ಬೆಂಗಳೂರು: ಪಟಾಕಿ ಸಿಡಿಸದೆ ದೀಪಗಳನ್ನು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಸಚಿವ ಬೈರತಿ ಬಸವರಾಜ್ ತಿಳಿಸಿದರು.
ಹೊರಮಾವಿನ ಬಂಜಾರ ಬಡಾವಣೆಯಲ್ಲಿ 2 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕೊರೊನಾ ಈಗಾಗಲೇ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಇದರ ಮಧ್ಯೆ ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಿಂದ ಜನರಿಗೆ ಇನ್ನಷ್ಟು ಆರೋಗ್ಯ ಹದಗೆಡುತ್ತದೆ ಆದ್ದರಿಂದ ದೀಪ ಹಚ್ಚಿ ದೀಪಾವಳಿ ಹಬ್ಬ ಆಚರಿಸಿ ಎಂದರು.
ಗುಣಮಟ್ಟದ ರಸ್ತೆ ಡಾಂಬರು ಕೆಲಸ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಬೈರತಿ ಬಸವರಾಜ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯದಿರಿ ಎಂದರು. ರಾಜ್ಯದಲ್ಲಿ ಎರಡು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಯಡಿಯೂರಪ್ಪ ಅವರಿಗೆ ಹೆಚ್ಚಿನ ಬಲ ತುಂಬಿಸಲಾಗಿದೆ. ಕ್ಷೇತ್ರದಲ್ಲಿ ಎರಡು ತಿಂಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಮುಗಿಸಿಕೊಡುವುದಾಗಿ ಹೇಳಿದರು.