ETV Bharat / state

ಶಿವಮೊಗ್ಗದ ಯುವಕನ ಕೊಲೆಗೂ, ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ: ಡಿಕೆಶಿ ಸ್ಪಷ್ಟನೆ - hijab controversy

ಶಿವಮೊಗ್ಗದ ಯುವಕನ ಕೊಲೆಗೂ ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕೊಲೆಯ ಹಿಂದೆ ಕೊಲೆಯ ಆರೋಪಿಗಳು ಹಾಗೂ ಮೃತನ ಮಧ್ಯೆ ವೈಯಕ್ತಿಕ ಕಾರಣಗಳಿವೆ ಎಂಬ ಮಾಧ್ಯಮ ವರದಿಗಳನ್ನು ನೋಡುತ್ತಿದ್ದೇವೆ. ಹೀಗಾಗಿ, ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ..

ಡಿಕೆಶಿ
ಡಿಕೆಶಿ
author img

By

Published : Feb 21, 2022, 2:20 PM IST

Updated : Feb 21, 2022, 2:28 PM IST

ಬೆಂಗಳೂರು : ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಸಚಿವರ ಹೇಳಿಕೆ ವಿರುದ್ಧ ಕಳೆದ ನಾಲ್ಕು ದಿನಗಳಿಂದ ನಾವು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಎಲ್ಲ ಶಾಸಕರೂ ಅಲ್ಲೇ ಮಲಗುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಲಾಗಿದೆ. ಇದನ್ನು ಕಾಪಾಡುವ ಜವಾಬ್ದಾರಿ ನಮ್ಮದು. ಹೀಗಾಗಿ, ನಾವು ಹೋರಾಟ ಮಾಡುತ್ತಿದ್ದೇವೆ. ಸಚಿವ ಈಶ್ವರಪ್ಪ ಖಂಡನೀಯ ಹೇಳಿಕೆ ನೀಡಿದ್ದು, ರಾಜ್ಯಪಾಲರು ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ.

ಕೇಂದ್ರದ ಯಾವುದೇ ಸಚಿವರು ಅವರ ವಜಾಕ್ಕೆ ಸಲಹೆ ಮಾಡಿಲ್ಲ. ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸುವುದು ಹೆಮ್ಮೆ ಎಂದು ಅವರು ಭಾವಿಸಿದ್ದಾರೆ. ನಾವು ಈ ವಿಚಾರವಾಗಿ ಹೋರಾಟ ನಡೆಸುವಾಗ ಶಿವಮೊಗ್ಗದಲ್ಲಿ ವೈಯುಕ್ತಕ ವಿಚಾರವಾಗಿ ಕೊಲೆ ನಡೆದಿದೆ. ಈ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಕೃತ್ಯ ಎಸಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಸುದ್ದಿಗಾರರ ಜೊತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಈ ವಿಚಾರದಲ್ಲಿ ರಾಜಕೀಯ ಹೇಳಿಕೆಯನ್ನು ನಾನು ನೀಡುವುದಿಲ್ಲ. ಈಶ್ವರಪ್ಪ ನನ್ನ ವಿರುದ್ಧ ಹೇಳಿಕೆ ನೀಡುತ್ತಿರಬಹುದು. ನನ್ನ ವಿರುದ್ಧ ಮಾತನಾಡದಿದ್ದರೆ ಅವರ ಪಕ್ಷದಲ್ಲಿ ಅವರಿಗೆ ಸ್ಥಾನ ಸಿಗುವುದಿಲ್ಲ ಎಂದು ಅರಿತು ಈ ರೀತಿ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ.

ಮೊದಲು ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು. ಅವರನ್ನು ವಜಾ ಮಾಡಿದರೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ. ಈ ಸರ್ಕಾರ ಈಶ್ವರಪ್ಪ ಅವರನ್ನು ಎಷ್ಟು ದಿನಗಳ ಕಾಲ ರಕ್ಷಣೆ ಮಾಡಿಕೊಂಡು ಇರುತ್ತದೆಯೋ ಅಲ್ಲಿಯವರೆಗೂ ದೇಶದಲ್ಲಿ ಈ ಪರಿಸ್ಥಿತಿ ಮುಂದುವರಿಯಲಿದೆ.

ವೈಯಕ್ತಿಕ ಗಲಾಟೆಗಳಿಂದ ಶಿವಮೊಗ್ಗದಲ್ಲಿ ಹತ್ಯೆ ನಡೆದಿದೆ ಎಂದು ಮಾಧ್ಯಮಗಳು ಮಾಹಿತಿ ನೀಡುತ್ತಿದ್ದು, ಇಂತಹ ಕೃತ್ಯ ನಡೆಯಬಾರದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಈ ತಪ್ಪು ಯಾರೇ ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಿಂದಲೇ ಇಂತಹ ಘಟನೆ ನಡೆಯುತ್ತಿದೆ ಎಂಬ ಈಶ್ವರಪ್ಪ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, 'ನಮಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ರಾಷ್ಟ್ರಧ್ವಜ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಇದರ ಹೊರತಾಗಿ ಇಂತಹ ಪ್ರಚೋದನಾಕಾರಿ ಹೇಳಿಕೆಗಳಿಗೆಲ್ಲ ನಾನು ಉದ್ರೇಕಗೊಳ್ಳುವುದಿಲ್ಲ.

ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ಪ್ರಕರಣ ದಾಖಲಿಸಿ. ಸಚಿವರು, ಸರ್ಕಾರ, ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳಬಹುದು. ಇಂತಹ ವಿಚಾರದಲ್ಲಿ ನನ್ನನ್ನು ಕ್ಷಮಿಸಬಾರದು. ನನ್ನ ವಿರುದ್ಧ ಕ್ರಮ ಕೈಗೊಳ್ಳುವುದು ಅವರ ಕರ್ತವ್ಯ. ದೇಶದ ಐಕ್ಯತೆ ಬಹಳ ಪ್ರಮುಖ. ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾವು ನಮ್ಮ ಇತಿಹಾಸ, ದೇಶದ ಗೌರವ, ಸಂವಿಧಾನ ರಕ್ಷಣೆಗೆ ಬದ್ಧವಾಗಿದ್ದೇವೆ' ಎಂದು ಉತ್ತರಿಸಿದರು.

ಕೊಲೆಯಾದ ವ್ಯಕ್ತಿ ಹಿಜಾಬ್ ಹಾಗೂ ಕೇಸರಿ ವಿವಾದದಲ್ಲಿ ಭಾಗಿಯಾಗಿದ್ದು, ಈ ಕೊಲೆಗೆ ವಿವಾದ ಕಾರಣವಿರಬಹುದೇ ಎಂಬ ಪ್ರಶ್ನೆಗೆ, 'ಈ ಕೊಲೆಗೂ ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕೊಲೆಯ ಹಿಂದೆ ಕೊಲೆಯ ಆರೋಪಿಗಳು ಹಾಗೂ ಮೃತನ ಮಧ್ಯೆ ವೈಯಕ್ತಿಕ ಕಾರಣಗಳಿವೆ ಎಂಬ ಮಾಧ್ಯಮ ವರದಿಗಳನ್ನು ನೋಡುತ್ತಿದ್ದೇವೆ. ಹೀಗಾಗಿ, ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ' ಎಂದು ಸ್ಪಷ್ಟಪಡಿಸಿದರು.

ಈ ಹತ್ಯೆಗೆ ಧಾರ್ಮಿಕ ಬಣ್ಣ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಸಿದ್ದರಾಮಯ್ಯನವರು ಹೇಳಿರುವಂತೆ ಈಶ್ವರಪ್ಪನ ಮಿದುಳಿಗೂ ನಾಲಿಗೆಗೂ ಸಂಪರ್ಕವೇ ಇಲ್ಲ. ಈ ಹತ್ಯೆ ಯಾಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೆ ನೀಡಬೇಕು. ಆದರ ಸಾಮಾನ್ಯ ಪರಿಜ್ಞಾನವೂ ಇಲ್ಲದೆ ಆತ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಇಂತಹ ಹೇಳಿಕೆ ನೀಡುತ್ತಿರುವುದಕ್ಕೆ ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಿ. ಅವರು ದೇಶಕ್ಕೆ ತ್ಯಾಗ ಮಾಡಿರುವ ರೀತಿಯಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರು ಬರೀ ಹಾಲಿನ ಅಭಿಷೇಕ ಅಲ್ಲ, ತುಪ್ಪದ ಅಭಿಷೇಕ ಮಾಡಿಸಿಕೊಳ್ಳಲಿ' ಎಂದು ಛೇಡಿಸಿದರು.

ಈ ಕೃತ್ಯವನ್ನು ನಿಮ್ಮ ವಿರುದ್ಧದ ದಾಳಿಗೆ ಬಳಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿ, 'ಅವರು ದಾಳಿ ಮಾಡಲಿ. ಅವರು ಸದಾ ನನ್ನ ಮೇಲೆ ದಾಳಿ ಮಾಡುತ್ತಲೇ ಇದ್ದಾರೆ. ನನ್ನ ವಿರುದ್ಧ ದಾಳಿ ಮಾಡದಿದ್ದರೆ ಅವರಿಗೆ ರಾಜಕೀಯ ನೆಲೆ ಇರುವುದಿಲ್ಲ. ಹೀಗಾಗಿ, ನನ್ನ ಹಾಗೂ ನಮ್ಮ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ' ಎಂದು ಉತ್ತರಿಸಿದರು.

Last Updated : Feb 21, 2022, 2:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.