ETV Bharat / state

Doctor's Day ಆಚರಣೆ: ವೈದ್ಯರೊಂದಿಗೆ ವೈದ್ಯರಾದ ಡಿಸಿಎಂ ಅಶ್ವತ್ಥ್​ ನಾರಾಯಣ್ - ಬೆಂಗಳೂರು

ನಾನು ವೈದ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಅದರಲ್ಲಿಯೂ ಇಷ್ಟು ಜನ ವೈದ್ಯರ ಜತೆ ನಾನೂ ವೈದ್ಯನಾಗಿ ಇರುವುದು ನನ್ನ ಸಂತೋಷವನ್ನು ಹೆಚ್ಚಿಸಿದೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ಹೇಳಿದರು.

Doctors day celabration
ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
author img

By

Published : Jul 1, 2021, 1:11 PM IST

ಬೆಂಗಳೂರು: ಸ್ವತಃ ವೈದ್ಯರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್​ ನಾರಾಯಣ್​ ಇಂದು ವೈದ್ಯರ ದಿನಾಚರಣೆ ನಿಮಿತ್ತ ವೈದ್ಯರಲ್ಲಿ ವೈದ್ಯರಾಗಿಯೇ ಶುಭ ಕೋರಿ ಸಂಭ್ರಮಿಸಿದ ಪ್ರಸಂಗ ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ನಡೆಯಿತು. ಬೆಳಗ್ಗೆಯೇ ಆಸ್ಪತ್ರೆಗೆ ಆಗಮಿಸಿದ ಡಿಸಿಎಂ, ವೈದ್ಯರಿಗೆ ಹೂಗುಚ್ಛ, ಸಿಹಿ ನೀಡಿ ಶುಭಾಶಯ ಕೋರಿದರು. ಜತೆಗೆ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಅವರ ಕಷ್ಟ-ಸುಖಗಳನ್ನು ಆಲಿಸಿದರು.

ನಾನೂ ವೈದ್ಯ ಎಂದು ಹೇಳಲು ಹೆಮ್ಮೆ ಇದೆ:

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ್​​ ನಾನು ವೈದ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಅದರಲ್ಲಿಯೂ ಇಷ್ಟು ಜನ ವೈದ್ಯರ ಜತೆ ನಾನೂ ವೈದ್ಯನಾಗಿ ಇರುವುದು ನನ್ನ ಸಂತೋಷವನ್ನು ಹೆಚ್ಚಿಸಿದೆ. ಕೋವಿಡ್‌ ಹಿನ್ನೆಲೆ ವೈದ್ಯರು ಒತ್ತಡದಲ್ಲಿದ್ದಾರೆಂಬುದು ನಿಜ. ಹಗಲಿರುಳೆನ್ನದೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಸೋಂಕಿಗೆ ಎದೆಯೊಡ್ಡಿ ಜನರ ಪ್ರಾಣವನ್ನು ಕಾಪಾಡುತ್ತಿದ್ದಾರೆ. "ವೈದ್ಯೋ ನಾರಾಯಣ ಹರಿ" ಎಂಬ ಮಾತು ಸುಳ್ಳಲ್ಲ ಎಂದರು.

dcm cn ashwath narayan
ಡಿಸಿಎಂ ಅಶ್ವತ್ಥ ನಾರಾಯಣ್

ಆರೋಗ್ಯ ಇಲಾಖೆಗೆ 1,500 ಕೋಟಿ ರೂ.:

ವೈದ್ಯರು ಮತ್ತು ಜನರಿಗೆ ಅನುಕೂಲವಾಗುವಂತೆ ರಾಜ್ಯದ ಆರೋಗ್ಯ ಮೂಲ ಸೌಕರ್ಯಗಳನ್ನು ಆಮೂಲಾಗ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಹೆಚ್ಚುವರಿಯಾಗಿ ಸುಮಾರು 1,500 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಂದ ಮೊದಲುಗೊಂಡು ತಾಲೂಕು-ಜಿಲ್ಲಾಸ್ಪತ್ರೆಗಳ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ತಂತ್ರಜ್ಞಾನ ಅಭಿವೃದ್ಧಿ, ಮೂಲಸೌಕರ್ಯ, ವೈದ್ಯರು ಮತ್ತು ಸಿಬ್ಬಂದಿ ನೇಮಕ, ಮತ್ತಿತರೆ ಉದ್ದೇಶಕ್ಕಾಗಿ ಈ ಮೊತ್ತವನ್ನು ವಿನಿಯೋಗ ಮಾಡಲಾಗುತ್ತಿದೆ. ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಕೊನೆ ಪಕ್ಷ 25 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಕಡಿಮೆ ದರದಲ್ಲಿ ಆರೋಗ್ಯ ಸೌಲಭ್ಯ:

ಇದರ ಜತೆಗೆ ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಆಸ್ಪತ್ರೆಯನ್ನು ಹಾಗೂ ಪ್ರತೀ ನಾಲ್ಕು ಕ್ಷೇತ್ರಗಳಿಗೊಂದು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು. ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಆರೋಗ್ಯ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

ಕಳೆದ ಮೇ 5ರಂದು ರಾತ್ರಿ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆ ಉಂಟಾದಾಗ ಇಡೀ ರಾತ್ರಿ ಇಡೀ ವೈದ್ಯರ ತಂಡ, ಸಿಬ್ಬಂದಿ ಸೋಂಕಿತರ ಕಾಳಜಿ ವಹಿಸಿದ್ದ ಘಟನೆಯನ್ನು ಸ್ಮರಿಸಿದ ಡಿಸಿಎಂ ಡಾ.ಅಶ್ವತ್ಥ ನಾರಾಯಣ್​, ಅಂದು ಕರ್ತವ್ಯದಲ್ಲಿದ್ದು ಸೋಂಕಿತರ ಪ್ರಾಣ ರಕ್ಷಣೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಡಾ.ಮೋಹನ್ ಅವರ ನೇತೃತ್ವದಲ್ಲಿ ಎಲ್ಲ ಸಿಬ್ಬಂದಿ, ವೈದ್ಯರು ಅತ್ಯುತ್ತಮವಾಗಿ ಕೆಲಸ ಮಾಡಿದರು. ಸ್ವಲ್ಪ ಎಚ್ಚರ ತಪ್ಪಿದ್ದಿದ್ದರೆ ದೊಡ್ಡ ಅನಾಹುತ ಆಗುತ್ತಿತ್ತು. ಇಡೀ ರಾತ್ರಿ ಸ್ವಲ್ಪವೂ ಎಚ್ಚರ ತಪ್ಪದೇ ಕೆಲಸ ಮಾಡಿದ ಎಲ್ಲರಿಗೂ ಸರ್ಕಾರ ಋಣಿಯಾಗಿದೆ ಎಂದರು.

ಈ ಸಂದರ್ಭ ಕೆ ಸಿ ಜನರಲ್‌ ಆಸ್ಪತ್ರೆ ಅಧೀಕ್ಷಕ ಡಾ.ವೆಂಕಟೇಶಯ್ಯ, ಡಾ. ಮೋಹನ್‌ ಸೇರಿದಂತೆ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ: ರಾಷ್ಟ್ರೀಯ ವೈದ್ಯರ ದಿನ: ಶುಭ ಕೋರಿದ ಗಣ್ಯರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.