ಬೆಂಗಳೂರು: ಹವಾಲಾ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನವದಹೆಲಿ ತಲುಪಿದ್ದು, ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಬರೋಬ್ಬರಿ 6ಗಂಟೆಗೂ ಹೆಚ್ಚ ಕಾಲ ಅವರನ್ನ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಇದರ ಬೆನ್ನಲ್ಲೆ ಬೆಳಗ್ಗೆ 11 ಗಂಟೆಗೆ ಡಿಕೆಶಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.
ಸಂಜೆ 5ಗಂಟೆಗೆ ಲೋಕನಾಯಕ ಭವನದ ಆರನೇ ಮಹಡಿಯಲ್ಲಿ ಅಧಿಕಾರಿಗಳು ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಡೆಸಿದರು. ಈ ವೇಳೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಕಚೇರಿಯೊಳಗೆ ಡಿಕೆ ಸುರೇಶ್ಗೆ ಪ್ರವೇಶ ನಿರಾಕರಣೆ ಮಾಡಿದ್ದು, ಅವರಿಂದಲೂ ಕೆಲವೊಂದು ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ವಿಚಾರಣೆ ಬಳಿಕ ಮಾತನಾಡಿದ ಡಿಕೆಶಿ, ಅಧಿಕಾರಿಗಳು ಕೇಳಿರುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾಗಿ ತಿಳಿಸಿದ್ದು, ಬೆಳಗ್ಗೆ ಮತ್ತೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ ಎಂದು ಹೇಳಿದ್ದು, ವಿಚಾರಣೆಗೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ತಿಳಿಸಿದರು. ತದನಂತರ ಕರ್ನಾಟಕ ಭವನದತ್ತ ಅವರು ತೆರಳಿದರು.
ಅದಕ್ಕೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ, ಡಿಕೆಶಿ ಇಡಿ ಅಧಿಕಾರಿಗಳಿಗೆ ಗೌರವ ಕೊಡುತ್ತೇನೆ. ಕಾನೂನಿನ ಅಡಿಯಲ್ಲಿ ನನ್ನ ರಕ್ಷಣೆಗೆ ಪ್ರಯತ್ನಿಸುತ್ತೇನೆ. ನಾನು ತಪ್ಪು ಮಾಡಿಲ್ಲ. ಹಾಗಾಗಿ ಯಾರಿಗೂ ಹೆದರುವುದಿಲ್ಲ ಎಂದು ತಿಳಿಸಿದ್ರು.
ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ಗೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮವಿಯನ್ನು ಹೈಕೋರ್ಟ್ ಪೀಠ ಶುಕ್ರವಾರ ವಜಾಗೊಳಿಸಿತ್ತು.