ETV Bharat / state

ಮಹಾನಗರದ ಕೋವಿಡ್ ಪರಿಸ್ಥಿತಿ ಕುರಿತು ಮುಖಂಡರೊಂದಿಗೆ ಡಿಕೆಶಿ ಸಮಾಲೋಚನೆ

ರಾಜಧಾನಿಯಲ್ಲಿ ಕೊರೊನಾ ವೈರಸ್​ ತಾಂಡವವಾಡುತ್ತಿರುವ ಹಿನ್ನೆಲೆ ಡಿ.ಕೆ. ಶಿವಕುಮಾರ್ ಈ ಕುರಿತು ಪಕ್ಷದ ಮುಖಂಡರು, ಬೆಂಗಳೂರಿನ ಮಾಜಿ ಸಚಿವರು, ರಾಜ್ಯಸಭೆ ಸದಸ್ಯರು, ಶಾಸಕರು, ಎಂಎಲ್​ಸಿಗಳ ಜತೆ ಸಮಾಲೋಚನೆ ನಡೆಸಿದರು.

meeting
meeting
author img

By

Published : May 26, 2021, 7:44 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೋವಿಡ್ ಪರಿಸ್ಥಿತಿ ಕುರಿತು ಬೆಂಗಳೂರಿನ ಮಾಜಿ ಸಚಿವರು, ರಾಜ್ಯಸಭೆ ಸದಸ್ಯರು, ಶಾಸಕರು, ಎಂಎಲ್​ಸಿಗಳು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವಾದ ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ಶಾಸಕ ರಿಜ್ವಾನ್ ಅರ್ಷದ್, ವೆಂಕಟರಮಣಪ್ಪ, ಎಂಎಲ್​ಸಿಗಳಾದ ಯು.ಬಿ. ವೆಂಕಟೇಶ್, ಎಸ್. ರವಿ, ಜಿಲ್ಲಾಧ್ಯಕ್ಷರಾದ ರಾಜಕುಮಾರ್, ಜಿ. ಕೃಷ್ಣಪ್ಪ, ಶೇಖರ್ ಭಾಗವಹಿಸಿದ್ದರು.

ಬೆಂಗಳೂರು ಮಹಾನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ ಎಂದು ಸರ್ಕಾರ ಹೇಳುತ್ತಿದೆ. ಕೋವಿಡ್ ತಪಾಸಣೆ ಕಡಿಮೆ ಮಾಡುವ ಮೂಲಕ ಸರ್ಕಾರ ಅಂಕಿ - ಅಂಶಗಳಲ್ಲಿ ಕಡಿಮೆಯಾಗಿರುವುದನ್ನು ತೋರಿಸುತ್ತಿದೆ. ರೋಗ ಎಷ್ಟೇ ನಿಯಂತ್ರಣಕ್ಕೆ ಬಂದಿದೆ ಎಂದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಕಪ್ಪು, ಬಿಳಿ ಹಾಗೂ ಹಳದಿ ಫಂಗಸ್​ಗಳ ಸಮಸ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ವಿವಿಧ ಸಮಸ್ಯೆಗಳು ಹೆಚ್ಚಾಗುತ್ತಿವೆ. ರಾಜಧಾನಿ ಬೆಂಗಳೂರು ಸಹ ರೋಗಗ್ರಸ್ತ ನಗರವಾಗುತ್ತದೆ ಎಂಬ ಆತಂಕವನ್ನು ಈ ಸಂದರ್ಭ ವ್ಯಕ್ತಪಡಿಸಲಾಯಿತು.

ಪ್ರತಿಪಕ್ಷವಾಗಿ ಕಾಂಗ್ರೆಸ್​​ನ ಜವಾಬ್ದಾರಿ ಹೆಚ್ಚಿದ್ದು, ಮಹಾನಗರದಲ್ಲಿ ಮುಂದಿನ ದಿನಗಳಲ್ಲಿ ಎದುರಾಗುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಮಾಡಬೇಕಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿಯೂ ಕೋವಿಡ್ ಪಸರಿಸುತ್ತಿದೆ. ಇದನ್ನು ನಿಯಂತ್ರಿಸುವ ತಲು ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ. ಕಾಂಗ್ರೆಸ್ ಪಕ್ಷದ ಆರೋಗ್ಯ ಕೇಂದ್ರ ಸಹ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ ನಮ್ಮ ಕಾರ್ಯನಿರ್ವಹಣೆ ಇನ್ನಷ್ಟು ಉತ್ತಮಗೊಳ್ಳಬೇಕಿದೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದ ತಪ್ಪು ಹೆಜ್ಜೆಗಳನ್ನು ಎಚ್ಚರಿಸುವ ಜೊತೆಗೆ ನಾವು ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂಬ ಕುರಿತು ಸಹ ಚಿಂತನೆ ನಡೆಸಬೇಕಿದೆ. ಮುಂಬರುವ ದಿನಗಳು ಮಹಾನಗರದ ಪಾಲಿಗೆ ಇನ್ನಷ್ಟು ಕಠಿಣವಾಗಲಿದೆ. ಲಾಕ್​ಡೌನ್​ನಿಂದ ಸಂತ್ರಸ್ತರಾದ ಹಲವು ಕುಟುಂಬಗಳು ಜೀವನ ನಿರ್ವಹಣೆಗೆ ಪರದಾಡುತ್ತಿದ್ದು ಇವರ ಪರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಎತ್ತಬೇಕಿದೆ. ರಾಜಧಾನಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದು, ಕೊರೊನಾ ಎರಡನೇ ಅಲೆ ನಿಭಾಯಿಸುವಲ್ಲಿ ವಿಫಲವಾದ ರೀತಿ ಮೂರನೇ ಅಲೆಯ ವಿಚಾರದಲ್ಲಿಯೂ ಸರ್ಕಾರ ನಿರ್ಲಕ್ಷ್ಯ ಮಾಡಿಕೊಳ್ಳಬಾರದು ಎಂದು ಎಚ್ಚರಿಸಬೇಕು ಎಂಬ ವಿಚಾರವನ್ನು ಸಹ ಇದೇ ಸಂದರ್ಭ ಚರ್ಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.