ETV Bharat / state

ನಮ್ಮಲ್ಲಿ ಗುಂಪುಗಾರಿಕೆ ಇಲ್ಲ, ಇರೋದು ಕಾಂಗ್ರೆಸ್​ ಗುಂಪು ಅಷ್ಟೇ: ಡಿಕೆ ಶಿವಕುಮಾರ್ - ಡಿಕೆಶಿ

ಬಿಜೆಪಿಯಲ್ಲಿ ರಾಜೀನಾಮೆ ನೀಡುವ ಬ್ಲಾಕ್​ಮೇಲ್​ಗಳು ನಡೆಯುತ್ತಲೇ ಇವೆ. ನಾನ್ಯಾಕೆ ಅವರ ವಿಚಾರ ಮಾತನಾಡಲಿ. ಅವರು ಪಕ್ಷಕ್ಕೆ ಬರುವ ಅರ್ಜಿ ಬಂದಾಗ ಆ ಬಗ್ಗೆ ಮಾತನಾಡೋಣ. ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಜನ ಕೂಡ ಎಲ್ಲವನ್ನು ನೋಡುತ್ತಿದ್ದಾರೆ. ಪ್ರತಿಪಕ್ಷವಾಗಿ ನಾವು ಈ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
author img

By

Published : Jun 21, 2021, 7:17 PM IST

Updated : Jun 21, 2021, 7:29 PM IST

ನವದೆಹಲಿ/ಬೆಂಗಳೂರು: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ. ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದಿಲ್ಲಿಗೆ ಭೇಟಿಕೊಟ್ಟಿರುವ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸದ್ಯಕ್ಕೆ ಕೆಲವು ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೆ, ಇಳಿಸಬೇಕೆ ಎಂದು ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ. ಈ ಬಗ್ಗೆ ನಮ್ಮ ಪ್ರಧಾನ ಕಾರ್ಯದರ್ಶಿಗಳ ಜತೆ ಮಾತನಾಡಲು ಬಂದಿದ್ದೇನೆ.

ನಾಳೆ ಬೆಳಗ್ಗೆ ಸುರ್ಜೆವಾಲರನ್ನು ಭೇಟಿ ಮಾಡಲಿದ್ದೇನೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೊರೊನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು.

ರಾಹುಲ್ ಗಾಂಧಿ ಭೇಟಿಗೂ ಸಮಯ ಕೇಳಿದ್ದು, ಅವರಿಗೆ ಬಿಡುವಿದ್ದರೆ ಭೇಟಿ ಮಾಡುವೆ ಎಂದಿದ್ದಾರೆ. ಮಧ್ಯಂತರ ಚುನಾವಣೆ ವಿಚಾರ ಬಿಜೆಪಿಗೆ ಬಿಟ್ಟ ವಿಚಾರ. ಒಂದು ವಿಚಾರ ಏನೆಂದರೆ ಬಿಜೆಪಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಅನ್ನೋದು ರುಜುವಾತಾಗಿದೆ.

ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದನ್ನು ಬೆಳಕಿಗೆ ತಂದಿದ್ದೆವು. ಈಗ ಬಿಜೆಪಿ ಶಾಸಕರುಗಳೇ ನಮಗಿಂತ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಆ ಮೂಲಕ ನಮ್ಮ ಮಾತಿಗೆ ಪುಷ್ಠಿ ನೀಡುತ್ತಿದ್ದಾರೆ. ಸದ್ಯಕ್ಕೆ ನಾವು ಜಿಲ್ಲಾ ಪಂಚಾಯಿತಿ, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಗಮನ ಹರಿಸುತ್ತಿದ್ದೇವೆ.

ಯಾವುದೇ ನಾಯಕರಾದರೂ ಪಾಲಿಕೆ ಹಾಗೂ ಪಂಚಾಯಿತಿ ಚುನಾವಣೆ ಗೆಲ್ಲಬೇಕು. ಈಗ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಯಾರಾಗಬೇಕು ಎಂದು ತೀರ್ಮಾನ ಮಾಡೋರು ದೆಹಲಿ ನಾಯಕರು. ಸಿಎಂ ಸ್ಥಾನದ ಬಗ್ಗೆ ಬಿಜೆಪಿಯವರು ಮಾತನಾಡಬೇಕು. ನಮ್ಮ ಪಕ್ಷದವರಲ್ಲ. ನಾನು ಪ್ರತಿಜ್ಞೆ ಸ್ವೀಕಾರ ಮಾಡುವಾಗ ಸ್ಪಷ್ಟವಾಗಿ ಹೇಳಿದ್ದೆ, ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಮಾತ್ರ ಅವಕಾಶ ಎಂದು. ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದಿದ್ದಾರೆ.

ಓದಿ:Unlock 2.0: 16 ಜಿಲ್ಲೆಗಳ ಜೊತೆಗೆ ಮತ್ತೆ 6 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ

Last Updated : Jun 21, 2021, 7:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.