ETV Bharat / state

'ಆರ್‌ಆರ್‌ ನಗರ ಮತದಾರರ ಪಟ್ಟಿಯಲ್ಲಿ ಅಕ್ರಮ': ಚು. ಆಯೋಗಕ್ಕೆ ಕಾಂಗ್ರೆಸ್ ದೂರು - ಈಟಿವಿ ಭಾರತ ಕನ್ನಡ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಸಂಸದ ಡಿಕೆ ಸುರೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದರು. ​

KN_BNG_
ಚುನಾವಣಾ ಆಯೋಗಕ್ಕೆ ದೂರು ನೀಡಿದ ಡಿಕೆ ಸುರೇಶ್​
author img

By

Published : Dec 7, 2022, 4:17 PM IST

Updated : Dec 7, 2022, 9:05 PM IST

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯಿಂದ ಕಳೆದ ತಿಂಗಳು 9ರವರೆಗೆ ಅನಧಿಕೃತವಾಗಿ ಸುಮಾರು 1.30 ಲಕ್ಷ ಮತಗಳ ಸೇರ್ಪಡೆಯಾಗಿದ್ದು, 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಮತ್ತಿತರ ಸ್ಥಳೀಯ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದರು.

ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಚುನಾವಣಾ ಆಯುಕ್ತ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮ ಹೆಚ್, ಹನುಮಂತರಾಯಪ್ಪ, ಲಗ್ಗೆರೆ ಬ್ಲಾಕ್ ಅಧ್ಯಕ್ಷ ಅಮರನಾಥ್, ರಾಜರಾಜೇಶ್ವರಿ ನಗರ ಬ್ಲಾಕ್ ಅಧ್ಯಕ್ಷ ರಾಂಪುರ ನಾಗೇಶ್ ಹಾಗು ಯಶವಂತಪುರ ಬ್ಲಾಕ್ ಅಧ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಮತದಾರರ ಪಟ್ಟಿ ಅಕ್ರಮ ಕುರಿತು ಡಿಕೆ ಸುರೇಶ್​ ಹೇಳಿಕೆ

ಬಳಿಕ ಮಾಧ್ಯಮಗಳಿಗೆ ವಿವರಣೆ ನೀಡಿದ ಡಿ.ಕೆ.ಸುರೇಶ್, 'ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ನಕಲಿ ಮತಗಳು ಸೇರ್ಪಡೆಯಾಗಿವೆ. ನಾವು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಖಾಲಿ ನಿವೇಶನ ಹಾಗೂ ಖಾಲಿ ಮನೆಗಳಲ್ಲಿ ಸಾವಿರಾರು ಮತದಾರರ ಹೆಸರು ಸೇರ್ಪಡೆಯಾಗಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿನ ಕಾಂಗ್ರೆಸ್ ಬೆಂಬಲಿತರು ಹಾಗೂ ಒಕ್ಕಲಿಗ ಮತದಾರರ ಹೆಸರನ್ನು ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ.

ಚಿಲುಮೆ ಎಂಬ ಸಂಸ್ಥೆ ಮೂಲಕ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು, ಮಂತ್ರಿಗಳು, ಶಾಸಕರು ಮತಪಟ್ಟಿ ಪರಿಷ್ಕರಣೆ ಹೆಸರಲ್ಲಿ ಭಾರಿ ಅಕ್ರಮ ಮಾಡಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದಲ್ಲಿ 2018 ರಿಂದ 2022 ಜನವರಿವರೆಗೆ ಸುಮಾರು 90 ಸಾವಿರ ಮತಗಳ ಸೇರ್ಪಡೆ ಮಾಡಲಾಗಿದೆ. 2022 ರ ಜನವರಿ 22 ರಿಂದ ನವೆಂಬರ್ 9 ರವರೆಗೆ ಸುಮಾರು 40 ಸಾವಿರ ಮತಗಳ ಸೇರ್ಪಡೆ ಮಾಡಲಾಗಿದೆ. 1.30 ಲಕ್ಷ ಮತಗಳನ್ನು ಕಳೆದ ವಿಧಾನಸಭಾ ಚುನಾವಣೆ ನಂತರ ಸೇರಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರ ಗಮನಕ್ಕೆ ತಂದಿದ್ದೇವೆ' ಎಂದರು.

ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಆರೋಪದಲ್ಲಿ ಅಮಾನತು: ಹೈಕೋರ್ಟ್ ಮೆಟ್ಟಿಲೇರಿದ ಜಿಲ್ಲಾಧಿಕಾರಿ

Last Updated : Dec 7, 2022, 9:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.