ETV Bharat / state

ಸಹಿ ಸಂಗ್ರಹಿಸಬೇಡಿ, ರಾಜಕೀಯ ಹೇಳಿಕೆ ನೀಡಬೇಡಿ: ಬೆಂಬಲಿಗರಿಗೆ ಸಿಎಂ ಬಿಎಸ್​ವೈ ಖಡಕ್​ ಸೂಚನೆ

author img

By

Published : Jun 7, 2021, 5:02 PM IST

ಯಡಿಯೂರಪ್ಪ ಪರ ಶಾಸಕರು ಸಹಿ ಸಂಗ್ರಹ ಮಾಡಿದ್ದು, ಅದನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪ್ರತಿಯಾಗಿ ಅರವಿಂದ ಬೆಲ್ಲದ್, ಎಂ.ಪಿ ಕುಮಾರಸ್ವಾಮಿ ಸಹಿ ಸಂಗ್ರಹ ಹಳೆಯದು ಎಂದು ಪ್ರತಿ ಹೇಳಿಕೆ ನೀಡಿರುವುದರಿಂದ ಕೇಸರಿ ಪಾಳೆಯದಲ್ಲಿ ಸಹಿ ಸಂಗ್ರಹದ ಹೊಸ ವಿವಾದ ಸೃಷ್ಟಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮಧ್ಯ ಪ್ರವೇಶಿಸಿದ್ದಾರೆ.

cm bsy
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ತಣ್ಣಗಾಗುತ್ತಿದ್ದಂತೆ ಸಿಎಂ ಪರ-ವಿರೋಧವಾಗಿ ಸಹಿ ಸಂಗ್ರಹ ವಿಷಯ ಮುನ್ನೆಲೆಗೆ ಬಂದಿದೆ. ಪಕ್ಷದಲ್ಲಿ ಆಂತರಿಕ ಕಲಹಕ್ಕೆ ವೇದಿಕೆ ಕಲ್ಪಿಸುವ ಈ ಬೆಳವಣಿಗೆಗೆ ತಡೆವೊಡ್ಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಸಹಿ ಸಂಗ್ರಹ ಮಾಡುವುದು, ರಾಜಕೀಯ ಹೇಳಿಕೆ ನೀಡುವುದನ್ನು ಮಾಡದಂತೆ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.

  • ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ

    — B.S. Yediyurappa (@BSYBJP) June 7, 2021 " class="align-text-top noRightClick twitterSection" data=" ">

ಯಡಿಯೂರಪ್ಪ ಪರ ಶಾಸಕರ ಸಹಿ ಸಂಗ್ರಹ ಮಾಡಿದ್ದು, ಅದನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಅದಕ್ಕೆ ಪ್ರತಿಯಾಗಿ ಅರವಿಂದ ಬೆಲ್ಲದ್, ಎಂ.ಪಿ ಕುಮಾರಸ್ವಾಮಿ ಸಹಿ ಸಂಗ್ರಹ ಹಳೆಯದು ಎಂದು ಪ್ರತಿ ಹೇಳಿಕೆ ನೀಡಿರುವುದರಿಂದ ಕೇಸರಿ ಪಾಳಯದಲ್ಲಿ ಸಹಿ ಸಂಗ್ರಹದ ಹೊಸ ವಿವಾದ ಸೃಷ್ಟಿಸಿದೆ.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿ ಸಹಿ ಸಂಗ್ರಹದಂತಹ ಚಟುವಟಿಕೆಗೆ ಬ್ರೇಕ್ ಹಾಕಿದ್ದಾರೆ.

ಓದಿ: ವರ್ಗಾವಣೆ ಹಿಂದಿನ ಕಾರಣದ ಬಗ್ಗೆ ತನಿಖೆ ಆಗಲಿ: ಎಂ ಲಕ್ಷ್ಮಣ್ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.