ETV Bharat / state

ವ್ಯಕ್ತಿ ಅಲ್ಲ, ಪಕ್ಷ ಮುಖ್ಯ, ಯಾರೇ ಆದ್ರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ ಶಿವಕುಮಾರ್ - ವಿಧಾನಸಭಾ ಚುನಾವಣೆ 2023

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದೇ ಟಿಕೆಟ್‌ ನೀತಿಯನ್ನು ಅನುಸರಿಸಲಾಗುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.

Dk Shivakumar
ಡಿಕೆ ಶಿವಕುಮಾರ್
author img

By

Published : Nov 25, 2022, 1:09 PM IST

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗೆ ಅಂತ್ಯ ಹಾಡಿದ್ದಾರೆ.

ಒಬ್ಬರಿಗೆ ಒಂದೇ ಟಿಕೆಟ್: ಡಿಕೆ ಶಿವಕುಮಾರ್ ಸ್ಪಷ್ಟನೆ..

ದೇಣಿಗೆ ಕಾಂಗ್ರೆಸ್‌ನಲ್ಲಿ ಹೊಸತಲ್ಲ: ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, 'ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ' ಎಂದು ಹೇಳಿದರು.

ಇಂದಿನ ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಕೇಳಿದ ಪ್ರಶ್ನೆಗೆ, ಇಂದು ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಆಕಾಂಕ್ಷಿತರಿಂದ ಅರ್ಜಿ ಸಲ್ಲಿಕೆ, ಕೊನೆ ದಿನ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿ...!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.