ETV Bharat / state

ಚುನಾವಣೆ ಯಶಸ್ಸಿಗೆ ಸಹಕರಿಸಿದ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಅಭಿನಂದನೆ - by-election latest news

ರಾಜ್ಯದಲ್ಲಿ ಬಂದ ಎಲ್ಲ ಚುನಾವಣಾ ಪ್ರಚಾರಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ಸಿಗೆ ಸಹಕರಿಸಿದ ಹಾಗೂ ಸಹಾಯ ಮಾಡಿದ ಪಕ್ಷದ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

DKS submitted congratulates party workers who helped him win election
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
author img

By

Published : Nov 4, 2020, 5:53 PM IST

ಬೆಂಗಳೂರು: ಚುನಾವಣೆ ಯಶಸ್ವಿಗೊಳಿಸಿದ ಪಕ್ಷದ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, 4 ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಯಶಸ್ವಿಯಾಗಿ ನಡೆಸಲು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಾಕಷ್ಟು ಪರಿಶ್ರಮ ತೊಡಗಿಸಿದ್ದೀರಿ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಾಗೂ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತಾವೆಲ್ಲ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸಿದ್ದೀರಿ. ಪ್ರಚಾರಕಾರ್ಯದಲ್ಲಿ ಪಾಲ್ಗೊಂಡು ಸಹಾಯ ಮಾಡಿದ್ದೀರಿ. ಪಕ್ಷದ ಎಲ್ಲಾ ನಾಯಕರ ಹಾಗೂ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಹಗಲು-ರಾತ್ರಿ ಪಕ್ಷದ ಪರವಾಗಿ ಕಾರ್ಯನಿರ್ವಹಿಸಿದ ತಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ಇದು ಪಕ್ಷದ ಪುನಶ್ಚೇತನಕ್ಕೆ ಕಾರಣವಾಗಿದೆ ಹಾಗಾಗಿ ತಮಗೆಲ್ಲ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.