿತರು ಸೇರಿ ಒತ್ತಡ ಹಾಕಿದ ಮೇಲೆ ಒಪ್ಪಿಕೊಂಡಿದ್ದಾರೆ. ನಾವು ಸಿದ್ದರಾಮಯ್ಯಗೆ ಹೊಗಳು ಭಟ್ಟರಲ್ಲ. ವ್ಯಕ್ತಿ ಪೂಜೆಯೂ ಮಾಡುವವರಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲು ಒಂದು ಅವಕಾಶ ಸಿಗುತ್ತದೆ. ಆ ಕಾರಣಕ್ಕೆ ಕಾರ್ಯಕ್ರಮ ಮಾಡಲಾಗುತ್ತಿದೆ ಎನ್ನುವ ಮೂಲಕ ನನಗೆ ವ್ಯಕ್ತಿ ಪೂಜೆಗಿಂತ, ಪಕ್ಷ ಪೂಜೆ ಮುಖ್ಯ ಎಂದಿದ್ದ ಡಿ.ಕೆ ಶಿವಕುಮಾರ್​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

ಸಂಸದ ಡಿ.ಕೆ ಸುರೇಶ್ ಮಾತನಾಡಿ, 75ನೇ ವರ್ಷದ ಆಚರಣೆ ಮಾಡಬೇಕು ಎಂದು ಅವರ ಅಭಿಮಾನಿಗಳು, ಹಿತೈಷಿಗಳು ತೀರ್ಮಾನ ಮಾಡಿದ್ದಾರೆ. ಈ ಹುಟ್ಟುಹಬ್ಬದ ಜೊತೆ ಕಾಕತಾಳಿಯ ಎಂಬಂತೆ ಭಾರತ ದೇಶದ ಅಮೃತ ಮಹೋತ್ಸವ ನಡೆಯುತ್ತಿದೆ. ಇವರೆಡನ್ನೂ ಜೊತೆಗೆ ಬಿಂಬಿಸುತ್ತಾ ಕಾರ್ಯಕ್ರಮ ಮಾಡುವುದು ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಚುನಾವಣಾ ವರ್ಷದಲ್ಲಿ ಕಾರ್ಯಕರ್ತರಿಗೆ ಹಾಗೂ ಜನರಿಗೆ ಕೆಟ್ಟ ಸಂದೇಶ ಹೋಗದಂತೆ ಕಾರ್ಯಕ್ರಮ ಮಾಡಬೇಕು. ಇದರಿಂದ ಪಕ್ಷಕ್ಕೆ ಲಾಭ ಆಗಬೇಕು, ಆ ರೀತಿ ಕಾರ್ಯಕ್ರಮ ಮಾಡಬೇಕು ಎಂದರು.

ಇದನ್ನೂ ಓದಿ: ಸಿದ್ದರಾಮೋತ್ಸವ ಶಾಬಾದಿಮಠ ಕ್ಯಾಲೆಂಡರ್​​ನಲ್ಲಿ ಹಾಕಿಸಬೇಕು: ಶ್ರೀರಾಮುಲು ವ್ಯಂಗ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಸಾಮರಸ್ಯದ ಕೊರತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸೇರಿದಂತೆ ಬಿಜೆಪಿ ನಾಯಕರು ಈ ಹಿಂದೆ ಹೇಳಿದ್ದರು. ಇಂದು ಸಭೆಯಲ್ಲಿ ಡಿಕೆಶಿ ಪಾಲ್ಗೊಳ್ಳದೇ ಇರುವುದು ಅದಕ್ಕೆ ಪುಷ್ಠಿ ನೀಡುವಂತಿತ್ತು. ರಾಜ್ಯ ಕಾಂಗ್ರೆಸ್ ನಾಯಕರು ಈ ಕೊರತೆಯನ್ನು ಮುಚ್ಚುವ ಪ್ರಯತ್ನವನ್ನು ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.