ETV Bharat / state

ಸೇವೆ ಖಾಯಂಗೊಳಿಸುವಂತೆ ಡಿಸಿಎಂಗೆ ಗುತ್ತಿಗೆ ವೈದ್ಯರ ಮನವಿ - Dcm Dr c n ashwattabarayana

ಇಂದು ರೇಸ್ ಕೋರ್ಸ್ ರಸ್ತೆಯ ನಿವಾಸದಲ್ಲಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಗುತ್ತಿಗೆ ವೈದ್ಯರು, ಜೀವದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ನಮ್ಮ ಸೇವೆಯನ್ನು ಕೂಡಲೇ ಖಾಯಂ ಮಾಡಬೇಕು ಎಂದು ಮನವಿ ಮಾಡಿದರು.

Doctors
Doctors
author img

By

Published : Jun 17, 2020, 5:41 PM IST

ಬೆಂಗಳೂರು: ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ತಮ್ಮ ಸೇವೆಯನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ರೇಸ್ ಕೋರ್ಸ್ ರಸ್ತೆಯ ನಿವಾಸದಲ್ಲಿ ಡಿಸಿಎಂ ಅವರನ್ನು ಭೇಟಿಯಾದ ಗುತ್ತಿಗೆ ವೈದ್ಯರು, ಜೀವದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ನಮ್ಮ ಸೇವೆಯನ್ನು ಕೂಡಲೇ ಖಾಯಂ ಮಾಡಬೇಕು ಎಂದು ಮನವಿ ಮಾಡಿದರು. ಅಹವಾಲು ಆಲಿಸಿ ಕೂಡಲೇ ಕಾರ್ಯಪ್ರವೃತ್ತರಾದ ಡಿಸಿಎಂ, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಜೊತೆ ಸ್ಥಳದಲ್ಲಿಯೇ ಮಾತುಕತೆ ನಡೆಸಿ, ಸಿಎಂ ಜೊತೆ ಮಾತುಕತೆಗೆ ವೇದಿಕೆ ಕಲ್ಪಿಸಿದರು. ಜೊತೆಗೆ ಸಂಪುಟದಲ್ಲಿಯೂ ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ವೈದ್ಯರಿಗೆ ಭರವಸೆ ನೀಡಿದರು.

ಗುತ್ತಿಗೆ ವೈದ್ಯರು ಹೇಳುವುದೇನು?:ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ಮಾಡಿರುವ 506 ವೈದ್ಯರು, ರಾಜ್ಯಾದ್ಯಂತ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಪೈಕಿ 264 ಮಂದಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆಯನ್ನು ಪೂರ್ಣಗೊಳಿಸಿದ್ದೇವೆ. ಅನೇಕ ವೈದ್ಯರು ಹಳ್ಳಿ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಾರದಿರುವ ಹಿನ್ನೆಲೆ, ಗ್ರಾಮೀಣ ಪ್ರದೇಶದಿಂದಲೇ ಬಂದಿರುವ ನಾವು ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿಗಳ ಗಮನ ಸೆಳೆದರು.

ಹಿಂದಿನಿಂದಲೂ ಮೂರು ವರ್ಷ ಸೇವೆ ಮಾಡಿರುವ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲಾಗಿದೆ. ಪ್ರವಾಹ, ಬರಗಾಲ, ಕೋವಿಡ್ 19 ಸಮಯದಲ್ಲೂ ನಾವು ಹಿಂಜರಿಯದೆ ಜನರ ಸೇವೆ ಮಾಡಿದ್ದೇವೆ. ಖಾಯಂ ವೈದ್ಯರಂತೆ ಜವಾಬ್ದಾರಿಯುತವಾಗಿ ನಾವೂ ಕೂಡಾ ಕೆಲಸ ಮಾಡುತ್ತಿದ್ದೇವೆ. ಹೀಗಿದ್ದರೂ ಗುತ್ತಿಗೆ ಆಧಾರಿತ ವೈದ್ಯರ ಸೇವೆಯನ್ನು ಖಾಯಂಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ರದ್ದು ಮಾಡಿದ ಕಾರಣ ನಾವೆಲ್ಲರೂ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ.

ಈ ಹಿಂದೆ ಮಾತುಕತೆಗೆ ಕರೆಯುವಂತೆ ಮಾಡಿದ ಮನವಿಗಳಿಗೆ ಅಧಿಕಾರಿಗಳು ಸ್ಪಂದಿಸಿಲ್ಲ. ಜೊತೆಗೆ ವೇತನ, ಭತ್ಯೆಗಳನ್ನು ನೀಡುವುದರಲ್ಲಿಯೂ ತೀವ್ರ ತಾರತಮ್ಯ ಎಸಗಲಾಗುತ್ತಿದೆ ಎಂದು ವೈದ್ಯರು ಆರೋಪಿಸಿದರು.

ಬಳಿಕ ಡಿಸಿಎಂ ಪ್ರತಿಕ್ರಿಯಿಸಿ, ವೈದ್ಯರು ಹೀಗೆ ರಾಜೀನಾಮೆ ನೀಡುವ ಪ್ರಕ್ರಿಯೆ ಸರಿ ಅಲ್ಲ. ಇಡೀ ರಾಜ್ಯ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಕ್ಲಿಷ್ಟಸ್ಥಿತಿಯಲ್ಲಿ ವೈದ್ಯರು ರಾಜೀನಾಮೆಗೆ ಮುಂದಾಗುವುದು ಉತ್ತಮವಲ್ಲ. ಪ್ರತಿಯೊಬ್ಬರೂ ಈ ಮಹಾಮಾರಿ ವಿರುದ್ಧ ಸೆಣಸಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ನಿಮ್ಮೆಲ್ಲರ ಸಮಸ್ಯೆಗಳನ್ನು ಮನವರಿಕೆ ಮಾಡಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.