ETV Bharat / state

ಸಿಎಂ ಕಾರ್ಯದರ್ಶಿ ಎನ್.ಆರ್ ಸಂತೋಷ್​ ಇಂದು ಡಿಸ್ಚಾರ್ಜ್​ ಸಾಧ್ಯತೆ - ಎನ್.ಆರ್ ಸಂತೋಷ್ ಡಿಸ್ಚಾರ್ಜ್​​

ಭಾನುವಾರ ರಾಮಯ್ಯ ಆಸ್ಪತ್ರೆ ವೈದ್ಯರು ಸಂತೋಷ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಇಂದು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಬೆಳಗ್ಗೆ 11 ಗಂಟೆಗೆ ಸಂತೋಷ್​ಗೆ ರುಟಿನ್ ಹೆಲ್ತ್ ಚೆಕಪ್ ನಡೆಸಿದ ನಂತರ ಡಿಸ್ಚಾರ್ಜ್ ಮಾಡಲಿದ್ದಾರೆ ಎನ್ನಲಾಗಿದೆ.

ಎನ್.ಆರ್ ಸಂತೋಷ್
ಎನ್.ಆರ್ ಸಂತೋಷ್
author img

By

Published : Nov 30, 2020, 8:28 AM IST

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಕಾರ್ಯದರ್ಶಿ ಎನ್.ಆರ್ ಸಂತೋಷ್ ಇಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಮಧ್ಯಾಹ್ನ 2ಗಂಟೆ ನಂತರ ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧಾರ ಮಾಡಿದ್ದಾರೆ.

ನಿನ್ನೆ ರಾಮಯ್ಯ ಆಸ್ಪತ್ರೆ ವೈದ್ಯರು ಸಂತೋಷ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಇಂದು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಬೆಳಗ್ಗೆ 11 ಗಂಟೆಗೆ ಸಂತೋಷ್​ಗೆ ರುಟಿನ್ ಹೆಲ್ತ್ ಚೆಕಪ್ ನಡೆಸಿದ ನಂತರ ಡಿಸ್ಚಾರ್ಜ್ ಮಾಡಲಿದ್ದಾರೆ.

ನವೆಂಬರ್ 27ರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ನಂತರ ಒಂದು ದಿನ ಐಸಿಯು ವಾರ್ಡ್​ನಲ್ಲಿದ್ದರು. ಬಳಿಕ ಜನರಲ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ, ಪೊಲೀಸರು ಆಸ್ಪತ್ರೆಗೆ ತೆರಳಿ ಸಂತೋಷ್ ಸ್ಟೇಟ್​ಮೆಂಟ್ ಪಡೆಯಲು ಯತ್ನಿಸಿದ್ದರು. ಆದರೆ, ಸಂತೋಷ್ ಚಿಕಿತ್ಸೆ ಪಡೆಯುತ್ತಿದ್ದಾರೆ 48 ಗಂಟೆಗಳ ಕಾಲ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದರು.

ಹೀಗಾಗಿ ಇಂದು ಸಂತೋಷ್ ಡಿಸ್ಚಾರ್ಜ್ ಆದರೆ, ಮನೆಗೆ ತೆರಳಿ ಪೊಲೀಸರು ಸ್ಟೇಟ್​​​ಮೆಂಟ್ ಪಡೆಯಲಿದ್ದಾರೆ. ಆತ್ಮಹತ್ಯೆ ಯತ್ನದ ಕುರಿತು ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.