ETV Bharat / state

ಝಿಕಾ ವೈರಸ್ ಭಯಬೇಡ, ಮುನ್ನೆಚ್ಚರಿಕೆ ಅಗತ್ಯ.. ಇಲ್ಲಿವೆ ಕೆಲ ಉಪಯುಕ್ತ ಸಲಹೆಗಳು..

ಝಿಕಾ ವೈರಸ್ ಹಗಲಿನಲ್ಲಿ ಬರುವ ಸೊಳ್ಳೆಗಳು ಕಚ್ಚುವುದರಿಂದ ಹರಡಲಿದೆ. ಈಗ ಮಳೆಗಾಲವಾದ್ದರಿಂದ ಸೊಳ್ಳೆ ಉತ್ಪತ್ತಿ ಸಹ ಹೆಚ್ಚು. ಹೀಗಾಗಿ, ಈ ಸಮಯದಲ್ಲಿ ಅತಿ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ನಿವಾರಕ ಕ್ರೀಮ್‌ಗಳ ಬಳಕೆ, ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ಪರದೆ ಬಳಸುವುದರಿಂದ ಸಾಧ್ಯವಾದಷ್ಟು ತಡೆಗಟ್ಟಬಹುದು. ಮುಖ್ಯವಾಗಿ, ಈ ಕಾಯಿಲೆ ಇರುವ ಜಾಗಕ್ಕೆ ತೆರಳಿದಾಗ ಸಂಭೋಗ ಕ್ರಿಯೆ ನಡೆಸಬಾರದು. ಮಳೆಗಾಲದಲ್ಲಿ ಗರ್ಭಧರಿಸುವುದು ಒಳ್ಳೆಯದಲ್ಲ..

ಝಿಕಾ ವೈರಸ್ ಭಯಬೇಡ
ಝಿಕಾ ವೈರಸ್ ಭಯಬೇಡ
author img

By

Published : Jul 23, 2021, 7:17 PM IST

ಬೆಂಗಳೂರು : ಕೋವಿಡ್ ನಂತರ ಅತಿ ಹೆಚ್ಚು ಭಯ ಹುಟ್ಟಿಸುತ್ತಿರುವ ಮತ್ತೊಂದು ರೋಗವೆಂದರೆ ಝಿಕಾ ವೈರಸ್. ಈಗಾಗಲೇ ಕೇರಳ, ಮಹಾರಾಷ್ಟ್ರಗಳಲ್ಲಿ ಹೆಚ್ಚು ಝಿಕಾ ವೈರಸ್ ಪ್ರಕರಣ ದಾಖಲಾಗುತ್ತಿವೆ. ಅಲ್ಲಿನ ಸರ್ಕಾರಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿವೆ. ಈ ಸಾಂಕ್ರಮಿಕ ರೋಗಕ್ಕೆ ಮದ್ದಿಲ್ಲ. ಅದರಲ್ಲೂ ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ.

ಝಿಕಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಹಿರಿಯ ಸಲಹೆಗಾರ್ತಿ ಡಾ.ಅನು ಶ್ರೀಧರ್ ಈಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.

ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಹಿರಿಯ ಸಲಹೆಗಾರ್ತಿ ಡಾ.ಅನು ಶ್ರೀಧರ್

ಭ್ರೂಣದ ಮೆದುಳಿನ ಮೇಲೆ ಪರಿಣಾಮ : ಸೊಳ್ಳೆಗಳ ಮೂಲಕ ಹರಡುವ ಈ ವೈರಸ್ ಹೆಚ್ಚಾಗಿ ಗರ್ಭಿಣಿಯರಿಗೆ ಅಪಾಯಕಾರಿಯಾಗಿದೆ. ಗರ್ಭಿಣಿಯರು ಈ ಝಿಕಾ ವೈರಸ್‌ಗೆ ತುತ್ತಾದರೆ ಮೊದಲು ಸಮಸ್ಯೆಯಾಗುವುದೇ ಹುಟ್ಟುವ ಮಗುವಿಗೆ. ಈ ವೈರಸ್‌ನಿಂದ ಭ್ರೂಣಗಳ ಮೆದುಳಿಗೆ ಕ್ರಮಿಸಿ ಮೈಕ್ರೋ ಸೆಫಾಲಿ ಎಂಬ ಗಂಭೀರ ಜನ್ಮ ದೋಷಕ್ಕೆ ಕಾರಣವಾಗಬಹುದು. ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕ್ಷೀಣಿಸಿ, ಮಗು ಆಟಿಸಂನಂಥಹ ರೋಗದೊಂದಿಗೆ ಹುಟ್ಟುವ ಸಾಧ್ಯತೆ ಹೆಚ್ಚು. ಜೊತೆಗೆ, ಶ್ರವಣ ಹಾಗೂ ದೃಷ್ಟಿ ದೋಷ, ಕೀಲುಗಳಲ್ಲಿ ಚಲನೆ ಇಲ್ಲದಿರುವುದು, ನರ ಬೆಳವಣಿಗೆಯಲ್ಲಿ ವೈಪರೀತ್ಯ ಸೇರಿದಂತೆ ಹಲವು ರೀತಿಯ ರೋಗಗಳಿಗೆ ಈ ವೈರಸ್ ಕಾರಣವಾಗಬಹುದು. ಗರ್ಭಿಣಿಯಲ್ಲಿ ರೋಗ ನಿರೋಧ ಶಕ್ತಿ ಕಡಿಮೆ ಇದ್ದರಂತೂ ಶಿಶುವಿನ ಪ್ರಾಣಕ್ಕೂ ಕುತ್ತು ತರಬಹುದು ಎಂದು ಹೇಳಿದ್ದಾರೆ.

