ETV Bharat / state

ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್​ನಲ್ಲಿ ಇಂದು ವಿಚಾರಣೆ ಮುಂದುವರಿಕೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ. ಇಂದೂ ಕೂಡ ಹೈಕೋರ್ಟ್​ನಲ್ಲಿ ವಿಚಾರಣೆ ಮುಂದುವರಿಯಲಿದೆ.

author img

By

Published : Jul 7, 2023, 6:55 AM IST

DK Shivakumar Illegal asset case
ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಥಮ ವರ್ತಮಾನ ವರದಿ (ಎಫ್ಐಆರ್) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ಇಂದೂ ಕೂಡ ನಡೆಯಲಿದೆ. ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಡಿಕೆಶಿ ಪರ ಸುದೀರ್ಘ ವಾದ ಆಲಿಸಿದ್ದು, ಸಿಬಿಐ ವಾದ ಆಲಿಸಲು ಶುಕ್ರವಾರಕ್ಕೆ ಮುಂದೂಡಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ‌ ಚೌಟಾ ವಾದ ಮಂಡಿಸಿ, ಅರ್ಜಿದಾರರ ಕುಟುಂಬದ ಸದಸ್ಯರ ಆದಾಯ, ಖರ್ಚು-ವೆಚ್ಚಗಳನ್ನು ಡಿಕೆಶಿ ಲೆಕ್ಕಕ್ಕೆ ಸೇರಿಸುವ ಮೂಲಕ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಭ್ರಷ್ಟಾಚಾರ ನಿಷೇಧ ಕಾಯಿದೆಯ ಸೆಕ್ಷನ್‌ 17 ಗಳಿಕೆ ಮೀರಿದ ಆಸ್ತಿಗೆ ಸಂಬಂಧಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸ್‌ ವರಿಷ್ಠಾಧಿಕಾರಿ ಶ್ರೇಣಿಗಿಂತ ಕೆಳಗಿನವರಲ್ಲದ ಅಧಿಕಾರಿ ಆದೇಶ ಮಾಡಬೇಕು. ಈ ಆದೇಶ ಎಫ್‌ಐಆರ್‌ನಲ್ಲಿ ಕಾಣಿಸುತ್ತಿಲ್ಲ ಎಂದು ಪೀಠಕ್ಕೆ ವಿವರಿಸಿದರು. ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಯತ್ನಿಸುವಾಗ ಅವರ ಕುಟುಂಬ ಸದಸ್ಯರ ಆದಾಯವನ್ನು ಸೇರಿಸಲಾಗದು. ಇದು ಬೇನಾಮಿ ಪ್ರಕರಣವಲ್ಲ. ಆದರೆ, ಸಿಬಿಐ ಕುಟುಂಬ ಸದಸ್ಯರ ಆದಾಯ ಮತ್ತು ಖರ್ಚನ್ನು ಸಾರ್ವಜನಿಕ ಸೇವಕನ ಲೆಕ್ಕಕ್ಕೆ ಹಾಕುವ ಮೂಲಕ ಇಷ್ಟು ಮೌಲ್ಯದ ಅಕ್ರಮ ಆಸ್ತಿ ಗಳಿಕೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.

ಇದನ್ನೂ ಓದಿ: DKS: ಕೊರೋನಾ ನಿಯಮ ಉಲ್ಲಂಘನೆ... ಡಿಸಿಎಂ ಡಿಕೆಶಿ ವಿರುದ್ಧ ದಾಖಲಾದ ಪ್ರಕರಣ ರದ್ದು

ಅಲ್ಲದೆ, ಎರಡು ವರ್ಷ ನಾಲ್ಕು ತಿಂಗಳಿಂದ ಡಿ.ಕೆ. ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಸಿಬಿಐಗೆ ಸಾಕಷ್ಟು ವಕೀಲರ ಮಾರ್ಗದರ್ಶನವಿದ್ದರೂ ದೋಷಪೂರಿತವಾಗಿ ಎಫ್‌ಐಆರ್‌ ದಾಖಲಿಸಲಾಗಿದೆ. ಡಿಕೆಶಿ ಕುಟುಂಬ ಸದಸ್ಯರು ಅಪಾರ ಪ್ರಮಾಣದ ಆಸ್ತಿ ಸಂಪಾದಿಸಿದ್ದಾರೆ ಎಂದು ಆಕ್ಷೇಪಣೆಯಲ್ಲಿ ಸಿಬಿಐ ಹೇಳಿದೆ. ಆದರೆ, ಈ ಅಂಶ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿಲ್ಲ ಎಂದ ವಕೀಲ ಸಂದೇಶ‌ ಚೌಟಾ ವಾದಿಸಿದರು.

ಪ್ರಕರಣದ ಹಿನ್ನೆಲೆ: ಡಿ.ಕೆ. ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಸಮಯದಲ್ಲಿ ಒಟ್ಟು 8.59 ಕೋಟಿ ರೂ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದೆ. ಈ ಪ್ರಕರಣ ರದ್ದುಕೋರಿ ಡಿಕೆಶಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಡಿಕೆಶಿ ಮೇಲ್ಮನವಿ... ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.