ಬೆಂಗಳೂರು: ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 9:25 ರ ವಿಮಾನದಲ್ಲಿ ಡಿ ಕೆ ಶಿವಕುಮಾರ್ ಆಗಮಿಸಿದ್ದಾರೆ.
ನಿನ್ನೆ ಸಂಜೆ ಬೆಂಗಳೂರಿನಿಂದ ದೆಹಲಿಗೆ ಹೋಗಿದ್ದ ಸಚಿವ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸಾಗಿದ್ದಾರೆ. ಸಚಿವ ಶಂಕರ್ ಮನವೊಲಿಸುವಲ್ಲಿ ವಿಫಲರಾಗಿದ್ದ ಶಿವಕುಮಾರ್, ದೆಹಲಿಗೆ ತೆರಳಿದ್ದರು.
ರಾತ್ರಿ ದೆಹಲಿಯಲ್ಲಿ ತಂಗಿದ್ದು, ಇಂದು ಮುಂಬೈಗೆ ಹೋಗ್ತಾರೆ ಅಂತ ಹೇಳಲಾಗಿತ್ತು. ಆದರೆ ದಿಢೀರ್ ಬೆಂಗಳೂರಿಗೆ ಆಗಮಿಸಿರೋದು ಮತ್ತಷ್ಟು ಕುತೂಹಲ ಮೂಡಿಸಿದೆ.