ಚಿಕಿತ್ಸೆ ಏನು?: ಪ್ರಸ್ತುತ ಝಿಕಾ ವೈರಸ್‌ಗೆ ಯಾವುದೇ ನಿಗದಿತ ಚಿಕಿತ್ಸೆಯಾಗಲಿ ಅಥವಾ ಲಸಿಕೆಯಾಗಲಿ ಇಲ್ಲ. ಕೋವಿಡ್ ಲಸಿಕೆ ಹಾಕಿಸಿಕೊಂಡವರಲ್ಲಿ ಝಿಕಾ ವೈರಸ್‌ನಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು ಕಡಿಮೆ ಇದೆ. ಆದರೆ, ಗರ್ಭಿಣಿಯರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಇನ್ನೂ ಅವಕಾಶ ಇಲ್ಲವಾದ್ದರಿಂದ ಹೆಚ್ಚು ಎಚ್ಚರಿಕೆಯಿಂದ ಇರುವುದು ಒಳಿತು ಎಂದು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ : ಝಿಕಾ ವೈರಸ್ ಹಗಲಿನಲ್ಲಿ ಬರುವ ಸೊಳ್ಳೆಗಳು ಕಚ್ಚುವುದರಿಂದ ಹರಡಲಿದೆ. ಈಗ ಮಳೆಗಾಲವಾದ್ದರಿಂದ ಸೊಳ್ಳೆ ಉತ್ಪತ್ತಿ ಸಹ ಹೆಚ್ಚು. ಹೀಗಾಗಿ, ಈ ಸಮಯದಲ್ಲಿ ಅತಿ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ನಿವಾರಕ ಕ್ರೀಮ್‌ಗಳ ಬಳಕೆ, ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ಪರದೆ ಬಳಸುವುದರಿಂದ ಸಾಧ್ಯವಾದಷ್ಟು ತಡೆಗಟ್ಟಬಹುದು. ಮುಖ್ಯವಾಗಿ, ಈ ಕಾಯಿಲೆ ಇರುವ ಜಾಗಕ್ಕೆ ತೆರಳಿದಾಗ ಸಂಭೋಗ ಕ್ರಿಯೆ ನಡೆಸಬಾರದು. ಮಳೆಗಾಲದಲ್ಲಿ ಗರ್ಭಧರಿಸುವುದು ಒಳ್ಳೆಯದಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರ ಎಚ್ಚರಿಕೆ ವಹಿಸಲಿ : ವಿಪರೀತ ಸೊಳ್ಳೆಗಳಿರುವ ಪ್ರದೇಶ, ಪಾರ್ಕ್‌ನಂತಹ ಜಾಗದಲ್ಲಿ ಸರ್ಕಾರವು ಸೊಳ್ಳೆ ನಿವಾರಕ ಔಷಧಿ ಸಿಂಪಡಣೆ ಮಾಡುವತ್ತ ಹೆಚ್ಚು ಗಮನಹರಿಸಬೇಕು. ಎಲ್ಲಾ ಪ್ರದೇಶಗಳಿಗೆ ಆರೋಗ್ಯ ಕಾರ್ಯಕರ್ತರನ್ನು ಕಳುಹಿಸಿ ಗರ್ಭಿಣಿಯ ಆರೋಗ್ಯದ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಜೊತೆಗೆ, ಈ ಅವಧಿಯಲ್ಲಿ ಗರ್ಭಧಾರಣೆ ನಿಲ್ಲಿಸುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಾ.ಅನು ಶ್ರೀಧರ್ ವಿನಂತಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.