ಬೆಂಗಳೂರು: ರಸ್ತೆ ಅಪಘಾತದಲ್ಲಿ ನಿಧನರಾದ ಖಾಸಗಿ ವಾಹಿನಿ ವರದಿಗಾರ ಹನುಮಂತು ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲಾ 5 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ಹನುಮಂತು ಅಂತಿಮ ದರ್ಶನ ಪಡೆದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಹನುಮಂತು ಕುಟುಂಬಕ್ಕೆ ಡಿಕೆಶಿಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿ ಬಂದಿದ್ದರು. ಇದೀಗ ಟ್ರಸ್ಟ್ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ 5 ಲಕ್ಷ ರೂ. ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಹನುಮಂತು ನಿಧನಕ್ಕೆ ಕಂಬನಿ ಮಿಡಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೃತನ ಕುಟುಂಬಕ್ಕೆ 5 ಲಕ್ಷ ರೂ. ವೈಯುಕ್ತಿಕ ನೆರವು ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
— H D Kumaraswamy (@hd_kumaraswamy) April 21, 2020 " class="align-text-top noRightClick twitterSection" data="
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
1/2 pic.twitter.com/UnU0wvdEke
">ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
— H D Kumaraswamy (@hd_kumaraswamy) April 21, 2020
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
1/2 pic.twitter.com/UnU0wvdEkeಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
— H D Kumaraswamy (@hd_kumaraswamy) April 21, 2020
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
1/2 pic.twitter.com/UnU0wvdEke
ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್ಡಿಕೆ, ಹನುಮಂತು ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.