ETV Bharat / state

ಸದಾ ಸುದ್ದಿಯಲ್ಲಿರಬೇಕೆಂದು ಹುಚ್ಚರು ಮಾತ್ರ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ : ಡಿ ಕೆ ಶಿವಕುಮಾರ್ - DK Shivakumar talk about vinay kulakarni

ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ..

dk-shivakumar
ಡಿ. ಕೆ ಶಿವಕುಮಾರ್
author img

By

Published : Aug 23, 2021, 6:01 PM IST

Updated : Aug 23, 2021, 6:17 PM IST

ಬೆಂಗಳೂರು : ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಸದಾಶಿವನಗರ ನಿವಾಸದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳ ಜತೆ ಸೋಮವಾರ ಪ್ರತ್ಯೇಕ ಮಾತುಕತೆ ನಡೆಸಿ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೇಶದಲ್ಲಿ ಕೋವಿಡ್ ಜತೆಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಇನ್ನಿಲ್ಲದ ತೊಂದರೆ ಆಗುತ್ತಿದೆ.

ಇದೆಲ್ಲವನ್ನು ಮರೆಮಾಚಸಲು ಈ ರೀತಿ ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಇಂತಹ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ವಿನಯ್ ಕುಲಕರ್ಣಿ ಜತೆ ಪಕ್ಷ ಇದೆ

ವಿನಯ್ ಕುಲಕರ್ಣಿ ಅವರು ಪಕ್ಷದ ಹಿರಿಯ ನಾಯಕರು. ಮಂತ್ರಿಯಾಗಿ ನನ್ನೊಟ್ಟಿಗೆ ಕೆಲಸ ಮಾಡಿದ್ದಾರೆ. ದ್ವೇಷ ರಾಜಕೀಯದಿಂದ ಅವರಿಗೆ ನೋವಾಗಿದೆ. ನ್ಯಾಯಾಲಯದಲ್ಲಿ ಅವರ ಪ್ರಕರಣ ಯಾವ ಹಂತದಲ್ಲಿದೆ ಎಂದು ಗೊತ್ತಿದೆ.

ಚುನಾವಣೆಗೂ ಮುನ್ನ ಹಾಗೂ ಚುನಾವಣೆ ನಂತರ ಯಾವ, ಯಾವ ನಾಯಕರು ಯಾವ ರೀತಿ ಭಾಷಣ ಮಾಡಿದ್ದಾರೆ ಎಂಬುದು ನಿಮ್ಮ ಬಳಿಯೇ ಇದೆ. ಅವರು ಜೈಲಿನಲ್ಲಿ ಹಾಗೂ ಹೊರಗೆ ಅನುಭವಿಸಿದ ನೋವು ಹಂಚಿಕೊಂಡಿದ್ದಾರೆ.

ಅದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಹೋಗುತ್ತಾರೆ. ಅವರ ಕುಟುಂಬ, ಕಾರ್ಯಕರ್ತರು, ಪಕ್ಷ ಅವರ ಬೆನ್ನಿಗೆ ನಿಲ್ಲಲಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಅವರಿಗೆ ಹಾಗೂ ನನಗೆ ಅರಿವಿದೆ. ಕಾನೂನಿನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ಅಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು

ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ. ಬೆಂಗಳೂರು ಶಿಕ್ಷಣ ಹಬ್ ಆಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು ಎಂದು ಹೇಳಿದರು.

ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿ ಎಂದು ತಿಳಿಸಿದರು.

ಅಫ್ಘನ್ ನಿಯೋಗ ಭೇಟಿ

Madhu Bangarappa visits
ಮಧು ಬಂಗಾರಪ್ಪ ಭೇಟಿ

ಬೆಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿಯಾಗಿ ಅಫ್ಘಾನಿಸ್ತಾನದ ಬೆಳವಣಿಗೆಗಳಿಂದ ಅಲ್ಲಿರುವ ತಮ್ಮ ಕುಟುಂಬ ಸದಸ್ಯರು, ಬಂಧುಗಳನ್ನು ಸಂಪರ್ಕಿಸಲು ಆಗದೆ, ಅವರ ಪರಿಸ್ಥಿತಿ ಬಗ್ಗೆ ತಮಗಾಗಿರುವ ಆತಂಕವನ್ನು ನಿವೇದಿಸಿಕೊಂಡರು. ಜತೆಗೆ ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿದರು. ಜಹಿಉಲ್ಲಾ ಸಾದಿಕ್, ಒಬೆದುಲ್ಲಾ ಸಾದಿಕಿಲಿ, ದಿಯಾನ ಫರ್ಜಾನ್, ಹಾರುನ್ ಬುರಾನ್ ಮತ್ತಿತರರು ನಿಯೋಗದಲ್ಲಿದ್ದರು.

ಮಧು ಬಂಗಾರಪ್ಪ ಭೇಟಿ

ಮಾಜಿ ಶಾಸಕ ಮಧು ಬಂಗಾರಪ್ಪ ಹಾಗೂ ಸೊರಬದ ಅವರ ಬೆಂಬಲಿಗ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಓದಿ: ಆ.26ರಿಂದ ಪ್ರತಿಜ್ಞಾ ಪಂಚಾಯತ್‌ ಅಭಿಯಾನ : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

Last Updated : Aug 23, 2021, 6:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.