ETV Bharat / state

ಪಕ್ಷದ ಐವರು ಕಾರ್ಯಾಧ್ಯಕ್ಷರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ ಮಾಡಿದ ಡಿಕೆಶಿ - KPCC President D.K. Shivakumar

ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ್ ಹಾಗೂ ಸಲೀಂ ಅಹಮದ್ ಅವರಿಗೆ ವಿವಿಧ ಜಿಲ್ಲೆಗಳ ಜವಾಬ್ದಾರಿ ವಹಿಸುವ ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲ ವಿಭಾಗಗಳ ಹೊಣೆಗಾರಿಕೆಯನ್ನೂ ನೀಡಿದ್ದಾರೆ.

KPCC President D.K. Shivakumar
ಡಿಕೆಶಿ
author img

By

Published : Feb 25, 2021, 10:15 PM IST

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಾಗೂ ಪಕ್ಷದ ಇತರ ಜವಾಬ್ದಾರಿಗಳನ್ನು ವಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ್ ಹಾಗೂ ಸಲೀಂ ಅಹಮದ್ ಅವರಿಗೆ ವಿವಿಧ ಜಿಲ್ಲೆಗಳ ಜವಾಬ್ದಾರಿ ವಹಿಸುವ ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲ ವಿಭಾಗಗಳ ಹೊಣೆಗಾರಿಕೆಯನ್ನೂ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಮತ್ತು ಹೋರಾಟಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ಕಾರ್ಯಾಧ್ಯಕ್ಷರು ಆಯಾ ಜಿಲ್ಲೆಯ ಮುಖಂಡರ ಜೊತೆ ಸಮಾಲೋಚಿಸಿ ತೀರ್ಮಾನ ಕೈಗೊಂಡು ಅಧ್ಯಕ್ಷರಿಗೆ ಮಾಹಿತಿ ಒದಗಿಸಲಿದ್ದಾರೆ. ಮುಂಬರುವ ದಿನಗಳಲ್ಲಿ ಎದುರಾಗುವ ಚುನಾವಣೆಗಳು ಹಾಗೂ ಹೋರಾಟಗಳ ರೂಪುರೇಷೆ ಹೆಣೆಯುವ ನಿಟ್ಟಿನಲ್ಲಿ ಕಾರ್ಯಾಧ್ಯಕ್ಷರಿಗೆ ಡಿಕೆಶಿ ಈ ಒಂದು ಹೊಸ ಗುರಿ ನೀಡಿದ್ದಾರೆ.

ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿಗೆ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಣೆಗಾರಿಕೆ ವಹಿಸಲಾಗಿದೆ. ಇದರ ಜೊತೆಗೆ ಪಕ್ಷದ ಆಸ್ತಿ ಮತ್ತು ಸ್ವತ್ತುಗಳ ರಾಜ್ಯ ಸಮಿತಿ ಹಾಗೂ ಪಕ್ಷದ ಆಸ್ತಿ ಮತ್ತು ಸ್ವತ್ತುಗಳ ಬೆಂಗಳೂರು ನಗರ ಸಮಿತಿಯ ಜವಾಬ್ದಾರಿ ನೀಡಲಾಗಿದೆ.

ಓದಿ:ಪಂಚಮಸಾಲಿ 2ಎ ಹೋರಾಟ: ಮತ್ತೆ ಹೋರಾಟ ಮುಂದುವರೆಸಲು ಕರೆ ನೀಡಿದ ಜಯಮೃತ್ಯುಂಜಯ ಶ್ರೀ

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ, ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ ಹಾಗೂ ಬಳ್ಳಾರಿ ಗ್ರಾಮಾಂತರ ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ. ಇದರ ಜೊತೆಗೆ ರಾಜ್ಯ ಕಿಸಾನ್ ಕಾಂಗ್ರೆಸ್​ನ ಹೊಣೆಗಾರಿಕೆ ನೀಡಲಾಗಿದೆ.

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಧಾರವಾಡ ಗ್ರಾಮಾಂತರ, ಹುಬ್ಬಳ್ಳಿ-ಧಾರವಾಡ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಇದರ ಜೊತೆಗೆ ಇವರು ಪಕ್ಷದ ತರಬೇತಿ ಮತ್ತು ಕಾರ್ಯಾಗಾರಗಳನ್ನು ನೋಡಿಕೊಳ್ಳಬೇಕಾಗಿದೆ. ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್​ಗೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಗ್ರಾಮಾಂತರ, ಮೈಸೂರು ನಗರ, ಕೊಡಗು, ಚಾಮರಾಜನಗರ ಜಿಲ್ಲೆಯ ಜವಾಬ್ದಾರಿ ನೀಡಿದ್ದು, ಪಕ್ಷದ ರಾಜ್ಯ ವಿದ್ಯಾರ್ಥಿ ಘಟಕ (ಎನ್ಎಸ್ಯುಐ) ಹೊಣೆಗಾರಿಕೆಯನ್ನು ನೀಡಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್​ಗೆ ಗದಗ, ಹಾವೇರಿ, ದಾವಣಗೆರೆ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಇದರ ಜೊತೆಗೆ ಪಕ್ಷದ ಸಂಘಟನೆ ಮತ್ತು ಆಡಳಿತ ಹಾಗೂ ರಾಜ್ಯ ಸೇವಾದಳ ಘಟಕದ ಜವಾಬ್ದಾರಿಯನ್ನೂ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.