ETV Bharat / state

ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - ಡಿ ಕೆ ಶಿವಕುಮಾರ್

ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.

ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ

author img

By

Published : Apr 17, 2023, 6:07 PM IST

Updated : Apr 17, 2023, 9:00 PM IST

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪೂ ಕಾಯ್ದಿರಿಸಿ ಆದೇಶಿದೆ. ಅರ್ಜಿದಾರ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಇಂತಹುದೇ ತನಿಖಾ ಸಂಸ್ಥೆಯು ತನಿಖೆ ನಡೆಸಬೇಕು ಎಂದು ಹೇಳುವುದಾಗಲೀ ಅಥವಾ ಇಂತಹುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸುವ ಹಕ್ಕನ್ನಾಗಲೀ ಆರೋಪಿ ಹೊಂದಿಲ್ಲ. ವಿಶೇಷ ಅಧಿನಿಯಮವಾದ, ದೆಹಲಿ ಪೊಲೀಸ್‌ ಸ್ಥಾಪನಾ ಕಾಯ್ದೆ–1947ರ ಕಲಂ 6ರ ಅಡಿಯಲ್ಲಿ ತನಿಖೆಗೆ ನೀಡಲಾದ ಒಪ್ಪಿಗೆಯ ಕಾರಣಗಳನ್ನು ಸಿಬಿಐ ವಿವರಿಸುವ ಅಗತ್ಯವೇ ಇಲ್ಲ ಎಂದರು.
ಎರಡೂವರೆ ವರ್ಷಗಳಲ್ಲಿ ಸಿಬಿಐ ಈಗಾಗಲೇ ಶೇ 90ರಷ್ಟು ತನಿಖೆ ಪೂರ್ಣಗೊಳಿಸಿದೆ. ಈ ಕುರಿತಂತೆ ತನಿಖೆಯ ವಸ್ತುಸ್ಥಿತಿ ವರದಿಯನ್ನು ಕೋರ್ಟಿಗೂ ಸಲ್ಲಿಸಲಾಗಿದೆ. ಇಷ್ಟೆಲ್ಲಾ ಸಮಯ ಕಳೆದ ಮೇಲೆ ಅರ್ಜಿದಾರರು ಅಧಿಸೂಚನೆ ಪ್ರಶ್ನಿಸುವುದಾಗಲೀ ಅಥವಾ ರದ್ದುಗೊಳಿಸಿ ಎಂದು ಕೋರುವುದಾಗಲಿ ಕಾನೂನು ಪ್ರಕಾರ ಸಾಧ್ಯವಿಲ್ಲ. ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿಸಿರುವ ವಿಶೇಷ ಕ್ರಿಮಿನಲ್‌ ಪ್ರಕರಣವಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.

ಪ್ರಕರಣದ ಹಿನ್ನೆಲೆ ಏನು? ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದ್ದು; ಸಿಬಿಐ ತನಿಖೆಗೆ ಒಪ್ಪಿಸಲಾದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಶಿವಕುಮಾರ್ ಈ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ವಿಧಾನಸಭಾ ಚುನಾವಣೆ.. ಡಿಕೆಶಿ, ಹೆಚ್​ಡಿಕೆ, ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಕೆ

Last Updated : Apr 17, 2023, 9:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.