ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅ.16 ರಿಂದ 27ರವರೆಗೆ ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್ 16ರಂದು ಬೆಂಗಳೂರಿನಿಂದ ಕಲಬುರಗಿಗೆ ಪ್ರಯಾಣ ಬೆಳೆಸುವವರು ಹಾಗೆ ಅವರು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
ಅಕ್ಟೋಬರ್ 27 ರ ವರೆಗೂ ವಿಜಯಪುರ, ಹುಬ್ಬಳ್ಳಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್ 16ರಂದು ಸಿಂದಗಿಯಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಅವರು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. 17 ರಂದು ಸಹ ಸಿಂದಗಿಯಲ್ಲಿ ಪ್ರಚಾರಕಾರ್ಯ ನಡೆಸುವವರು. ಅಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
18ರಂದು ಬೆಳಿಗ್ಗೆ ಹಾನಗಲ್ ಗೆ ಪ್ರಯಾಣ ಬೆಳೆಸುವ ಅವರು, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಸಂಜೆ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಹೂಡುವರು.19ರಂದು ಬೆಳಗ್ಗೆ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹಾಗೂ ವಿವಿಧ ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ.
ಇದಾದ ಬಳಿಕ ಎಲ್ಲಾ ನಾಯಕರು ಎರಡು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಉಪಚುನಾವಣೆಯ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಸಿಂದಗಿಯಲ್ಲಿ ರಣದೀಪ್ ಸುರ್ಜೆವಾಲಾ ಅವರೊಂದಿಗೆ ಪಕ್ಷದ ಹಿರಿಯ ನಾಯಕರ ಜೊತೆ ಸಭೆ ನಡೆಯಲಿದ್ದು ಇದರಲ್ಲಿ ಡಿಕೆಶಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 21ರಂದು ಹಾನಗಲ್ಗೆ ಆಗಮಿಸುವ ಶಿವಕುಮಾರ್, ರಣದೀಪ್ ಸುರ್ಜೆವಾಲಾ ಜೊತೆ ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಂದು ಮಧ್ಯಾಹ್ನ 2.30 ಕ್ಕೆ ಪಕ್ಷದ ಚುನಾವಣಾ ವೀಕ್ಷಕರ ಸಭೆಯನ್ನು ರಣದೀಪ್ ಸಿಂಗ್ ನಡೆಸಲಿದ್ದು ಶಿವಕುಮಾರ ಉಪಸ್ಥಿತರಿರುತ್ತಾರೆ. ನಂತರ ಒಂದು ಮತ್ತು ಮಾರನೇ ದಿನ ಎಲ್ಲ ನಾಯಕರು ಹಾನಗಲ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದು, ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ 23 ಮತ್ತು 24ರಂದು ಸಿಂದಗಿಯಲ್ಲಿ ಡಿಕೆಶಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. 25ರಂದು ಬೆಂಗಳೂರಿಗೆ ಆಗಮಿಸುವ ಅಶೋಕುಮಾರ್ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಗಳ ವಿವಾಹ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 26ರಂದು ಸಿಂದಗಿ, 27ರಂದು ಹಾನಗಲ್ ಕ್ಷೇತ್ರದಲ್ಲಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಪಚುನಾವಣೆ ಪ್ರಚಾರ ಕಾರ್ಯ ಪೂರೈಸಿ ಅಕ್ಟೋಬರ್ 28ರಂದು ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಯುವಕರ ಪ್ರಚಾರ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಡಿಕೆಶಿಗೆ ಸಾಥ್ ನೀಡಲಿದ್ದಾರೆ.