ETV Bharat / state

ರಾಜರಾಜೇಶ್ವರಿ ನಗರ ಕ್ಷೇತ್ರವ್ಯಾಪ್ತಿಯಲ್ಲಿ ಡಿಕೆಶಿ ಪ್ರಚಾರ; ಕೈ ಹಿಡಿದ ಜೆಡಿಎಸ್ ನಾಯಕ ಚಂದ್ರಶೇಖರ್ - ಡಿಕೆ ಶಿವಕುಮಾರ್ ಮತ ಪ್ರಚಾರ

ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಮುಖಂಡ ಬಿ.ಎಚ್. ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

DK Sivakumar
ಡಿ.ಕೆ ಶಿವಕುಮಾರ್
author img

By

Published : Oct 19, 2020, 10:15 PM IST

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಕೂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ದಿನವಿಡೀ ಪ್ರಚಾರ ನಡೆಸಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಚಂದ್ರಶೇಖರ್ ಸೇರ್ಪಡೆ: ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಮುಖಂಡ ಬಿ.ಎಚ್. ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರನ್ನು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​

ಜೆಡಿಎಸ್ ಪಕ್ಷದ ಬೆಂಗಳೂರು ನಗರ ಮಹಾ ಪ್ರಧಾನ ಕಾರ್ಯದರ್ಶಿ ಆಗಿದ್ದ ಚಂದ್ರಶೇಖರ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಮುಖಂಡರನ್ನು ಡಿಕೆಶಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಆರ್​ಆರ್​ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಗೆಲುವಿಗೆ ಶ್ರಮಿಸುವಂತೆ ಡಿಕೆಶಿ ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಸಿದ್ದರಾಜು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್​ಗೆ ಸೇರ್ಪಡೆಯಾದರು. ಶಾಸಕಿ ಸೌಮ್ಯ ರೆಡ್ಡಿ, ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಮುಖಂಡ ಹನುಮಂತರಾಯಪ್ಪ ಉಪಸ್ಥಿತರಿದ್ದರು.

ಕಾರ್ಯಕರ್ತರ ಸಭೆ: ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ವಾರ್ಡ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಎಂ.ಡಿ ವಿಜಯದೇವ್, ಸತೀಶ್ ಗೌಡ ಮತ್ತಿತರ ಮುಖಂಡರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.