ETV Bharat / state

ರಾಜೀವ್ ಗಾಂಧಿ, ದೇವರಾಜ ಅರಸು ಭಾವಚಿತ್ರಕ್ಕೆ ಡಿಕೆಶಿ ಪುಷ್ಪ ನಮನ

ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪುಷ್ಪ ನಮನ ಸಲ್ಲಿಸಿದರು.

author img

By

Published : Aug 20, 2020, 1:56 PM IST

Rajiv gandhi and Devaraj Urs birth anniversar
ರಾಜೀವ್ ಗಾಂಧಿ, ದೇವರಾಜ ಅರಸು ಭಾವಚಿತ್ರಕ್ಕೆ ಡಿಕೆಶಿ ಪುಷ್ಪನಮನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ, ಉಭಯ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮ

ಇದಾದ ಬಳಿಕ ಕಾಂಗ್ರೆಸ್ ನಾಯಕರು "ಜನಧ್ವನಿ" ಕಾರ್ಯಕ್ರಮದಡಿಯಲ್ಲಿ ಪಾಲ್ಗೊಂಡರು. ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸಲು ವಿಫಲ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದ ತನಿಖೆ ನಡೆಸಲು ಒತ್ತಾಯಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ವತಿಯಿಂದ ಜನಧ್ವನಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಹಲವು ನಾಯಕರು ರಾಜೀವ್​ ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಉಭಯ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.