ETV Bharat / state

ಆಮ್‌ ಆದ್ಮಿ ಪಕ್ಷ ಸೇರಿದ ಡಿ ಕೆ ಶಿವಕುಮಾರ್ ಸಂಬಂಧಿ ಸಿ ಪಿ ಶರತ್‌ ಚಂದ್ರ.. - dk shivakumar relative cp sharat chandra

ಆಮ್‌ ಆದ್ಮಿ ಪಕ್ಷ ಸೇರಿದ ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರಿಯ ಪತಿ ಸಿ.ಪಿ. ಶರತ್‌ ಚಂದ್ರ - ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಪ್​ ಸೇರ್ಪಡೆ- ಶರತ್​ಚಂದ್ರ ಹೇಳಿಕೆ

dk shivakumar relative cp sharath chandra  joins aam aadmi party
ಆಮ್‌ ಆದ್ಮಿ ಪಕ್ಷ ಸೇರಿದ ಡಿಕೆಶಿ ಸಂಬಂಧಿ ಸಿ ಪಿ ಶರತ್‌ ಚಂದ್ರ..
author img

By

Published : Jan 30, 2023, 7:54 PM IST

ಬೆಂಗಳೂರು: ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರಿಯ ಪತಿ ಸಿ.ಪಿ.ಶರತ್‌ ಚಂದ್ರ ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಭಾಸ್ಕರ್‌ ರಾವ್‌ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಪಕ್ಷದ ಸಂಘಟನೆಗೆ ಆನೆ ಬಲ ತಂದುಕೊಡಲಿದೆ: ಸೋಮವಾರ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜನಾನುರಾಗಿ ನಾಯಕ ಸಿ.ಪಿ. ಶರತ್‌ ಚಂದ್ರ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿರುವುದು ಆ ಭಾಗದಲ್ಲಿನ ಪಕ್ಷದ ಸಂಘಟನೆಗೆ ಆನೆ ಬಲ ತಂದುಕೊಡಲಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಂತಾದ ಸಾಂಪ್ರದಾಯಿಕ ಪಕ್ಷಗಳ ನಿಷ್ಕ್ರಿಯತೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನಿಲುವುಗಳಿಂದಾಗಿ ಆ ಪಕ್ಷಗಳ ಪ್ರಾಮಾಣಿಕ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿದ್ದಾರೆ ಎಂದು ಹೇಳಿದರು.

ಬ್ಯಾಂಕ್‌ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದ್ದರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್‌ ರಾವ್ ಮಾತನಾಡಿ, ಕಾನೂನು ಪದವೀಧರರ ಸಿ.ಪಿ. ಶರತ್‌ ಚಂದ್ರ ಉದ್ಯಮಿ ಹಾಗೂ ರೈತರು ಕೂಡ ಹೌದು. ವಿಜಯ ಬ್ಯಾಂಕ್‌ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಅಲ್ಲಿನ ಉದ್ಯೋಗಿಗಳ ಸಂಘದ ಉಪಾಧ್ಯಕ್ಷರಾಗಿ, ಬ್ಯಾಂಕ್‌ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಿದ್ದರು. 2013, 2014, 2019ರ ಚುನಾವಣೆಗಳ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ ಅನುಭವ ಹೊಂದಿದ್ದಾರೆ. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌, ನೋಟು ಅಮಾನ್ಯೀಕರಣ ವಿರುದ್ಧದ ಹೋರಾಟಗಳಲ್ಲಿ ಕೂಡ ಸಕ್ರಿಯವಾಗಿ ಸಿ.ಪಿ.ಶರತ್‌ ಚಂದ್ರ ತೊಡಗಿಸಿಕೊಂಡಿದ್ದರು.

ಹತ್ತುಹಲವು ರೀತಿಯ ಸೇವೆಗಳಲ್ಲಿ ಭಾಗಿ: ಕೋವಿಡ್‌ ಸಮಯದಲ್ಲಿ ರೇಷನ್‌ ಕಿಟ್‌ ವಿತರಣೆ, ಔಷಧ ವಿತರಣೆ, ರಕ್ತದಾನ ಶಿಬಿರಗಳ ಆಯೋಜನೆ, ಆಸ್ಪತ್ರೆಗೆ ದಾಖಲಾಗಲು ನೆರವು, ಮೃತ ರೋಗಿಗಳ ಅಂತ್ಯಕ್ರಿಯೆಗೆ ಸಹಾಯ ಸೇರಿದಂತೆ ಹತ್ತು ಹಲವು ರೀತಿಯ ಸೇವೆಯಲ್ಲಿ ಭಾಗಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. 2021-22ರ ಪ್ರವಾಹದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚನ್ನಪಟ್ಟಣದ ಜನರಿಗೆ ವಸತಿ, ರೇಷನ್‌ ಕಿಟ್, ಹಣಕಾಸು ನೆರವು ಮುಂತಾದ ಸಹಾಯ ಮಾಡಿದ್ದರು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್‌ ರಾವ್ ತಿಳಿಸಿದರು.

ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ: ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿ ಮಾತನಾಡಿದ ಸಿ.ಪಿ. ಶರತ್‌ ಚಂದ್ರ, ಆಮ್‌ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ನೀಡುತ್ತಿರುವ ಆಡಳಿತವು ಅತ್ಯಂತ ಜನಪರ ಹಾಗೂ ದಕ್ಷವಾಗಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲ ಸೌಕರ್ಯಗಳಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಕರ್ನಾಟಕದಲ್ಲೂ ಪ್ರಾಮಾಣಿಕ, ದಕ್ಷ ಹಾಗೂ ಜನಪರ ಆಡಳಿತ ಬರಬೇಕೆಂಬ ಸದುದ್ದೇಶದಿಂದ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಸಿ.ಪಿ. ಶರತ್‌ ಚಂದ್ರ ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್​​ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.