ETV Bharat / state

ರಾಹುಲ್ ಗಾಂಧಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಡಿಕೆಶಿ, ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಯಾವುದೇ ನಾಯಕರ ಬೆಂಬಲಿಗರು ಸಿಎಂ ಯಾರಾಗಬೇಕೆಂಬ ಕುರಿತು ಹೇಳಿಕೆ ನೀಡಿದರೆ, ಕೂಡಲೇ ಅವರನ್ನ ಸುಮ್ಮನಾಗಿಸುವ ಕಾರ್ಯ ಮಾಡಬೇಕು. ಒಟ್ಟಾರೆ ನಾಯಕತ್ವದಲ್ಲಿ ಚುನಾವಣೆಗೆ ಹೋಗಿ. ಚುನಾವಣೆಯಲ್ಲಿ ಗೆದ್ದ ಬಳಿಕವೇ ಮುಂದಿನ ಸಿಎಂ ವಿಚಾರ. ಇದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ನೀವು ಕೇವಲ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮಾತ್ರ ಪ್ರಯತ್ನ ಮಾಡಿ ಎಂದು ಸೂಕ್ಷ್ಮವಾಗಿ ರಾಹುಲ್ ಗಾಂಧಿ ಇಬ್ಬರೂ ನಾಯಕರಿಗೆ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ..

ರಾಹುಲ್ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಡಿಕೆಶಿ, ಸಿದ್ದರಾಮಯ್ಯ

author img

By

Published : Jul 21, 2021, 9:10 PM IST

ಬೆಂಗಳೂರು/ಹೊಸದಿಲ್ಲಿ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ಎರಡು ದಿನದ ಹಿಂದೆ ದಿಲ್ಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ನಾಯಕರು, ವಿವಿಧ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಸಮಾಲೋಚಿಸಿದ್ದರು.

ಅಂತಿಮವಾಗಿ ಕಾಂಗ್ರೆಸ್ ವರಿಷ್ಠ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆಶಿ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ.

ಪಕ್ಷ ಸಂಘಟನೆ ಮುಂಬರುವ ದಿನಗಳಲ್ಲಿ ನಡೆಯುವ ಚುನಾವಣೆಗಳು ಹಾಗೂ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಈ ಸಂದರ್ಭ ಸುದೀರ್ಘ ಚರ್ಚೆ ನಡೆದಿದೆ. ರಾಜ್ಯದಲ್ಲಿ ಪ್ರಸ್ತಾಪವಾದ ನಾಯಕತ್ವ ವಿಚಾರ ಸಹ ಚರ್ಚೆ ಸಂದರ್ಭ ಪ್ರಸ್ತಾಪವಾಗಿದೆ. ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಯಾವ ಕಾರಣಕ್ಕೂ ಮುಂದಿನ ಸಿಎಂ ಅಥವಾ ನಾಯಕತ್ವದ ವಿಚಾರ ಪ್ರಸ್ತಾಪ ಮಾಡುವುದು ಬೇಡ.

ಯಾವುದೇ ನಾಯಕರ ಬೆಂಬಲಿಗರು ಇಂತಹ ಹೇಳಿಕೆ ನೀಡಿದರೆ ಕೂಡಲೇ ಅವರನ್ನ ಸುಮ್ಮನಾಗಿಸುವ ಕಾರ್ಯ ಮಾಡಬೇಕು. ಒಟ್ಟಾರೆ ನಾಯಕತ್ವದಲ್ಲಿ ಚುನಾವಣೆಗೆ ಹೋಗಿ. ಚುನಾವಣೆಯಲ್ಲಿ ಗೆದ್ದ ಬಳಿಕವೇ ಮುಂದಿನ ಸಿಎಂ ವಿಚಾರ. ಇದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ನೀವು ಕೇವಲ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮಾತ್ರ ಪ್ರಯತ್ನ ಮಾಡಿ ಎಂದು ಸೂಕ್ಷ್ಮವಾಗಿ ರಾಹುಲ್ ಗಾಂಧಿ ಇಬ್ಬರೂ ನಾಯಕರಿಗೆ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಭೇಟಿ ಬಳಿಕ ವಾಪಸ್​​ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಭೇಟಿ ಬಳಿಕ ಉಭಯ ನಾಯಕರು ರಾಜ್ಯಕ್ಕೆ ವಾಪಸಾಗಿದ್ದಾರೆ. ನಾಳೆ ವಿಧಾನಸೌಧದಲ್ಲಿ ಸಭೆ ಸೇರಿ ನಂತರ ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ ಕಾಂಗ್ರೆಸ್. ಈ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತ್ಯೇಕವಾಗಿ ಹಲವು ನಾಯಕರ ಜೊತೆ ಚರ್ಚಿಸಿದ್ದಾರೆ. ನಾಳಿನ ಪ್ರತಿಭಟನೆ ಹಾಗೂ ಮೆರವಣಿಗೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ದಿಲ್ಲಿಯಿಂದ ವಾಪಸಾಗುತ್ತಿದ್ದಂತೆ ಚರ್ಚೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಕಾಶಿ ಜಗದ್ಗುರುವಿನ ಆಶೀರ್ವಾದ ಪಡೆದ್ರು ಸಿಎಂ ಸ್ಥಾನದ ಆಕಾಂಕ್ಷಿ ಅರವಿಂದ ಬೆಲ್ಲದ್!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.