ETV Bharat / state

ರೈತರ ಪರೇಡ್ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಕೂಡದು; ಪೊಲೀಸರಿಗೆ ಹೈಕೋರ್ಟ್ ಸೂಚನೆ

author img

By

Published : Jan 25, 2021, 10:58 PM IST

ರೈತರ ಮೆರವಣಿಗೆ ವೇಳೆ ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ಪೊಲೀಸರು ಅಗತ್ಯ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

do-not-violate-the-kovid-guidelines-if-farmers-parade-high-court-notice-to-police
ಪೊಲೀಸರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ರೈತರು ನಡೆಸುವ ಪರೇಡ್ ವೇಳೆ ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಮರಾಠಾ ಅಭಿವೃದ್ಧಿ ಮಂಡಳಿ ಸ್ಥಾಪನೆ ವಿರೋಧಿಸಿ ನಡೆದ ಬಂದ್ ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ನಗರ ಪೊಲೀಸ್ ಆಯುಕ್ತರು ಸಿದ್ದಪಡಿಸಿದ ಪ್ರಮಾಣ ಪತ್ರವನ್ನು ಪೀಠಕ್ಕೆ ಒದಗಿಸಿದರು.

ಅನುಮತಿ ಇಲ್ಲದಿದ್ದರೂ ಬಂದ್ ಮತ್ತು ಮೆರವಣಿಗೆ ನಡೆಸಿದ ಹಿನ್ನೆಲೆ ವಾಟಾಳ್ ನಾಗರಾಜ್‌ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರಿಗೆ 50 ಸಾವಿರ ದಂಡ ಪಾವತಿಸುವಂತೆ ಸೂಚಿಸಲಾಗಿದೆ. ಆದರೆ, ದಂಡ ಮೊತ್ತ ಪಾವತಿಸಿಲ್ಲವಾದ್ದರಿಂದ ವಾಟಾಳ್ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅನುಸಾರ ಎಸ್‌ಜೆ ಪಾರ್ಕ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿವರಿಸಿದರು.

ವಕೀಲ ಜಿ.ಆರ್. ಮೋಹನ್ ವಾದಿಸಿ, ಪೊಲೀಸರು ಎಷ್ಟೇ ಕ್ರಮ ಜರುಗಿಸಿದರೂ ಮಾಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ರೈತರು ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆಯಾಗುವ ಸಾಧ್ಯತೆಯಿದೆ ಎಂದರು.

ಓದಿ: ಮೈಸೂರಿನಲ್ಲಿ ಅನುಮಾನಾಸ್ಪದ ಸೂಟ್​​ಕೇಸ್ ಪತ್ತೆ : ಆತಂಕಗೊಂಡ ಜನ

ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ರೈತರ ಮೆರವಣಿಗೆ ವೇಳೆ ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ಪೊಲೀಸರು ಅಗತ್ಯ ಕ್ರಮ ಜರುಗಿಸಬೇಕು. ಒಂದೊಮ್ಮೆ ಉಲ್ಲಂಘಿಸಿದರೆ, ಅವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆಯನ್ನು ಫೆ.1ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.