ETV Bharat / state

ಕಾಂಗ್ರೆಸ್ ಮಾಧ್ಯಮ ವಕ್ತಾರರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಭೆ - DK Shivakumar meeting with congress media spokesman

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಕೆಪಿಸಿಸಿ ಮಾಧ್ಯಮ ವಕ್ತಾರರ ಸಭೆ ನಡೆಸಿದರು. ಸಭೆಯಲ್ಲಿ ತಮ್ಮ ವಿರುದ್ಧ ನಡೆಸುವ ಅಪಪ್ರಚಾರಕ್ಕೆ ಸರಿಯಾದ ಉತ್ತರ ನೀಡುವಂತೆ ಸಲಹೆ ನೀಡಲಾಯಿತು.

DK Shivakumar meeting with congress media spokesman
ಮಾಧ್ಯಮ ವಕ್ತಾರರ ಸಭೆ ನಡೆಸಿದ ಡಿಕೆಶಿ
author img

By

Published : Oct 17, 2020, 7:17 PM IST

Updated : Oct 17, 2020, 10:27 PM IST

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಶನಿವಾರ ಕೆಪಿಸಿಸಿ ಮಾಧ್ಯಮ ವಕ್ತಾರರ ಸಭೆ ನಡೆಸಿದರು.

DK Shivakumar meeting with congress media spokesman
ಮಾಧ್ಯಮ ವಕ್ತಾರರ ಸಭೆ ನಡೆಸಿದ ಡಿಕೆಶಿ

ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್, ಉಪ ಮುಖ್ಯಸ್ಥ ವಿ.ಆರ್. ಸುದರ್ಶನ್, ಮಾಜಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ, ಎಂಎಲ್ಸಿ ನಾರಾಯಣಸ್ವಾಮಿ, ಕಾನೂನು ವಿಭಾಗದ ಅಧ್ಯಕ್ಷ ಪೊನ್ನಣ್ಣ ಮತ್ತಿತರರು ಭಾಗವಹಿಸಿದ್ದರು.

ರಾಜ್ಯದಲ್ಲಿ ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆ ಹಾಗೂ ಪರಿಷತ್​ನ ನಾಲ್ಕು ಕ್ಷೇತ್ರಗಳ ಚುನಾವಣೆ ಎದುರಾಗಿದ್ದು, ಈ ಸಂದರ್ಭ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಅತ್ಯಂತ ವ್ಯವಸ್ಥಿತವಾಗಿ ಪ್ರತಿನಿಧಿಸಬೇಕು. ರಾಜ್ಯ ಕಾಂಗ್ರೆಸ್ ಪಕ್ಷದ ಸಾಧನೆಗಳು ಹಾಗೂ ಹಿಂದೆ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಬೇಕು. ಅತ್ಯಂತ ಪ್ರಮುಖವಾಗಿ ರಾಜ್ಯ ಬಿಜೆಪಿ ನಾಯಕರು ಹಾಗೂ ಸರ್ಕಾರ ನಮ್ಮ ವಿರುದ್ಧ ನಡೆಸುವ ಅಪಪ್ರಚಾರಕ್ಕೆ ಸರಿಯಾದ ಉತ್ತರವನ್ನು ನೀಡುವಲ್ಲಿ ಮಾಧ್ಯಮ ವಿಭಾಗದ ಅತ್ಯಂತ ಪ್ರಧಾನವಾಗಿ ಕಾರ್ಯನಿರ್ವಹಿಸಬೇಕು ಎಂದು ಡಿಕೆಶಿ ಇದೇ ಸಂದರ್ಭ ಸಲಹೆ ನೀಡಿದರು. ರಾಜ್ಯದ ಇತರ ಭಾಗದ ಮಾಧ್ಯಮ ವಕ್ತಾರರ ಜೊತೆ ಡಿಕೆಶಿ ಇದೇ ಸಂದರ್ಭ ಆನ್​ಲೈನ್​ ಮೂಲಕ ಸಮಾಲೋಚಿಸಿದರು.

Last Updated : Oct 17, 2020, 10:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.