ETV Bharat / state

ಡಿಸಿ, ಎಸ್​ಪಿ ಸೇರಿ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ ಮಾಡಬೇಕು: ಡಿಸಿಎಂ ಶಿವಕುಮಾರ್​ ಸೂಚನೆ

author img

By

Published : Jul 26, 2023, 9:06 PM IST

ಎಲ್ಲ ಸರ್ಕಾರಿ ನೌಕರರು ಕೆಲಸ ಮಾಡುವ ಸ್ಥಳದಲ್ಲೇ ಮನೆ ಮಾಡಿಕೊಂಡು ಅಗತ್ಯ ಸಮಯದಲ್ಲಿ ಜನರಿಗೆ ಸಿಗಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್​ ಸೂಚನೆ ನೀಡಿದ್ದಾರೆ.

dk-sivakumar-instructed-all-government-officials-should-reside-at-work-place
ಎಲ್ಲಾ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ ಮಾಡಬೇಕು: ಡಿಸಿಎಂ ಡಿ ಕೆ ಶಿವಕುಮಾರ್​ ಸೂಚನೆ
DCM conducted site inspection of various development projects of Sarvajnanagar
ಡಿಸಿಎಂ ಸರ್ವಜ್ಞನಗರದ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು

ಬೆಂಗಳೂರು: ರಾಮನಗರ ಜಿಲ್ಲೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು, ಸರ್ಕಾರಿ ನೌಕರರು ತಾವು ಕೆಲಸ ಮಾಡುವ ಕೇಂದ್ರ ಸ್ಥಳದಲ್ಲೇ ವಾಸ್ತವ್ಯ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿನ ಮಳೆ ಬೆಳೆ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರಿ ನೌಕರರ ಮನೆ ಒಂದು ಊರಲ್ಲಿ, ಕೆಲಸ ಇನ್ನೊಂದು ಊರಲ್ಲಿ ಅಂತ ಆಗಬಾರದು. ಬೇರೆ ಊರಲ್ಲಿ ಇದ್ದರೆ ತುರ್ತು ಸಂದರ್ಭದಲ್ಲಿ ಜನರಿಗೆ ಸಿಗೋಲ್ಲ. ಅದೇ ರೀತಿ ಎಲ್ಲ ಜಿಲ್ಲೆಗಳಲ್ಲಿಯೂ ಆಗಬೇಕು, ಕೆಲಸ ಮಾಡುವ ಸ್ಥಳದಲ್ಲೇ ಮನೆ ಮಾಡಿಕೊಂಡು, ಅಗತ್ಯ ಸಮಯದಲ್ಲಿ ಜನರಿಗೆ ಸಿಗಬೇಕು. ಅವರ ಮನೆ ಫೋಟೋ, ವಿಳಾಸ, ಫೋನ್ ನಂಬರ್ ಸೇರಿದಂತೆ ಒಂದು ಡೈರಿ ತರಬೇಕು. ಅಧಿಕಾರಿಗಳು ವಾಟ್ಸ್​ಆ್ಯಪ್​ ಗ್ರೂಪ್ ಮಾಡಬೇಕು ಎಂದು ಸೂಚನೆ ನೀಡಿದರು.

ನಿಮಗೆ ಹೇಗಿದ್ದರೂ ಮೊದಲೇ ಹವಾಮಾನ ಇಲಾಖೆಯಿಂದ ಹವಾಮಾನ ಮುನ್ಸೂಚನೆ ದೊರೆತಿರುತ್ತದೆ. ಆ ವರದಿ ಆಧರಿಸಿ ಮಾಧ್ಯಮ ಪ್ರಚಾರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ. ಇಂತಹ ದಿನ ಇಷ್ಟು ಪ್ರಮಾಣದ ಮಳೆ ಬರುತ್ತೆ. ಹೆಚ್ಚು ಮಳೆ, ಪ್ರವಾಹ ಬಂದಾಗ ಜನ ಆಚೆ ಬರೋದು ಬೇಡ ಅಂತ ಮಾಧ್ಯಮದ ಮೂಲಕ ಸಾರಬೇಕು. ಆಗ ಅನಾಹುತ ತಪ್ಪಿಸಬಹುದು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ. ದುರಂತ ತಪ್ಪಿಸಿ. ಅನಾಹುತ ಆದಮೇಲೆ ವ್ಯಾಖ್ಯಾನ ಮಾಡುವುದರಿಂದ ಪ್ರಯೋಜನ ಇಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕರಾವಳಿ ಭಾಗದ ವಲಸೆ ತಪ್ಪಿಸಿ: ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯ ಜನ ಮುಂಬೈಗೆ ವಲಸೆ ಹೋಗುತ್ತಿದ್ದಾರೆ. ಉದ್ಯೋಗ ಅವಕಾಶ ಸೃಷ್ಟಿಸಿ ವಲಸೆ ತಪ್ಪಿಸಬೇಕು. ಹಿಂದೆ ಕೋಮು ಸಂಘರ್ಷ ಮತ್ತಿತರ ಕಾರಣಗಳಿಂದ ಯಾರೂ ಬಂಡವಾಳ ಹೂಡಲು ಮುಂದೆ ಬರುತ್ತಿರಲಿಲ್ಲ. ಉದ್ಯೋಗ ಸೃಷ್ಟಿ ಆಗುತ್ತಿರಲಿಲ್ಲ. ಈಗ ನಮ್ಮ ಸರ್ಕಾರ ಬಂದಿದೆ. ಹಿಂದಿನ ಪರಿಸ್ಥಿತಿ ಬದಲಾಗಬೇಕು. ಜನಸ್ನೇಹಿ ವಾತಾವರಣ ಸೃಷ್ಟಿ ಆಗಬೇಕು ಅದಕ್ಕೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ. ಪರಮೇಶ್ವರ್, ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ ಖರ್ಗೆ, ಈಶ್ವರ್ ಖಂಡ್ರೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ , ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಯ ನಡುವೆಯೂ ಸರ್ವಜ್ಞನಗರದಲ್ಲಿ ಡಿಸಿಎಂ ರೌಂಡ್ಸ್: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇಂದು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ ಕೆರೆ, ಕಚರಕನಹಳ್ಳಿಕೆರೆ ಹಾಗೂ ಹೆಣ್ಣೂರು ಬಂಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲು ಒಎಂಬಿಆರ್ ಪಂಪ್ ಹೌಸ್​ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು. ನಂತರ ಬಾಣಸವಾಡಿ ಕೆರೆಗೆ ಭೇಟಿ ನೀಡಿ ಅದರ ಅಭಿವೃದ್ಧಿ ಕಾಮಗಾರಿ ಕುರಿತು ಮಾಹಿತಿ ಪಡೆದರು. 47 ಎಕರೆ ವಿಸ್ತೀರ್ಣದಲ್ಲಿದ್ದ ಕೆರೆ ಈಗ ಕೆಲವು 17 ಎಕರೆಯಷ್ಟು ಮಾತ್ರ ಕೆರೆಯಾಗಿ ಉಳಿದುಕೊಂಡಿದ್ದು, ಉಳಿದ ಜಾಗ ಲೇಔಟ್​ಗಳಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಕೆರೆಯನ್ನು ಅಭಿವೃದ್ಧಿ ಮಾಡಿ ಕೆರೆಯ ಪಕ್ಕ ಉದ್ಯಾನ ನಿರ್ಮಾಣ ಮಾಡುತ್ತಿರುವ ಮಾಹಿತಿ ಪಡೆದರು.

