ETV Bharat / state

ಕೋವಿಡ್ ದುಃಸ್ಥಿತಿ: ಮಧ್ಯಪ್ರದೇಶ ಮಾಜಿ ಸಿಎಂ ಕಮಲ್​ನಾಥ್​ ಜತೆ DKS ಸಮಾಲೋಚನೆ - ಬಿಜೆಪಿ ಸರ್ಕಾರದ ವಿರುದ್ದ ಡಿ ಕೆ ಶಿವಕುಮಾರ್​ ಆಕ್ರೋಶ

ಕೋವಿಡ್ ಸಮಯದಲ್ಲಿ ಬಿಜೆಪಿಯ ಸ್ವಾರ್ಥ ರಾಜಕಾರಣ, ದುರಾಡಳಿತ, ಭ್ರಷ್ಟಾಚಾರದಿಂದ ರೈತರು, ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಅವರಿಗೆ ಸರ್ಕಾರದಿಂದ ಸೂಕ್ತ ನೆರವು ಸಿಕ್ಕಿಲ್ಲ ಎಂದು ಡಿ ಕೆ ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

dk-shivakumar-meets-with-former-madhya-pradesh-cm-kamal-nath
ಮಧ್ಯಪ್ರದೇಶ ಮಾಜಿ ಸಿಎಂ ಕಮಲ್​ನಾಥ್​ ಜತೆ ಡಿ ಕೆ ಶಿವಕುಮಾರ್ ಸಮಾಲೋಚನೆ
author img

By

Published : Aug 5, 2021, 3:46 PM IST

ನವದೆಹಲಿ/ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿಯಾದರು. ಕರ್ನಾಟಕ, ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೋವಿಡ್ ದುಃಸ್ಥಿತಿ ಕುರಿತು ಚರ್ಚೆ ನಡೆಸಿದರು.

ದೆಹಲಿ ಪ್ರವಾಸದಲ್ಲಿರುವ ಡಿಕೆಶಿ ಅವರು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಕಮಲ್ ನಾಥ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲಿ ಉಭಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿಯ ಸತ್ಯಾಂಶ ಮುಚ್ಚಿಟ್ಟು, ಸುಳ್ಳು ಮಾಹಿತಿ ಮೂಲಕ ಜನರನ್ನು ದಾರಿತಪ್ಪಿಸುತ್ತಿರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಕೋವಿಡ್ ಸಾವಿನ ಪ್ರಮಾಣ ಕುರಿತು ಸರ್ಕಾರಗಳು ಸುಳ್ಳು ಲೆಕ್ಕ ನೀಡುತ್ತಿವೆ. ಸರ್ಕಾರ ಹೇಳುತ್ತಿರುವ ಅಂಕಿ - ಅಂಶಕ್ಕೂ ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಸಂಖ್ಯೆಗೂ ಅಜಗಜಾಂತರವಿದೆ. ಕೋವಿಡ್​ನಿಂದ ಸತ್ತವರ ಮಾಹಿತಿಯನ್ನು ಸ್ಮಶಾನ, ಚಿತಾಗಾರಗಳಿಂದ ಪಡೆಯುವಂತಹ ದುಃಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶವನ್ನು ಶಿವಕುಮಾರ್ ಅವರು ಗಮನಕ್ಕೆ ತಂದಿದ್ದಾರೆ.

ಬೆಂಗಳೂರು ಹಾಗೂ ಕರ್ನಾಟಕ ಮೆಡಿಕಲ್ ಟೂರಿಸಂ, ಐಟಿ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಆದರೆ, ಬಿಜೆಪಿ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿದೆ. ಜಾಗತಿಕ ಮಟ್ಟದಲ್ಲಿ ರಾಜ್ಯದ ಘನತೆ - ಗೌರವ ನಾಶವಾಗಿದೆ. ಕೆಲವು ದೇಶಗಳು ಇಲ್ಲಿಂದ ಹೋಗುವವರಿಗೆ ನಿರ್ಬಂಧ ಹೇರಿವೆ. ಇಲ್ಲಿನ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸ್ವಾರ್ಥ ರಾಜಕಾರಣ

ಕೋವಿಡ್ ಸಮಯದಲ್ಲಿ ಬಿಜೆಪಿಯ ಸ್ವಾರ್ಥ ರಾಜಕಾರಣ, ದುರಾಡಳಿತ, ಭ್ರಷ್ಟಾಚಾರದಿಂದ ರೈತರು, ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಅವರಿಗೆ ಸರ್ಕಾರದಿಂದ ಸೂಕ್ತ ನೆರವು ಸಿಕ್ಕಿಲ್ಲ. ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ಕಾಂಗ್ರೆಸ್ ಯಾವ ರೀತಿ ಕಾರ್ಯಕ್ರಮ ವಿಸ್ತರಿಸಬಹುದು ಎಂಬ ವಿಚಾರವಾಗಿಯೂ ಉಭಯ ನಾಯಕರು ಚರ್ಚೆ ನಡೆಸಿದರು.

ಓದಿ: 'ಬಾಯಲ್ಲಿ ಭೀಮ, ಹೃದಯದಲ್ಲಿ ರಾಮ, ಕೊಳ್ಳೇಗಾಲ ಜನತೆಗೆ ಪಂಗನಾಮ'

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.