ETV Bharat / state

ಯಾವ ಕ್ಷಣದಲ್ಲಿ ಬೇಕಾದರೂ ನಿಗಮ ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು: ಡಿಕೆಶಿ - ನಿಗಮ ಮಂಡಳಿ

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ನಿಗಮ ಮಂಡಳಿ ನೇಮಕದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
author img

By ETV Bharat Karnataka Team

Published : Jan 15, 2024, 7:26 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂಬ ಪ್ರಶ್ನೆಗೆ.‌ ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದರು.

ಜ.19 ಲೋಕಸಭೆ ಚುನಾವಣಾ ಸಮಿತಿ ಸಭೆ : ಇದೇ ಜನವರಿ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ. ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ. ಜ.19 ರಂದು ನಡೆಯುವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಹಾಗೂ 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಡಿ.ಕೆ ಶಿವಕುಮಾರ್​ ತಿಳಿಸಿದರು.

ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ : ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಡಿಕೆಶಿ, ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಸೂಚನೆ ನೀಡಿದರು.

ಸಂಕ್ರಾಂತಿ ಹಬ್ಬದ ಶುಭಾಶಯಗಳು : ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷ ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ ಶಿವಕುಮಾರ್​ ಹಾರೈಸಿದರು.

ಇದನ್ನೂ ಓದಿ : ಪಕ್ಷ ಬದಲಾಯಿಸಿದ ನಂತರ ಭಾವನೆಗಳು ಬದಲಾಗಬಾರದು: ಶೆಟ್ಟರ್ ವಿರುದ್ಧ ಮಹೇಶ ಟೆಂಗಿನಕಾಯಿ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.