ETV Bharat / state

ಸಂಕ್ರಾಂತಿ ಪ್ರಯುಕ್ತ ನಿವಾಸದಲ್ಲಿ ಗೋಪೂಜೆ ನೆರವೇರಿಸಿದ ಡಿಕೆಶಿ ದಂಪತಿ - Sankranti festival

ಪ್ರತಿವರ್ಷ ಅದ್ಧೂರಿಯಾಗಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತಿದ್ದ ಡಿಕೆಶಿ, ಈ ಬಾರಿ ಕೊರೊನಾ ನಿಯಮಾವಳಿ ಜಾರಿಯಲ್ಲಿರುವ ಹಿನ್ನೆಲೆ ಕುಟುಂಬ ಸದಸ್ಯರ ಜೊತೆಗೆ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಿದರು. ಶಿವಕುಮಾರ್ ಪತ್ನಿ ಉಷಾ ಅವರು ಸಾಂಪ್ರದಾಯಿಕ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಗೋಪೂಜೆ ನೆರವೇರಿಸಿದ ಡಿಕೆಶಿ ದಂಪತಿ
ಗೋಪೂಜೆ ನೆರವೇರಿಸಿದ ಡಿಕೆಶಿ ದಂಪತಿ
author img

By

Published : Jan 14, 2021, 3:47 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಗೋಪೂಜೆ ನೆರವೇರಿಸಿದರು.

ಗೋಪೂಜೆ ನೆರವೇರಿಸಿದ ಡಿಕೆಶಿ ದಂಪತಿ

ಪ್ರತಿವರ್ಷ ಅದ್ಧೂರಿಯಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದ ಡಿಕೆಶಿ, ಈ ಬಾರಿ ಕೊರೊನಾ ನಿಯಮಾವಳಿ ಜಾರಿಯಲ್ಲಿರುವ ಹಿನ್ನೆಲೆ ಕುಟುಂಬ ಸದಸ್ಯರ ಜೊತೆಗೆ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಿದರು. ಪ್ರತಿವರ್ಷ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಹಬ್ಬವನ್ನು ಆಚರಿಸುತ್ತಾ ಬಂದಿರುವ ಅವರು, ಇದೇ ಮೊದಲ ಬಾರಿಗೆ ಇಷ್ಟೊಂದು ಸರಳವಾಗಿ ಸಂಕ್ರಾಂತಿ ಆಚರಣೆ ಮಾಡಿದ್ದಾರೆ.

ಓದಿ:ವಿಧಾನಸೌಧದಲ್ಲಿ ಕಚೇರಿ ಪೂಜೆ ನೆರವೇರಿಸಿದ ಸಚಿವ ಉಮೇಶ್ ಕತ್ತಿ

ಗೋವುಗಳಿಗೆ ವಿಶೇಷ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಶಿವಕುಮಾರ್ ಪತ್ನಿ ಉಷಾ ಅವರು ಸಾಂಪ್ರದಾಯಿಕ ಪೂಜಾ ವಿಧಿ ವಿಧಾನವನ್ನು ನೆರವೇರಿಸುವ ಮೂಲಕ ಪೂಜೆ ಮಾಡಿದರು. ಸಾಮಾನ್ಯವಾಗಿ ನಿವಾಸದಲ್ಲಿ ನಿತ್ಯ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗುತ್ತಿದ್ದ ಶಿವಕುಮಾರ್ ಇಂದು ಅಂತಹ ಯಾವುದೇ ಪ್ರೀತಿಯ ಸಭೆ ಅಥವಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರಲಿಲ್ಲ. ಮಧ್ಯಾಹ್ನ ಹಬ್ಬದೂಟವನ್ನು ಸವಿದು ನಂತರ ಕೆಪಿಸಿಸಿ ಕಚೇರಿಗೆ ಆಗಮಿಸಿದ ಡಿಕೆಶಿ ಮಾಧ್ಯಮಗೋಷ್ಟಿ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.