ETV Bharat / state

'ನೀವು ನಮಗೆ ಹಣ ಕೊಡ್ಬೇಡಿ, ನೀವೇ ಶಾಲಾ ಕಟ್ಟಡ ನಿರ್ಮಿಸಿ': ಕಾರ್ಪೊರೇಟ್ ಸಂಸ್ಥೆಗಳಿಗೆ ಡಿಕೆಶಿ ಕರೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನ ಜೆಡಬ್ಲ್ಯೂ ಮಾರಿಯೆಟ್ ಹೋಟೆಲ್​ನಲ್ಲಿಂದು ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಭಾಗವಹಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್
author img

By

Published : Aug 4, 2023, 10:49 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣ

ಬೆಂಗಳೂರು : ಪ್ರತಿಯೊಬ್ಬ ಪೋಷಕರ ಕನಸು ತಮ್ಮ ಮಕ್ಕಳಿಗೆ ಉತ್ತಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸುವುದಾಗಿದೆ. ಹೀಗಾಗಿ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಗ್ರಾಮೀಣ ಪ್ರದೇಶದಿಂದ ನಗರಗಳತ್ತ ವಲಸೆ ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗ್ರಾಮೀಣ ಭಾಗದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಮೂರು ವರ್ಷದಲ್ಲಿ 2 ಸಾವಿರ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಗುರಿ ಹಾಕಿಕೊಂಡಿದ್ದೇವೆ. ಕಾರ್ಪೊರೇಟ್ ಸಂಸ್ಥೆಗಳು ನಮಗೆ ಹಣ ನೀಡುವುದು ಬೇಡ, ನಾವು ಕಾರ್ಯಕ್ರಮದ ರೂಪುರೇಷೆ ನೀಡುತ್ತೇವೆ. ನೀವೇ ಕಟ್ಟಡ ನಿರ್ಮಾಣ ಮಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಗ್ರಾಮೀಣ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಮಾಡಲು ನಾನು ಪ್ರತ್ಯೇಕ ಕಾರ್ಯಕ್ರಮವನ್ನು ಆಲೋಚಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸಿದ್ದೇನೆ. ಪ್ರತಿ ಎರಡು ಪಂಚಾಯ್ತಿಗಳನ್ನು ಸೇರಿಸಿ ಪಬ್ಲಿಕ್ ಶಾಲೆ ಆರಂಭಿಸಬೇಕು. ಅದಕ್ಕೆ ಬೇಕಾಗಿರುವ ಜಾಗವನ್ನು ಸರ್ಕಾರದ ವತಿಯಿಂದ ನೀಡುತ್ತೇವೆ. ನೀವು ಅಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಿ. ಪ್ರಮುಖ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಯೋಗದಲ್ಲಿ ಈ ಶಾಲೆಗಳ ಜವಾಬ್ದಾರಿ ವಹಿಸಿಕೊಳ್ಳುವಂತೆ ನಾವು ಮಾಡುತ್ತೇವೆ ಎಂದರು.

ಈಗಾಗಲೇ ನಾನು ವಿಪ್ರೋ, ಇನ್ಫೋಸಿಸ್​ನಂತಹ ಪ್ರಮುಖ ಸಂಸ್ಥೆಗಳ ಜತೆ ಮಾತನಾಡಿದ್ದು, ಅವರು ಸಾವಿರ ಕೋಟಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲು ಸಿದ್ಧರಿದ್ದಾರೆ. ಮುಂದಿನ 3 ವರ್ಷಗಳಲ್ಲಿ ರಾಜ್ಯದ 2 ಸಾವಿರ ಗ್ರಾಮ ಪಂಚಾಯ್ತಿಗಳಲ್ಲಿ ಈ ಪಬ್ಲಿಕ್ ಶಾಲೆಗಳು ನಿರ್ಮಾಣವಾಗಲಿದ್ದು, ಸರ್ಕಾರದಿಂದ ಒಂದೇ ಒಂದು ರೂಪಾಯಿ ವೆಚ್ಚವಿಲ್ಲದೇ ನಿರ್ಮಾಣವಾಗಲಿದೆ ಎಂದು ನಾನು ಈ ವೇದಿಕೆ ಮೂಲಕ ನಮ್ಮ ಮುಖ್ಯಮಂತ್ರಿಗಳು ಹಾಗೂ ನಮ್ಮ ಸಹೋದ್ಯೋಗಿಗಳಿಗೆ ತಿಳಿಸಲು ಬಯಸುತ್ತೇನೆ ಎಂದು ಹೇಳಿದರು.

