ETV Bharat / state

ಬಿಜೆಪಿ ಪಕ್ಷ, ಸರ್ಕಾರವೇ ಗೊಂದಲದ ಗೂಡಾಗಿದೆ: ಡಿಕೆಶಿ - ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ಸಿಎಂ ಬದಲಾವಣೆ ಬಿಜೆಪಿಯ ಆಂತರಿಕ ವಿಚಾರ. ಅಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಡಿಕೆಶಿ
ಡಿಕೆಶಿ
author img

By

Published : Aug 9, 2022, 8:16 PM IST

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಆಯೋಜನೆ ಮತ್ತು ರೂಟ್ ಮ್ಯಾಪ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಹಾಗು ಸಂಸದ ಡಿ.ಕೆ.ಸುರೇಶ್ ಭಾಗಿಯಾಗಿದ್ದರು.

ಇದೇ ವೇಳೆ, ಸಿಎಂ ಬದಲಾವಣೆ ವದಂತಿ ವಿಚಾರವಾಗಿ ಡಿ.ಕೆ.ಶಿವಕುಮಾರ್ ಬಿಜೆಪಿ ಕುರಿತು ಮಾತನಾಡಿ, ಇದು ಬಿಜೆಪಿಯ ಆಂತರಿಕ ವಿಚಾರ. ಅಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಪಕ್ಷ, ಸರ್ಕಾರವೇ ಗೊಂದಲದ ಗೂಡಾಗಿದೆ ಎಂದರು.

ಇದನ್ನೂ ಓದಿ: ಕೈಗೊಂಬೆ ಸಿಎಂ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತ ಬಂದಿದೆ: ಕಾಂಗ್ರೆಸ್‌ ಟೀಕೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಬಿಹಾರದಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ. ಜನ ಬಿಜೆಪಿಯಿಂದ ದೂರ ಹೋಗ್ತಿದ್ದಾರೆ. ಹೀಗಾಗಿ ನೊಂದು ನಿತೀಶ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ವಿಶ್ವಾಸವಿಲ್ಲದಂತಾಗಿದೆ ಎಂದು ಹೇಳಿದರು.

ಸಿಎಂ ಬದಲಾವಣೆ ವದಂತಿ ವಿಚಾರ ಮಾತನಾಡಿ, ಅವರ ಪಕ್ಷದ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರಲ್ಲಿ ಯಾರಿಗೂ ಬೊಮ್ಮಾಯಿ ಕುರಿತು ವಿಶ್ವಾಸ ಇಲ್ಲ. ಅದೇ ಕಾರಣಕ್ಕೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಮಳೆಯಿಂದ ಜನರು ಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಸಮರ್ಥವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.