ETV Bharat / state

ಎಸ್​​​​​​​​ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ

author img

By

Published : Sep 25, 2020, 4:34 PM IST

ಎಸ್​​​​ಪಿಬಿ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

dk-sivakumar-condoles-the-death-of-singer-sp-balasubramaniam
ಎಸ್ ​​​​​ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ

ಬೆಂಗಳೂರು: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದಿದ್ದಾರೆ.

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಸ್ಮರಿಸಿದ್ದಾರೆ.

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್​​ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.