ಈ ವಿಚಾರದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಜವಾಬ್ದಾರಿ ಮಹತ್ವದ್ದಾಗಿದ್ದು, ನಾವು ಅವರಿಗೆ ಬೇಕಾದ ಎಲ್ಲಾ ಸಹಕಾರ ನೀಡಲು ಸಿದ್ಧರಿದ್ದೇವೆ. ನಾವು ಮೊದಲು ಪ್ರಾಥಮಿಕ ಶಿಕ್ಷಣದ ಬಗ್ಗೆ ಗಮನಹರಿಸೋಣ. ನಂತರ ಹಂತಹಂತವಾಗಿ ಕೌಶಲ್ಯಭಿವೃದ್ಧಿಯತ್ತ ಗಮನಹರಿಸೋಣ. ಆಗ ಸಮಾಜ ತಾನಾಗಿಯೇ ಅಭಿವೃದ್ಧಿ ಹೊಂದುತ್ತದೆ ಎಂದರು.

ಬೆಂಗಳೂರಿನಲ್ಲಿ ಇಂದು ಇರುವ ಜನಸಂಖ್ಯೆ ಎಷ್ಟು? ಇದು ಏರಿಕೆಯಾಗಲು ಕಾರಣವೇನು? ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವುದೇಕೆ? ನನ್ನ ಕ್ಷೇತ್ರದ 70 ಸಾವಿರ ಮತದಾರರು ಬೆಂಗಳೂರಿನಲ್ಲಿದ್ದಾರೆ. ಈ ವಿಚಾರವಾಗಿ ನಾನು ಸಮೀಕ್ಷೆ ನಡೆಸಿದಾಗ ವಲಸೆ ಬಂದಿರುವವರು ಶಿಕ್ಷಣ ಹಾಗೂ ಉದ್ಯೋಗ ಕಾರಣಕ್ಕಾಗಿ ಬಂದಿದ್ದಾರೆ. ಈ ವಲಸೆ ತಪ್ಪಿಸುವುದು ಹೇಗೆ? ಗ್ರಾಮೀಣ ಭಾಗದ ಜನರ ವಲಸೆಯನ್ನು ನಾವು ತಪ್ಪಿಸದಿದ್ದರೆ, ನಗರಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ನಗರ ಪ್ರದೇಶಕ್ಕೆ ಬಂದವರೆಲ್ಲರಿಗೂ ಉತ್ತಮ ಸವಲತ್ತು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪಂಚಾಯ್ತಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳ ಆರಂಭಿಸಲು ಚಿಂತನೆ: ನಾನು ರಾಮನಗರ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, ರಾಮನಗರದಲ್ಲಿ ನಮ್ಮ ಉದ್ಯಮಿಗಳು ನಮ್ಮ ಜಿಲ್ಲೆಯಲ್ಲೇ ವೆಚ್ಚ ಮಾಡಬೇಕು. ಮೂರ್ನಾಲ್ಕು ವರ್ಷಗಳ ಹಿಂದೆ ಟೊಯೋಟಾ ಕಂಪನಿಯವರ ಜತೆ ಚರ್ಚೆ ಮಾಡಿ ನಮ್ಮ ಜಿಲ್ಲೆಯಲ್ಲಿರುವ ಸುಮಾರು 300 ಶಾಲೆಗಳ ಜವಾಬ್ದಾರಿ ನೀಡಿದ್ದೆವು. ಅವರು ಅಲ್ಲಿ ಅತ್ಯುತ್ತಮ ಶೌಚಾಲಯ ಸೌಲಭ್ಯ ಕಲ್ಪಿಸಿದ್ದಾರೆ. ನಾವು ಈಗ ಹೊಸ ಯೋಜನೆ ರೂಪಿಸುತ್ತಿದ್ದು, ನಮ್ಮಲ್ಲಿ 6600 ಪಂಚಾಯ್ತಿಗಳಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾವಿ ಸಂಸ್ಥೆಗಳ ಜತೆ ಮಾತನಾಡಿದ್ದೇವೆ. ಪಂಚಾಯ್ತಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳ ಆರಂಭಿಸಲು ಚಿಂತನೆ ನಡೆಸಿದ್ದೇವೆ ಎಂದರು.