ಕೊಳಗೇರಿ ನಿವಾಸಿಗಳ ಸ್ಥಳಾಂತರಕ್ಕೆ ಜಾಗ ನೋಡಿದ್ದೀರಾ ಎಂದು ಶಿವಕುಮಾರ್ ಅವರು ಪ್ರಶ್ನಿಸಿದಾಗ, "ಕೆ.ಆರ್ ಪುರಂ ಬಳಿ ಈ ಹಿಂದೆ ಸ್ಥಳೀಯ ಶಾಸಕರ ಜೊತೆ ಮಾತನಾಡಿ ನಾಲ್ಕು ಎಕರೆ ನಿಗದಿ ಮಾಡಿದ್ದೆವು. ಆದರೆ, ಈಗ ಅಲ್ಲಿ ಕೇವಲ ಒಂದು ಎಕರೆ ಮಾತ್ರ ಜಾಗ ಉಳಿದಿದೆ. ಸದ್ಯಕ್ಕೆ ಅದನ್ನು ಪಡೆದು, ಉಳಿದ ಕಡೆ ಮೂರ್ನಾಲ್ಕು ಎಕರೆ ಪಡೆದು ಸ್ಥಳಾಂತರ ಮಾಡಬೇಕು" ಎಂದು ಕೆ.ಜೆ ಜಾರ್ಜ್ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಇಂದು ಸರ್ವಜ್ಞ ನಗರ ಕ್ಷೇತ್ರದಲ್ಲಿ ಟ್ರಾಫಿಕ್ ಸಮಸ್ಯೆ, ಮೇಲ್ಸೇತುವೆ ನಿರ್ಮಾಣದ ಪರಿಶೀಲನೆ ಮಾಡಿದೆ. ಕೆರೆ ಜಾಗದಲ್ಲಿ ಪಾರ್ಕ್ ನಿರ್ಮಾಣದ ವಿಚಾರವಾಗಿ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಹಿಂದೆ ಮಂಜೂರಾಗಿದ್ದ ಕಾಮಗಾರಿಗಳನ್ನು ಕಳೆದ ಸರ್ಕಾರ ರದ್ದು ಮಾಡಿತ್ತು. ಈಗ ಮತ್ತೆ ಸರ್ಕಾರಿ ಆಸ್ತಿ ಉಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ತೀರ್ಮಾನ ಮಾಡುವ ಮುನ್ನ ನಾನು ಹಾಗೂ ಸಚಿವರು ಖುದ್ದಾಗಿ ಬಂದು ಪರಿಶೀಲನೆ ಮಾಡಿದ್ದೇವೆ. ಬಿಡಿಎ, ಬಿಬಿಎಂಪಿ, ಕೆರೆ ಅಭಿವೃದ್ಧಿ ಪ್ರಾಧಿಕಾರದ ದಾಖಲೆ ಪರಿಶೀಲನೆ ಮಾಡಲಾಗಿದೆ. ಶಾಸಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆದು ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು

ಇದನ್ನೂ ಓದಿ: ಭಾರತ್‌ ಜೋಡೋ ಆಯ್ತು, ಇನ್ನು ಬೂತ್‌ ಮಟ್ಟದ ಜೋಡೋ ಆಗಬೇಕಿದೆ: ಡಿಕೆಶಿ ಸಲಹೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.