ETV Bharat / state

ಜನರ ಕುಂದುಕೊರತೆ ಆಲಿಸಲು ವಿಜಯಪುರ-ಬಾಗಲಕೋಟೆ ಜಿಲ್ಲೆಗೆ ಡಿಕೆಶಿ ಪ್ರವಾಸ - 2 ದಿನಗಳ ಕಾಲ ಡಿಕೆಶಿ ರಾಜ್ಯಪ್ರವಾಸ

ಈ ಎರಡು ಕಾರ್ಯಕ್ರಮಗಳನ್ನು ಮುಗಿಸಿಕೊಂಡು ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಅವರು ಅಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ನಡೆಸುವರು. ಸಂಜೆ ಸಭೆಯನ್ನು ಮುಗಿಸಿ ವಿಜಯಪುರದಿಂದ ಹೊರಟು ಜಮಖಂಡಿಗೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 18ರಂದು ಬೆಳಿಗ್ಗೆ ತೇರದಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನಹಟ್ಟಿ ನೇಕಾರ ಸಮುದಾಯದೊಂದಿಗೆ ಕುಂದುಕೊರತೆ ಸಂವಾದ ನಡೆಸುವರು..

districts
ವಿಜಯಪುರ ಬಾಗಲಕೋಟೆ ಜಿಲ್ಲೆಗೆ ಡಿಕೆಶಿ ಭೇಟಿ
author img

By

Published : Jul 14, 2021, 5:51 PM IST

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ಕುಂದುಕೊರತೆ ಆಲಿಸುವ ಕಾರ್ಯಕ್ಕಾಗಿ ಜುಲೈ 17 ಮತ್ತು 18ರಂದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗೆ ತೆರಳಲಿದ್ದಾರೆ.

ಈಗಾಗಲೇ ಕಳೆದವಾರ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭೇಟಿ ಕೊಟ್ಟು ಬಂದಿರುವ ಅವರು, ಇಂದು ಬಾಗೇಪಲ್ಲಿಯಲ್ಲಿ ಹಮ್ಮಿಕೊಂಡಿರುವ ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ವಿಜಯಪುರ ಹಾಗೂ ಬಾಗಲಕೋಟೆ ಪ್ರವಾಸವನ್ನು ಜುಲೈ 17ರಂದು ಬೆಳಗ್ಗೆ ಆರಂಭಿಸಲಿದ್ದಾರೆ. ಬೆಂಗಳೂರಿನಿಂದ ಕಲಬುರ್ಗಿಗೆ ವಿಮಾನದ ಮೂಲಕ ತೆರಳಲಿದ್ದಾರೆ.

districts
ವಿಜಯಪುರ-ಬಾಗಲಕೋಟೆ ಜಿಲ್ಲೆಗಳಿಗೆ ಡಿಕೆಶಿ ಭೇಟಿ

ಕಲಬುರ್ಗಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಅಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ದಲಿತ ಸಮುದಾಯದ ಕುಂದುಕೊರತೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂದಗಿಯ ಪಡಗನೂರು ತಾಂಡಾಗೆ ತೆರಳಿ ಅಲ್ಲಿನ ತಾಂಡಾದ ಲಂಬಾಣಿ ಸಮುದಾಯದ ನಾಗರಿಕರ ಕುಂದು ಕೊರತೆ ಆಲಿಸುವರು.

ಈ ಎರಡು ಕಾರ್ಯಕ್ರಮಗಳನ್ನು ಮುಗಿಸಿಕೊಂಡು ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಅವರು ಅಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ನಡೆಸುವರು. ಸಂಜೆ ಸಭೆಯನ್ನು ಮುಗಿಸಿ ವಿಜಯಪುರದಿಂದ ಹೊರಟು ಜಮಖಂಡಿಗೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 18ರಂದು ಬೆಳಿಗ್ಗೆ ತೇರದಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನಹಟ್ಟಿ ನೇಕಾರ ಸಮುದಾಯದೊಂದಿಗೆ ಕುಂದುಕೊರತೆ ಸಂವಾದ ನಡೆಸುವರು.

ಇದು ಪೂರ್ಣಗೊಂಡ ಬಳಿಕ ಮಧ್ಯಾಹ್ನ ಬಾಗಲಕೋಟೆ ತಾಲೂಕಿನ ನೀಲಾನಗರ ಶಿರೂರು ತಾಂಡಾಗೆ ಭೇಟಿಕೊಟ್ಟು ಅಲ್ಲಿನ ಲಂಬಾಣಿ ಸಮುದಾಯದವರ ಕುಂದುಕೊರತೆ ಆಲಿಸುವರು. ಬಳಿಕ ಸಂಜೆ ಬಾಗಲಕೋಟೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಾಗಿಯಾಗುವರು. ಈ ಸಭೆಯ ಬಳಿಕ ಬಾಗಲಕೋಟೆ ಜಿಲ್ಲೆಯ ನೇಕಾರ ಸಮುದಾಯದ ನಾಯಕರೊಂದಿಗೆ ಸಮುದಾಯದ ಕುಂದುಕೊರತೆಗಳ ಬಗ್ಗೆ ಚಿಂತನಾ ಸಭೆ ನಡೆಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ಸಂಜೆ 7 ಗಂಟೆಗೆ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದಿನ ಭೇಟಿ : ಇಂದು ಡಿಕೆ ಶಿವಕುಮಾರ್ ಬಾಗೇಪಲ್ಲಿಯ ಫುಡ್ ಕಿಟ್ ವಿತರಣೆ ಸಮಾರಂಭಕ್ಕೆ ತೆರಳುವ ಮುನ್ನ ಸದಾಶಿವನಗರ ನಿವಾಸದಲ್ಲಿ ವಿವಿಧ ಮುಖಂಡರು ನಾಯಕರನ್ನು ಭೇಟಿಯಾದರು. ಮೊದಲು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹಾಗೂ ಎಐಸಿಸಿ ಮಾಧ್ಯಮ ವಕ್ತಾರೆ ಐಶ್ವರ್ಯ ಮಹದೇವ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಇದಾದ ಬಳಿಕ ಸುಪ್ರಿಯಾ ಶ್ರೀನೇಟ್ ಹಾಗೂ ಇತರೆ ಮಹಿಳಾ ನಾಯಕಿಯರು ಕೆಪಿಸಿಸಿ ಕಚೇರಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸುಪ್ರಿಯಾ ಮಾತನಾಡಿದ್ದಾರೆ.

ಶ್ರೀಗಳ ಭೇಟಿ : ವಿಜಯನಗರ ಜಿಲ್ಲೆ ಹಿರೇಹಡಗಲಿ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ಮಠದ ಶ್ರೀ ಹಾಲವಿರುಪಜ್ಜ ಪಂಡಿತಾರಾಧ್ಯ ಸ್ವಾಮೀಜಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಆಶೀರ್ವದಿಸಿದರು. ಇದೇ ಸಂದರ್ಭ ಜಿಲ್ಲೆಯ ಸಮಸ್ಯೆಗಳನ್ನು ಡಿಕೆಶಿಗೆ ವಿವರಿಸಿದರು.

ವಿಜಯನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಹಾಗೂ ಹೊಸದಾಗಿ ರಚನೆಯಾಗಿರುವ ಜಿಲ್ಲೆಯ ಕುಂದು ಕೊರತೆಯನ್ನು ಗಮನಿಸಿ ಮುಂಬರುವ ದಿನಗಳಲ್ಲಿ ಅವಕಾಶ ಸಿಕ್ಕಾಗೆಲ್ಲಾ ಇಲ್ಲಿನ ಅಭಿವೃದ್ಧಿಗೆ ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.