ETV Bharat / state

ಕಾಂಗ್ರೆಸ್ ಪುನರ್ ರಚನೆಗೆ ಸಿದ್ಧತೆ: ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಡಿಕೆಶಿ ಸಭೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಕಾರ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ಆರಂಭವಾಗಿದೆ.

D.K.Shivakumar meeting with KPCC working president
ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಡಿಕೆಶಿ ಸಭೆ
author img

By

Published : Jun 26, 2021, 1:39 PM IST

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಂಚೂಣಿ ಘಟಕಗಳ ಪುನರ್ ರಚನೆ ನಿರ್ಧರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಕಾರ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ಆರಂಭವಾಗಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಮುಂಚೂಣಿ ಘಟಕಗಳ ಪುನರ್ ರಚನೆ, ಕೆಲವು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಜೊತೆಗೆ ಬ್ಲಾಕ್ ಕಾಂಗ್ರೆಸ್ ಪುನರ್ ರಚನೆ ಸಿದ್ಧತೆ ಕುರಿತು ಚರ್ಚೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಧ್ರುವನಾರಾಯಣ್, ಸಲೀಂ ಅಹ್ಮದ್ ಭಾಗಿಯಾಗಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಡಿಕೆಶಿ ಸಭೆ..

ಐದು ವಲಯಗಳನ್ನ ಪ್ರತಿನಿಧಿಸಲಿರುವ ಕಾರ್ಯಾಧ್ಯಕ್ಷರು ಪಕ್ಷದಲ್ಲಿ ಮುಂಬರುವ ದಿನಗಳಲ್ಲಿ ಆಗುವ ಮಹತ್ವದ ಬದಲಾವಣೆಗಳ ಕುರಿತು ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

ರೈತರ ವಶಕ್ಕೆ ಪಡೆದಿದ್ದು ಸರಿಯಲ್ಲ:

ಸಭೆಗೆ ತೆರಳುವ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಪೊಲೀಸರು ರೈತ ಮುಖಂಡರನ್ನು ವಶಕ್ಕೆ ಪಡೆದಿದ್ದು ಸರಿಯಲ್ಲ. ದೇಶದಲ್ಲಿ ನವೆಂಬರ್​​ ತಿಂಗಳಿನಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ಇಷ್ಟು ದೊಡ್ಡ ಹೋರಾಟ ಎಂದೂ ನಡೆದಿರಲಿಲ್ಲ.

ರೈತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಚಿಂತೆಯಿಲ್ಲ. ರೈತ ವಿರೋಧಿ ಕಾನೂನುಗಳನ್ನ ತಂದಿದ್ದಾರೆ. ಎಪಿಎಂಸಿಗಳನ್ನ ರೈತರಿಗೆ ಅನುಕೂಲಕ್ಕೆ ತರಲಾಗಿತ್ತು. ಅದನ್ನೂ ಇಂದು ವ್ಯಾಪಾರಿಗಳ ಕೈಗೆ ಕೊಟ್ಟಿದ್ದಾರೆ. ರೈತ ವಿರೋಧಿ ಪಕ್ಷ ಅಂದ್ರೆ ಅದು ಬಿಜೆಪಿ. ಹಿಂದೆ ನಮ್ಮ ಅವಧಿಯಲ್ಲಿ ರೈತ ಪರ ಕಾನೂನು ತಂದಿದ್ದೆವು. ರಾಜ್ಯದಲ್ಲಿ ಗೇಣಿದಾರದ ಪರ ಅರಸು ಕಾನೂನು ತಂದಿದ್ದರು. ಪ್ರತಿಭಟನಾನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರು ಇನ್ನೇನು ಮಾಡೋಕೆ ಸಾಧ್ಯ? ಎಂದು ಪ್ರಶ್ನಿಸಿದರು.

ಒಂದು ತಿಂಗಳ ಅಭಿಯಾನ:
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಕಾರ್ಯಾಧ್ಯಕ್ಷರ ಸಭೆಯನ್ನ ಕರೆಯಲಾಗಿದೆ. ಪಕ್ಷ ಸಂಘಟನೆ, ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಚರ್ಚೆ ನಡೆಯಲಿದೆ. ವಿಭಾಗವಾರು ಬದಲಾವಣೆ ಕುರಿತು ಚರ್ಚೆಯಾಗಲಿದೆ.

ಕೋವಿಡ್ ವಿಚಾರದ ಬಗ್ಗೆಯೂ ಚರ್ಚೆಯಾಗಲಿದೆ. ಜಿಲ್ಲೆಗಳಲ್ಲಿ ಪದಾಧಿಕಾರಿಗಳ ಬದಲಾವಣೆಯಿದೆ. ಕೆಪಿಸಿಸಿ ಪುನರ್​​ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ತೇವೆ. ಸಂಜೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಸಭೆ ಇದೆ. ಜು.1 ರಿಂದ 30 ರವರೆಗೆ ಅಭಿಯಾನ ನಡೆಯಲಿದೆ. ಕೋವಿಡ್ ಸಂಬಂಧ ಅಭಿಯಾನ ಆರಂಭಿಸುತ್ತೇವೆ ಎಂದು ವಿವರಿಸಿದರು.

ಇದನ್ನೂ ಓದಿ: ಅಥಣಿಯಲ್ಲಿ ಆರ್​ಎಸ್​ಎಸ್ ಹಿರಿಯ ಮುಖಂಡರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.