ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಮೊಮ್ಮಗ, ದಿ. ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಾಜ್ ಹೋಟೆಲ್ನಲ್ಲಿ ಭರ್ಜರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್.ಎಂ. ಕೃಷ್ಣ ಹಾಗೂ ಡಿ.ಕೆ. ಶಿವಕುಮಾರ್ ಕುಟುಂಬಸ್ಥರು ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಆರ್ ಅಶೋಕ್, ಡಾ. ಕೆ ಸುಧಾಕರ್ ಭಾಗಿಯಾಗಿದ್ದರು.
ತಾಜ್ ಹೋಟೆಲ್ನಲ್ಲಿ 50 ರೂಂಗಳನ್ನು ಬುಕ್ ಮಾಡಲಾಗಿತ್ತು. ಹಲವು ಸಚಿವರು, ಹಾಗೂ ಶಾಸಕರು ಆಗಮಿಸಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿತ್ತು.