ETV Bharat / state

ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು: ಡಿ ಕೆ ಶಿವಕುಮಾರ್ ಆಗ್ರಹ - ಈಟಿವಿ ಭಾರತ್ ಕನ್ನಡ ಸುದ್ದಿ

ಬಿಜೆಪಿಯವರು ಮೊದಲಿನಿಂದಲೂ ಇತಿಹಾಸ ತಿರುಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
author img

By

Published : Mar 14, 2023, 5:36 PM IST

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ನಗರರದ ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್​ನಲ್ಲಿ ಮಂಗಳವಾರ ತಿಗಳರ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, ನಾನು ಡಿಜಿಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ. ಆದರೆ, ಬಿಜೆಪಿಯ ಬಾಲ ಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಆ ದ್ವಾರ ನಿರ್ಮಾಣಕ್ಕೆ ಇವರು ಹೇಗೆ ಅನುಮತಿ ಕೊಟ್ಟರು? ಎಂದು ಪ್ರಶ್ನಿಸಿದರು.

‘ಬಿಜೆಪಿಯವರು ಮೊದಲಿಂದಲೂ ಇತಿಹಾಸ ತಿರುಚಲು ಪ್ರಯತ್ನಿಸುತ್ತಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್, ಶ್ರೀ ಬಾಲಗಂಗಾಧರ ಸ್ವಾಮೀಜಿ, ಶ್ರೀ ಶಿವಕುಮಾರ ಸ್ವಾಮೀಜಿ - ಹೀಗೆ ಯಾರನ್ನೂ ಬಿಡದೇ ಇತಿಹಾಸ ತಿರುಚುತ್ತಿದ್ದಾರೆ. ಈಗ ಉರಿಗೌಡ, ನಂಜೇಗೌಡರ ಹೆಸರು ತೆಗೆದುಕೊಂಡಿದ್ದಾರೆ. ಇವರ ಇತಿಹಾಸ ಎಲ್ಲಿದೆ? ಇವರ ಹೆಸರು ಸೃಷ್ಟಿಸಿ ಇಡೀ ಒಕ್ಕಲಿಗ ಸಮುದಾಯಕ್ಕೆ ಮೋಸ ಮಾಡಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಒಕ್ಕಲಿಗರಿಗೆ ಅವಮಾನ ಮಾಡುತ್ತಿದ್ದಾರೆ. ಶ್ರೀರಂಗಪಟ್ಟಣ, ಶೃಂಗೇರಿಯಲ್ಲಿ ಅನೇಕ ಇತಿಹಾಸಗಳಿವೆ. ಆ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ಮುಂದೆ ಹೇಳುತ್ತೇನೆ ಎಂದರು.

ಬಿಜೆಪಿಯವರು ಜಾತಿ, ಜಾತಿ ಮಧ್ಯೆ ವಿಷಬೀಜ ಬಿತ್ತನೆ ಮಾಡಿ ಚುನಾವಣೆ ಸಮೀಪಿಸುವಾಗ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಇವರ ಹೆಸರಲ್ಲಿ ದ್ವಾರ ಮಾಡುವಂತೆ ಯಾರು ಕೇಳಿದ್ದರು? ಇವರು ಇದ್ದರು ಎಂಬುದಕ್ಕೆ ಎಲ್ಲಾದರೂ ದಾಖಲೆಗಳಿವೆಯೇ? ಈ ಡಿಜಿಪಿ ನಾಲಾಯಕ್. ಅವರು ಸರ್ಕಾರದ ಮಾತು ಕೇಳಿಕೊಂಡು ಇದಕ್ಕೆ ಅವಕಾಶ ನೀಡಿದ್ದಾರೆ. ಕೂಡಲೇ ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಚುನಾವಣಾ ಆಯೋಗ ಕೂಡ ಅವರನ್ನು ಬೇರೆಡೆಗೆ ವರ್ಗಾಯಿಸಬೇಕು.

ಅವರು ಆ ಹುದ್ದೆಗೆ ಬಂದು ಮೂರು ವರ್ಷವಾಯ್ತು. ಇನ್ನೂ ಯಾಕೆ ಅಲ್ಲಿಟ್ಟಿದ್ದಾರೆ. ಕಾಂಗ್ರೆಸ್ ಹೋರಾಟ ಮಾಡಿದರೆ ನಮ್ಮ ಮೇಲೆ 25 ಕೇಸ್ ಹಾಕುತ್ತಾರೆ. ಈ ರೀತಿ ಅನಧಿಕೃತ ದ್ವಾರ ಹಾಕಿದವರ ಮೇಲೆ ಪ್ರಕರಣ ದಾಖಲಿಸಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಇವರು ಸೇರಿದಂತೆ ಯಾರೆಲ್ಲಾ ಸರ್ಕಾರದ ಕೈಗೊಂಬೆಯಾಗಿ ಯಾರೆಲ್ಲಾ ಕೆಲಸ ಮಾಡಿದ್ದಾರೋ ಅವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಪ್ರಧಾನಮಂತ್ರಿ ಕಾರ್ಯಕ್ರಮಕ್ಕೆ ಕರೆತಂದ ಜನರಿಗೆ ಹಣ ನೀಡಿಲ್ಲವಂತೆ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಸರ್ಕಾರದ ಎಲ್ಲ ಆಡಳಿತ ಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅವರು ಏನಾದರೂ ಮಾಡಿಕೊಳ್ಳಲಿ. ಆದರೆ, ಈ ಬಾರಿ ಬಿಜೆಪಿ ಸರ್ಕಾರ ಕಿತ್ತೊಗೆಯಲು ಜನ ತೀರ್ಮಾನ ಮಾಡಿದ್ದಾರೆ’ ಎಂದು ತಿಳಿಸಿದರು.

