ಬೆಂಗಳೂರು: ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹಾಕಿಸಿಕೊಂಡರು. ಮೊದಲ ಡೋಸ್ ಪಡೆದ ಸಿಎಂ, ಯಾವುದೇ ಆತಂಕವಿಲ್ಲದೆ ಲಸಿಕೆ ಹಾಕಿಸಿಕೊಳ್ಳುವಂತೆ ರಾಜ್ಯದ ಜನತೆಗೆ ಕರೆ ನೀಡಿದರು.
ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲು ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಆಗಮಿಸಿದ್ದು, ವಿಕ್ಟೋರಿಯಾದ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಸೂಪರ್ ಸ್ಪೆಷಾಲಿಟಿ (PMSSY) ಆಸ್ಪತ್ರೆಯಲ್ಲಿ ಮೊದಲ ಡೋಸ್ ಹಾಕಿಸಿಕೊಂಡ ಸಿಎಂಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದರು.
ಕೋವ್ಯಾಕ್ಸಿನ್ ದೇಶೀಯ ಲಸಿಕೆಯಾಗಿದ್ದು, ಇದೇ ಲಸಿಕೆಯನ್ನು ನಾನು ತೆಗೆದುಕೊಂಡಿದ್ದೇನೆ. ಲಸಿಕೆಯಿಂದ ಯಾವುದೇ ಸಮಸ್ಯೆ ಇಲ್ಲ. ಜನತೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಲಸಿಕೆ ಹಾಕಿಸಿಕೊಂಡ ನಂತರ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿಕೊಂಡರು.
ಓದಿ:ಸಿಡಿ ಪ್ರಕರಣದ SIT ತನಿಖೆ ಚುರುಕು; ಐವರನ್ನು ವಶಕ್ಕೆ ಪಡೆದು ವಿಚಾರಣೆ
ಪ್ರಧಾನಿಗಳು ಅಲ್ಲದೇ ಅವರ ತಾಯಿ ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ. ಇಂದು ನಾನು ಹಾಕಿಸಿಕೊಂಡಿದ್ದೇನೆ. ಹೀಗಾಗಿ ನಾನು ರಾಜ್ಯದ ಜನತೆಗೆ ಕರೆ ಕೊಡುತ್ತೇನೆ. ಕೊರೊನಾ ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಆಗೋದಿಲ್ಲ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದರು.