ETV Bharat / state

ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಡಿಕೆಶಿ ವಿಡಿಯೋ ಸಂವಾದ - ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರು

ತುಮಕೂರಿನಲ್ಲಿಯೂ ಕೋವಿಡ್​ನಿಂದ ಸಾವು-ನೋವು ಹೆಚ್ಚಾಗಿದೆ. ಹಾಗಾಗಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ಸೋಮವಾರದಂದು ಡಿ.ಕೆ. ಶಿವಕುಮಾರ್ ವಿಡಿಯೋ ಸಂವಾದ ನಡೆಸಿ ಅಲ್ಲಿನ ಸ್ಥಿತಿಗತಿ ಕುರಿತು ಮಾಹಿತಿ ಕಲೆ ಹಾಕಿದರು. ಕೋವಿಡ್​ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿ, ಸಲಹೆ ಸೂಚನೆ ನೀಡಿದರು.

dk shivkumar video conference with tumkur congress leaders
ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಡಿಕೆಶಿ ವಿಡಿಯೋ ಸಂವಾದ
author img

By

Published : May 11, 2021, 9:04 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಿಂದ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ಸೋಮವಾರದಂದು ವಿಡಿಯೋ ಸಂವಾದ ನಡೆಸಿದ್ದಾರೆ.

ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಡಿಕೆಶಿ ವಿಡಿಯೋ ಸಂವಾದ

ಲಾಕ್​ಡೌನ್​​ ಘೋಷಣೆ ಆಗಿರುವ ಈ ಸಂದರ್ಭದಲ್ಲಿ ಸಾಕಷ್ಟು ಬಡವರು, ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಕೂಡಲೇ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಅಗತ್ಯವಿರುವವರಿಗೆ ಸಹಾಯ ಮಾಡಲು ಮುಂದಾಗಬೇಕು. ಪ್ರಮುಖವಾಗಿ ಪಕ್ಷದ ಕಾರ್ಯಕರ್ತರು ಆರ್ಥಿಕ ಸಹಕಾರ ನೀಡುವ ಸಾಮರ್ಥ್ಯವಿಲ್ಲದಿದ್ದರೆ ಅಗತ್ಯ ವ್ಯಕ್ತಿಗಳನ್ನು ಗುರುತಿಸಿ ಪಕ್ಷದ ಮುಖಂಡರಿಗೆ ಮಾಹಿತಿ ತಿಳಿಸಬೇಕು. ಪಕ್ಷದ ವತಿಯಿಂದ ಸೂಕ್ತ ಅನುಕೂಲ ಕಲ್ಪಿಸುವ ಕುರಿತು ರಾಜ್ಯ ನಾಯಕರು ಸೇರಿ ತೀರ್ಮಾನಿಸುತ್ತೇವೆ ಎಂದು ವಿವರಿಸಿದರು.

ಇದನ್ನೂ ಓದಿ: ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವರ ಭೇಟಿ: ವ್ಯವಸ್ಥೆಗಳ ಪರಿಶೀಲನೆ

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ ನಿರೀಕ್ಷೆ ಮಾಡಿ ಕುಳಿತುಕೊಳ್ಳುವ ಬದಲು ಜನರಿಗೆ ಪ್ರತಿಪಕ್ಷವಾಗಿ ನಾವು ಯಾವ ರೀತಿಯ ಸಹಾಯ ಮಾಡಬಹುದು ಎಂಬ ಕುರಿತು ಚಿಂತನೆ ನಡೆಸಬೇಕಾಗಿದೆ. ಜನರ ವಿಶ್ವಾಸ ಗಳಿಸಲು ಇದೊಂದು ಸೂಕ್ತ ಸಂದರ್ಭವಾಗಿದೆ. ಸಾಧ್ಯವಾದಷ್ಟು ನಿಮ್ಮ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜನ ಸೇವೆಯಲ್ಲಿ ತೊಡಗಿ ಎಂದು ಸಲಹೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್​, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಸಂಸದರಾದ ಮುದ್ದಹನುಮೇಗೌಡ, ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ, ಷಡಕ್ಷರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಕುಣಿಗಲ್ ಶಾಸಕ ಡಾ. ರಂಗನಾಥ್ ಮತ್ತಿತರರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.