ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿವಿಧ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ತಮ್ಮ ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ಭೇಟಿ ಹಾಗೂ ಸಭೆ ನಡೆಸಿ ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ಇಸ್ಕಾನ್ನ ನವೀನ್ ಕೃಷ್ಣ ದಾಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಸನ್ಮಾನಿಸಿ, ಪ್ರಸಾದ ನೀಡಿದರು. ಇದಾದ ಬಳಿಕ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಮೆ. ಫಾದರ್ ಸಿ.ಫ್ರಾನ್ಸಿಸ್, ಕಾಂಗ್ರೆಸ್ ಮುಖಂಡ ಪ್ರವೀಣ್ ಪೀಟರ್ ಡಿಕೆಶಿಯನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಇದೇ ವೇಳೆ ಕಾಂತರಾಜ್ ಉಪಸ್ಥಿತರಿದ್ದರು.
ಹರಪನಹಳ್ಳಿ ನಾಯಕರ ಜೊತೆ ಸಭೆ: ಈ ಭೇಟಿಯ ಬಳಿಕ ಕೆಪಿಸಿಸಿ ಕಚೇರಿಗೆ ತೆರಳಿದ ಡಿ.ಕೆ.ಶಿವಕುಮಾರ್, ಬಳ್ಳಾರಿಯ ಹರಪ್ಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್.ಶಂಕರ್ ಉಪಸ್ಥಿತರಿದ್ದರು.
ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ರಚಿಸುವುದರಿಂದ ಕಾಂಗ್ರೆಸ್ಗೆ ಯಾವ ರೀತಿ ಅನುಕೂಲ ಅಥವಾ ಅನಾನುಕೂಲ ಆಗಲಿದೆ ಎಂಬ ವಿಚಾರದ ಮಾಹಿತಿ ಪಡೆದುಕೊಂಡರು.