ಸಿ ಟಿ ರವಿ ಹೈಕಮಾಂಡ್ : ’’ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಹೈಕಮಾಂಡ್ ಆಗಿದ್ದು, ಅವರು ಯಡಿಯೂರಪ್ಪ ಅವರಿಗಿಂತ ಬಹಳ ದೊಡ್ಡವರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ. ಇದು ಬಿಜೆಪಿಯ ಆಂತರಿಕ ವಿಚಾರ. ಬಿಜೆಪಿಯಲ್ಲಿ ಬಹಳ ಹಿಂದಿನಿಂದ ಈ ಬಗ್ಗೆ ಚರ್ಚೆಯಾಗುತ್ತಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಪಿತೂರಿ ನಡೆದಿದ್ದು, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ಪಾತ್ರವಿಲ್ಲ. ಜನ ಯಡಿಯೂರಪ್ಪ ಅವರ ಮುಖ ನೋಡಿ ಬಿಜೆಪಿಗೆ ಮತಹಾಕಿದ್ದರು. ಆದರೆ, ಯಡಿಯೂರಪ್ಪ ಅವರ ಕಣ್ಣೀರು ರಾಜ್ಯ ರಾಜಕಾರಣದ ಚಿತ್ರಣ ಬದಲಿಸಲಿದೆ‘‘ ಎಂದು ತಿಳಿಸಿದರು.

ಹಾಲಿ ಸಚಿವರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಈ ವಿಚಾರವಾಗಿ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆದರೆ ನಾನು ಯಾವುದೇ ಸಚಿವರ ಜತೆ ಸಂಪರ್ಕ ಮಾಡಿಲ್ಲ. ಆದರೆ ಹಾಲಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುತ್ತಿದ್ದು, ಆ ಕ್ಷೇತ್ರಗಳಲ್ಲಿ ನಮ್ಮದೇ ಪಕ್ಷದ ನಾಯಕರು ಕಾರ್ಯಕರ್ತರು ಇದ್ದಾರೆ. ಹೀಗಾಗಿ ಈಗ ಪಕ್ಷಕ್ಕೆ ಅವರ ಅಗತ್ಯವಿಲ್ಲ. ನಾವು ಕೆಲವು ಕ್ಷೇತ್ರಗಳ ಬಗ್ಗೆ ಮಾತ್ರ ಈ ವಿಚಾರವಾಗಿ ಚಿಂತನೆ ಮಾಡುತ್ತಿದ್ದು, ನಾವು ಈಗಲೇ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ’ ಎಂದರು.

ಜಾರಕಿಹೊಳಿ ಸಿ ಡಿ ಬೆದರಿಕೆ ಆರೋಪದ ಬಗ್ಗೆ ಕೇಳಿದಾಗ, ‘ಈ ವಿಚಾರವಾಗಿ ಅವರೇ ಜನಸಾಮಾನ್ಯರಿಗೆ ಸ್ಪಷ್ಟನೆ ನೀಡಬೇಕು. ಬಿಜೆಪಿ ಇಂತಹ ನಾಯಕನನ್ನು ಇಟ್ಟುಕೊಂಡು ಬಳಸಿಕೊಳ್ಳಲಿ. ನಾನು ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದು ಹೇಳಿದರು.

ಮಲೆನಾಡು ಭಾಗದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳ: ಕೆ.ಎಸ್. ಈಶ್ವರಪ್ಪ ಅವರು ಆಜಾನ್ ವಿಚಾರವಾಗಿ ನೀಡಿರುವ ಹೇಳಿಕೆ ಹಾಗೂ ಇಂದು ಬಿಜೆಪಿ ಎಲ್ಲ ಮುಸಲ್ಮಾನರ ವಿರುದ್ದವಾಗಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ತಮ್ಮ ರಾಜಕೀಯ ಅಸ್ತ್ರ ಬಳಸುತ್ತಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಅವರನ್ನು ಸರ್ಕಾರದಿಂದ ಹೊರದಬ್ಬಲಾಗಿದೆ. ಅವರು ಭ್ರಷ್ಟಾಚಾರದ ನಾಯಕರಾಗಿದ್ದು, ಅವರು ಶಿವಮೊಗ್ಗ ಹಾಗೂ ಮಲೆನಾಡಿಗೆ ತಂದಿರುವ ಕಪ್ಪುಚುಕ್ಕೆಯಿಂದ ಆ ಭಾಗ ಚೇತರಿಸಿಕೊಳ್ಳಲು 20-30 ವರ್ಷಗಳೇ ಬೇಕಾಗುತ್ತದೆ.

ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಅಲ್ಲಿನ ಜನರಿಗೆ ಭ್ರಷ್ಟ ಮುಕ್ತ ಆಡಳಿತ, ವ್ಯಾಪಾರ ಸ್ನೇಹಿ ವಾತಾವರಣ ಕಲ್ಪಿಸುವ ಭರವಸೆ ನೀಡಿದ್ದಾರೆ. ಆ ಮೂಲಕ ಶಿವಮೊಗ್ಗದ ಪರಿಸ್ಥಿತಿ ಸರಿಯಾಗಿಲ್ಲ. ಹೀಗಾಗಿ ಯಾವುದೇ ಉದ್ಯಮಿಗಳು ಅಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು, ಮೋದಿ ಅವರು, ಈಶ್ವರಪ್ಪ ಏನೇ ಭಾಷಣ ಮಾಡಿದರೂ ಪ್ರಯೋಜನವಿಲ್ಲ’ ಎಂದು ತಿಳಿಸಿದರು.

ಗುತ್ತಿಗೆದಾರರಿಗೆ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ 25 ಸಾವಿರ ಕೋಟಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಗುತ್ತಿಗೆದಾರರು ತಮ್ಮ ನೋವನ್ನು ಸರ್ಕಾರಕ್ಕೆ ಹೇಳಿಕೊಳ್ಳುತ್ತಿದ್ದಾರೆ. ಸರ್ಕಾರ ಅವರಿಗೆ ನೀಡಬೇಕಾಗಿರುವ ಬಾಕಿ ಪಾವತಿಸುವುದು ಕರ್ತವ್ಯವಾಗಿದೆ. ನಮಗೆ ಅದರಲ್ಲಿ ಅಭ್ಯಂತರವಿಲ್ಲ. ಸರ್ಕಾರ ಹೊಸ ಟೆಂಡರ್ ಕರೆದು ಮುಂಗಡ ಪಾವತಿಗಾಗಿ 25 ಸಾವಿರ ಕೋಟಿಯಷ್ಟು ಟೆಂಡರ್ ಕರೆಯುತ್ತಿದ್ದಾರೆ. ನಾನು ಈ ವಿಚಾರವಾಗಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಯಾವುದೇ ಇಲಾಖೆಯಲ್ಲಿ ಹೊಸ ಟೆಂಡರ್, ಅಲ್ಪಾವಧಿಯ ಟೆಂಡರ್ ಕರೆಯಬಾರದು ಎಂದು ತಿಳಿಸುತ್ತೇವೆ. ಈ ಬಗ್ಗೆ ಲೋಕಾಯುಕ್ತ ಗಮನಕ್ಕೂ ತರುತ್ತೇವೆ. ಇವರ ಮಾತು ಕೇಳಿ ಅಧಿಕಾರಿಗಳು ಇದನ್ನು ಮಾಡಿದರೆ ಮುಂದೆ ನಿಮಗೆ ತೊಂದರೆ ಎದುರಾಗಲಿದೆ ಎಂದು ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ತಿಳಿಸಿದರು.

ರಾಜ್ಯ ನಾಯಕರು ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಟಿಕೆಟ್ ಲಾಭಿ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದರಲ್ಲಿ ತಪ್ಪೇನಿಲ್ಲ. ಎಲ್ಲ ನಾಯಕರಿಗೂ ತಮ್ಮ ಸಮುದಾಯದವರು, ಸ್ನೇಹಿತರು, ಆಪ್ತರು ಟಿಕೆಟ್ ಕೊಡಿಸುವಂತೆ ಕೇಳಿರುತ್ತಾರೆ. ಹೀಗಾಗಿ ಅವರು ಲಾಭಿ ಮಾಡುವುದರಲ್ಲಿ ತಪ್ಪಿಲ್ಲ’ ಎಂದರು.

ಇದನ್ನೂ ಓದಿ : ನಾನು ಎಲ್ಲಿಗೂ ಹೋಗುವುದಿಲ್ಲ, ಬಿಜೆಪಿಯಲ್ಲೇ ಇರುತ್ತೇನೆ : ಸಚಿವ ವಿ ಸೋಮಣ್ಣ ಸ್ಪಷ್ಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.