ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಪ್ರಕಾರವೇ ನಡೆದುಕೊಂಡಿದ್ದಾರೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.
ಡಿಕೆಶಿಗೆ ಸಿಬಿಐ ನೋಟಿಸ್ ಹಾಗೂ ಇಂದು ವಿಚಾರಣೆಗೆ ಹಾಜರಾಗುವ ವಿಚಾರ ಕುರಿತು ಮಾತನಾಡಿ, ಇವತ್ತು ಮಸ್ಕಿಯಿಂದ ವಾಪಸ್ ಬರುತ್ತಿದ್ದಾರೆ. ಇಂದು ಸಿಬಿಐನವರು ವಿಚಾರಣೆಗೆ ಕರೆದಿದ್ದಾರೆ. ಸಿಬಿಐ ವಿಚಾರಣೆಗೆ ಡಿಕೆಶಿ ಹಾಜರಾಗಲಿದ್ದಾರೆ ಎಂದು ವಿವರಿಸಿದ್ದಾರೆ.
ಸಿಬಿಐ ವಿಚಾರಣೆಗೆ ಹಾಜರಾಗಿ ಅವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಡಿ.ಕೆ ಶಿವಕುಮಾರ್ ಯಾವುದೇ ತಪ್ಪು ಮಾಡಿಲ್ಲ ಹೀಗಾಗಿ ಯಾವ ಅಂಜಿಕೆಯೂ ಇಲ್ಲ. ಅವರು ನಿರಾಳವಾಗಿದ್ದು ಸಮಾಧಾನಕರವಾಗಿ ಎಲ್ಲ ಪ್ರಶ್ನೆಗೂ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯಸಭೆ ಸದಸ್ಯ ಅಹ್ಮದ್ ಪಟೇಲ್ ನಿಧನ ತುಂಬಲಾರದ ನಷ್ಟವಾಗಿದ್ದು, ಪಕ್ಷ ಹಾಗೂ ಕಾರ್ಯಕರ್ತರಿಗೆ ನಷ್ಟವಾಗಿದೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.