ನೀವು ಬೇರೆಲ್ಲೂ ಹಣ ವೆಚ್ಚ ಮಾಡಬೇಡಿ. ಶಿಕ್ಷಣ ಕ್ಷೇತ್ರದಲ್ಲಿ ಹಣ ಹೂಡಿಕೆ ಮಾಡಿ, ಕಾರ್ಯಕ್ರಮವನ್ನು ನಾವು ನೀಡುತ್ತೇವೆ. ನಾವು ಗ್ರಾಮೀಣ ಪ್ರದೇಶದ ಜನ ಶಿಕ್ಷಣ ಹಾಗೂ ಉದ್ಯೋಗ ಹುಡುಕಿಕೊಂಡು ನಗರ ಪ್ರದೇಶಕ್ಕೆ ಬರುವುದನ್ನು ತಪ್ಪಿಸಬೇಕು. ಇದು ಕರ್ನಾಟಕ ಸರ್ಕಾರದ ಬದ್ಧತೆ. ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದರೆ, ಅವರು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಈಗಿನ ತಂತ್ರಜ್ಞಾನದ ಮೂಲಕ ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಆಲೋಚನೆ ಮಾಡಬಹುದು ಎಂದು ತಿಳಿಸಿದರು.

ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾತನಾಡಿ, ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದರೊಂದಿಗೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರ ಒತ್ತು ನೀಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ನಿಮ್ಮ ಸಹಕಾರ ಮುಖ್ಯ. ಈ ಸಹಕಾರ ಹೀಗೆ ಮುಂದೆಯೂ ಇರಲಿ. ಮೂಲಸೌಕರ್ಯ ಮತ್ತು ಒಳ್ಳೆಯ ಶಿಕ್ಷಣದಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿ ರೂಪಗೊಳ್ಳುತ್ತದೆ ಎಂದರು.

ಹೋಬಳಿ ಮಟ್ಟದಲ್ಲಿ ಉತ್ತಮ ಶಾಲೆಗಳ ನಿರ್ಮಿಸೋಣ : ಕರ್ನಾಟಕ ಪಬ್ಲಿಕ್ ಶಾಲೆಗಳ ರೀತಿಯಲ್ಲಿ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿಯೂ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ. ಸರ್ಕಾರ ಸಮರ್ಪಕವಾದ ಸೌಕರ್ಯ ನೀಡಿದರೆ, ಮಕ್ಕಳು ಶಾಲೆಗಳಿಗೆ ಬರುತ್ತಾರೆ ಎನ್ನುವುದು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಸಾಬೀತಾಗಿದೆ. ಅದಕ್ಕಾಗಿ ನಿಮ್ಮ ಸಹಕಾರ ನಮಗೆ ಬೇಕಾಗುತ್ತದೆ. ರಾಜ್ಯದ ಶಾಲೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ವಿಶೇಷವಾಗಿ ಬಹಳ ಆಸಕ್ತಿವಹಿಸಿ ನಮಗೆ ಸಹಕಾರ ನೀಡಿದ್ದಾರೆ. ಹೋಬಳಿ ಮಟ್ಟದಲ್ಲಿ ಉತ್ತಮ ಶಾಲೆಗಳ ನಿರ್ಮಿಸೋಣ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಕ್ಕಳಿಗೆ ನೀಡಲಾಗುತ್ತಿದ್ದ ಮೊಟ್ಟೆಗಳನ್ನು ಹೆಚ್ಚಳ ಮಾಡಿದ್ದಾರೆ. ಮೊದಲು 1 ರಿಂದ 8 ವರೆಗೆ 1 ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಎರಡು ಮೊಟ್ಟೆಗಳನ್ನು 1 ರಿಂದ 10 ತರಗತಿಯವರೆಗೆ ನೀಡುತ್ತಿದ್ದೇವೆ.‌ ಮಕ್ಕಳು ವಿದ್ಯಾಭ್ಯಾಸದ ಜತೆಗೆ ಉತ್ತಮ ಆರೋಗ್ಯ ಪಡೆಯಲು ಇದು ಅನುಕೂಲ ಆಗುತ್ತದೆ. ಇದರಲ್ಲಿಯೂ ಸಿಎಸ್​ಆರ್ ಸಹಕಾರ ಇರಲಿ ಎಂದು ತಿಳಿಸಿದರು.

ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಅಭಿಯಾನದಲ್ಲಿ ಸ್ವಚ್ಛ ಬೆಂಗಳೂರು ವಿಭಾಗಕ್ಕೆ 10,479 ಸಲಹೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.