ಬೆಂಗಳೂರು: ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇಲ್ಲ ಅಂತ ಕಾಣುತ್ತದೆ. ನಿರ್ದಿಷ್ಟವಾದ ಮಾಹಿತಿ ಪಡೆದುಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದರೆ ಒಳ್ಳೆಯದಿತ್ತು. ಜವಾಬ್ದಾರಿ ಸ್ಥಾನದಲ್ಲಿ ಇದ್ದೀನಿ ಎಂದು ಹೇಳಿದ್ದೀರಿ. ಜನರಿಗೆ ದಾರಿತಪ್ಪಿಸುವ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ನಾಗೇಂದ್ರ ಅವರ ಕೇಸ್ ಮುಚ್ಚಿ ಹಾಕೋದು ನಮ್ಮ ಕಾರ್ಯವೈಖರಿಯಲ್ಲ. ಅವೆಲ್ಲಾ ನಿಮ್ಮ ಕಾರ್ಯಗಳು. ಸಾವಿನ ಮನೆಗೆ ಸಾಂತ್ವನ ಹೇಳಲು ಹೋದಾಗ ಕೆಲವರು ಕೆಲವರ ನಿರ್ದೇಶನದಂತೆ ಮಾಡಲು ಬಂದಿದ್ದರೇೆ ವಿನಃ ನೋವನ್ನು ಹಂಚಿಕೊಳ್ಳಲು ಅಲ್ಲ. ಸಾವಿನ ಮನೆಯಲ್ಲಿ ರಾಜಕೀಯ ಮಾಡೋದು ನಿಮ್ಮ ವಿಕೃತಿ. ನಮ್ಮದು ಸಾಂತ್ವನ ಹೇಳುವ ಸುಸಂಸ್ಕೃತಿ ಎಂದು ಸರಣಿ ಟ್ವೀಟ್ಗಳ ಮೂಲಕ ಹರಿಹಾಯ್ದಿದ್ದಾರೆ.
-
ಕೆಪಿಸಿಸಿ ಅಧ್ಯಕ್ಷರಾದ ಶ್ರೀಡಿಕೆ ಶಿವಕುಮಾರ್ ಅವರೇ, ದೈವಾಧೀನರಾದ ಆರೋಗ್ಯಾಧಿಕಾರಿ ಡಾ ನಾಗೇಂದ್ರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇಲ್ಲ ಅಂತ ಕಾಣುತ್ತೆ.ನಿರ್ದಿಷ್ಟವಾದ ಮಾಹಿತಿ ಪಡೆದುಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದರೆ ಒಳ್ಳೆಯದಿತ್ತು.ಜವಾಬ್ದಾರಿ ಸ್ಥಾನದಲ್ಲಿ ಇದ್ದೀನಿ ಎಂದು ಹೇಳಿದ್ದೀರಿ.ಜನರಿಗೆ ದಾರಿತಪ್ಪಿಸುವ ಕೆಲಸ ಮಾಡಬೇಡಿ.(1/2)
— Dr Sudhakar K (@mla_sudhakar) August 21, 2020 " class="align-text-top noRightClick twitterSection" data="
">ಕೆಪಿಸಿಸಿ ಅಧ್ಯಕ್ಷರಾದ ಶ್ರೀಡಿಕೆ ಶಿವಕುಮಾರ್ ಅವರೇ, ದೈವಾಧೀನರಾದ ಆರೋಗ್ಯಾಧಿಕಾರಿ ಡಾ ನಾಗೇಂದ್ರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇಲ್ಲ ಅಂತ ಕಾಣುತ್ತೆ.ನಿರ್ದಿಷ್ಟವಾದ ಮಾಹಿತಿ ಪಡೆದುಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದರೆ ಒಳ್ಳೆಯದಿತ್ತು.ಜವಾಬ್ದಾರಿ ಸ್ಥಾನದಲ್ಲಿ ಇದ್ದೀನಿ ಎಂದು ಹೇಳಿದ್ದೀರಿ.ಜನರಿಗೆ ದಾರಿತಪ್ಪಿಸುವ ಕೆಲಸ ಮಾಡಬೇಡಿ.(1/2)
— Dr Sudhakar K (@mla_sudhakar) August 21, 2020ಕೆಪಿಸಿಸಿ ಅಧ್ಯಕ್ಷರಾದ ಶ್ರೀಡಿಕೆ ಶಿವಕುಮಾರ್ ಅವರೇ, ದೈವಾಧೀನರಾದ ಆರೋಗ್ಯಾಧಿಕಾರಿ ಡಾ ನಾಗೇಂದ್ರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇಲ್ಲ ಅಂತ ಕಾಣುತ್ತೆ.ನಿರ್ದಿಷ್ಟವಾದ ಮಾಹಿತಿ ಪಡೆದುಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದರೆ ಒಳ್ಳೆಯದಿತ್ತು.ಜವಾಬ್ದಾರಿ ಸ್ಥಾನದಲ್ಲಿ ಇದ್ದೀನಿ ಎಂದು ಹೇಳಿದ್ದೀರಿ.ಜನರಿಗೆ ದಾರಿತಪ್ಪಿಸುವ ಕೆಲಸ ಮಾಡಬೇಡಿ.(1/2)
— Dr Sudhakar K (@mla_sudhakar) August 21, 2020
ಈಗಾಗಲೇ ಸಿಎಂ ಬಿಎಸ್‌ವೈ ದೈವಾಧೀನರಾದ ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗು ಮೃತರ ಶ್ರೀಮತಿಯವರಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗ ನೀಡಲು ಭರವಸೆ ನೀಡಿದ್ದಾರೆ. ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ.
ಕೋವಿಡ್ ಸಂಕಷ್ಟದಲ್ಲಿ ವೈದ್ಯರ ಸಂಕಷ್ಟ ಏನು ಎಂದು ನಮಗೆ ಗೊತ್ತು. ಎಲ್ಲಾ ವೈದ್ಯರ ಸಮಸ್ಯೆಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸೂಕ್ತ ವ್ಯವಸ್ಥೆ ಮಾಡುತ್ತಿದ್ದೇವೆ. ಪ್ರಚಾರಕ್ಕೋಸ್ಕರ ಮಾತನಾಡಬೇಡಿ. ʼಮಳೆ ಬಂದಾಗ ಓಡಿ ಹೋಗಿ ಮರದ ಕೆಳಗೆ ನಿಲ್ಲುವವರು ಅದು ಯಾವ ಜಾತಿಯ ಮರವೆಂದು ನೋಡುವುದಿಲ್ಲ.ʼಸಾವಿನ ವಿಷಯದಲ್ಲಿ ರಾಜಕೀಯ ಮಾಡೋದು ತರವಲ್ಲ ಎಂದು ಡಿಕೆಶಿ ವಿರುದ್ಧ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದ್ದಾರೆ.