ETV Bharat / state

ಶಿವಕುಮಾರ್ ಸಮರ್ಥವಾಗಿ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ: ಪರಮೇಶ್ವರ್ - ಶಿವಕುಮಾರ್ ಸಮರ್ಥ ನಾಯಕ

ಕಾಂಗ್ರೆಸ್​​ನ ಕೆಪಿಸಿಸಿ ಸಾರಥಿಯಾಗಿ ಡಿ.ಕೆ. ಶಿವಕುಮಾರ್​ ಪಕ್ಷದ ಹಿರಿಯ ನಾಯಕರ ನಿವಾಸಗಳಿಗೆ ಭೇಟಿ ನೀಡಿ ಚರ್ಚೆ ನಡೆಸುತ್ತಿದ್ದಾರೆ. ಇಂದು ಮಾಜಿ ಡಿಸಿಎಂ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Parameshwara
ಪರಮೇಶ್ವರ್
author img

By

Published : Mar 15, 2020, 1:48 PM IST

Updated : Mar 15, 2020, 1:56 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಕಾಂಗ್ರೆಸ್​ನ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿರುವ ಡಿ.ಕೆ. ಶಿವಕುಮಾರ್​ ಇಂದು ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್​

ಸದಾಶಿವನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಹೈಕಮಾಂಡ್ ನಾಯಕರಿಗೆ ಧನ್ಯವಾದ ತಿಳಿಸಿದರು. ರಾಜ್ಯ, ರಾಷ್ಟ್ರದ ರಾಜಕಾರಣ ಕವಲು ದಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಒಬ್ಬ ಸಮರ್ಥ ನಾಯಕನ ಅಗತ್ಯತೆ ಇದೆ. ಶಿವಕುಮಾರ್ ಅವರು ಸಮರ್ಥವಾಗಿ ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಸದ್ಯ ಡಿಕೆಶಿಯವರು ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿ ಬರುತ್ತಿದ್ದಾರೆ. ಹಾಗೆ ನನ್ನನ್ನು ಭೇಟಿ ಮಾಡಿದರು ಎಂದರು.

ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ನಾವೆಲ್ಲ ಒಂದೇ. ನಮ್ಮ ಪಕ್ಷ ಒಗ್ಗಟ್ಟಿನಿಂದ ಪ್ರತಿಪಕ್ಷದಲ್ಲಿದ್ದು, ಜನರ ಇಚ್ಛೆಯಂತೆ ಕೆಲಸ ಮಾಡ್ತಿದ್ದೇವೆ. ಕಾಂಗ್ರೆಸ್​​ನ ಎಲ್ಲಾ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ಹಾಗೇ 28 ಅಸೆಂಬ್ಲಿ ಬ್ಲಾಕ್​​ಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡುತ್ತೇನೆ. ನನ್ನ ಮನೆಗೆ ಎಂಎಲ್​​ಎಗಳು ಬರೋದು ಬೇಡ. ಎಲ್ಲರ ಮನೆಗೆ ನಾನೇ ಹೋಗಿ ಭೇಟಿ ಮಾಡಿ ಕಾರ್ಯಕರ್ತರಿಗೆ ಭರವಸೆ ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಒಗ್ಗಟ್ಟಿನ ಮಾತುಗಳನ್ನಾಡಿದರು.

ಸೋನಿಯಾಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಿಸಿದಾಗಲೇ ನಾನು ಅಧ್ಯಕ್ಷ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ಮನೆಯಲ್ಲಿದ್ದಾರೆ.‌ ಅವರನ್ನೆಲ್ಲ ಹುಡುಕಿ ಕೆಲಸಕ್ಕೆ ಕರೆದುಕೊಂಡು ಬರುತ್ತೇನೆ. ಅವರಿಂದಲೇ ಇರುವ ಪಕ್ಷ ಇದು. ಅವರ ಅಗತ್ಯ ಬೇಕಿದೆ ಎಂದು ಡಿಕೆಶಿ ಹೇಳಿದ್ರು.

Last Updated : Mar 15, 2020, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.